ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Bengaluru Metro: ಬೆಂಗಳೂರಿನಲ್ಲಿ ಮೆಟ್ರೋ ಕಾಮಗಾರಿ ವೇಳೆ ವಿದ್ಯುತ್‌ ಸ್ಪರ್ಶಿಸಿ ಕಾರ್ಮಿಕ ಸಾವು

ಬೆಂಗಳೂರಿನ ಟ್ರಿನಿಟಿ ಮೆಟ್ರೋ ನಿಲ್ದಾಣದ ಹೊರಭಾಗದಲ್ಲಿರುವ ಪಿಲ್ಲರ್ ಸಂಖ್ಯೆ 153ರ ಸಮೀಪ ಅರ್ಥ್ ಪಿಟ್ ಕಾಮಗಾರಿ ನಡೆಸುತ್ತಿದ್ದ ವೇಳೆ ವಿದ್ಯುತ್ ತಗುಲಿ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ. ದುರ್ಘಟನೆಗೆ ನಿಖರವಾದ ಕಾರಣವೇನು ಮತ್ತು ಸುರಕ್ಷತಾ ಕ್ರಮಗಳಲ್ಲಿ ಏನಾದರೂ ಲೋಪಗಳಿದ್ದವೇ ಎಂಬುದರ ಬಗ್ಗೆ ತಿಳಿಯಲು ಅಧಿಕಾರಿಗಳು ಸಮಗ್ರ ತನಿಖೆ ಆರಂಭಿಸಿದ್ದಾರೆ.

ಬೆಂಗಳೂರು: ನಗರದ ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ವಿದ್ಯುತ್ ಸರ್ಶಿಸಿ ಗುತ್ತಿಗೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ (electric shock) ಶುಕ್ರವಾರ ನಡೆದಿದೆ. ನಮ್ಮ ಮೆಟ್ರೋ ಪಿಲ್ಲರ್‌ಗೆ ಬೆಳಕಿನ ವ್ಯವಸ್ಥೆ ಕಾಮಗಾರಿ ವೇಳೆ ಅವಘಡ ನಡೆದಿದೆ.

ಕಾಮಗಾರಿ ಗುತ್ತಿಗೆಯನ್ನು ಎಂ/ಎಸ್ ಎಂ.ಆರ್. ಎಲೆಕ್ಟ್ರಿಕಲ್ಸ್ ಸಂಸ್ಥೆ ಪಡೆದುಕೊಂಡಿತ್ತು. ಈ ಸಂಸ್ಥೆಯ ಗುತ್ತಿಗೆ ಕಾರ್ಮಿಕರೊಬ್ಬರು ಇಂದು ಮಧ್ಯಾಹ್ನ ಟ್ರಿನಿಟಿ ಮೆಟ್ರೋ ನಿಲ್ದಾಣದ ಹೊರಭಾಗದಲ್ಲಿರುವ ಪಿಲ್ಲರ್ ಸಂಖ್ಯೆ 153ರ ಸಮೀಪ ನೆಲದಲ್ಲಿ ಅರ್ಥ್ ಪಿಟ್ ಕಾಮಗಾರಿ ನಡೆಸುತ್ತಿದ್ದರು. ಈ ವೇಳೆ ದುರದೃಷ್ಟವಶಾತ್ ಕಾರ್ಮಿಕನಿಗೆ ವಿದ್ಯುತ್ ತಗುಲಿ ಗಂಭೀರವಾಗಿ ಗಾಯಗೊಂಡಿದ್ದಾನೆ.

ವಿದ್ಯುತ್ ಸ್ಪರ್ಶದಿಂದ ಗಂಭೀರವಾಗಿ ಗಾಯಗೊಂಡ ಕಾರ್ಮಿಕನನ್ನು ತಕ್ಷಣವೇ ಸ್ಥಳದಲ್ಲಿದ್ದವರು ಸಮೀಪದ ಸೇಂಟ್ ಫಿಲೋಮಿನಾ ಆಸ್ಪತ್ರೆಗೆ ಕೊಂಡೊಯ್ದರು. ಆದರೆ, ದುರದೃಷ್ಟವಶಾತ್ ಆಸ್ಪತ್ರೆಗೆ ತಲುಪುವಷ್ಟರಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ದುರ್ಘಟನೆಗೆ ನಿಖರವಾದ ಕಾರಣವೇನು ಮತ್ತು ಸುರಕ್ಷತಾ ಕ್ರಮಗಳಲ್ಲಿ ಏನಾದರೂ ಲೋಪಗಳಿದ್ದವೇ ಎಂಬ ಕುರಿತು ಅಧಿಕಾರಿಗಳು ಸಮಗ್ರ ತನಿಖೆ ಆರಂಭಿಸಿದ್ದಾರೆ. ತನಿಖೆ ಪೂರ್ಣಗೊಂಡ ಬಳಿಕ ನಿಖರ ಕಾರಣ ತಿಳಿಸಲಾಗುವುದು ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಇನ್ನು, ಈ ದುರ್ಘಟನೆಯಲ್ಲಿ ಜೀವ ಕಳೆದುಕೊಂಡ ಕಾರ್ಮಿಕನ ಕುಟುಂಬದವರಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ ತೀವ್ರ ಸಂತಾಪ ಸೂಚಿಸಿದೆ.

ಹಾಸನದಲ್ಲಿ ಕಾರು ಡಿಕ್ಕಿಯಾಗಿ ಬಾಲಕನಿಗೆ ಗಂಭೀರ ಗಾಯ

ಹಾಸನ: ಅಪಘಾತದಲ್ಲಿ ಗಾಯಗೊಂಡಿದ್ದ ತನ್ನ ಅಜ್ಜನನ್ನು ಆಂಬ್ಯುಲೆನ್ಸ್‌ಲ್ಲಿ ಕರೆದೊಯ್ಯುವುದನ್ನು ನೋಡುತ್ತಾ ನಿಂತಿದ್ದ ಬಾಲಕನಿಗೆ ಕಾರು ಡಿಕ್ಕಿಯಾದ ಘಟನೆ ಸಕಲೇಶಪುರದ ಬಾಳೆಗದ್ದೆ ಗ್ರಾಮದ ಸಮೀಪ ನಡೆದಿದೆ. ಈ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Bengaluru triple murder: ಕೆ.ಆರ್‌. ಪುರ ತ್ರಿವಳಿ ಕೊಲೆ ಕೇಸ್‌; ಶ್ವೇತಾ ಪ್ರಿಯಕರ ಕೆನೆತ್‌ ಪುದುಚೇರಿಯಲ್ಲಿ ಅರೆಸ್ಟ್‌

ಭವಿಷ್ (16) ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬಾಲಕ. ಭವಿಷ್‌ನ ಅಜ್ಜ ಸಿದ್ದರಾಜು ಅವರಿಗೆ ಬೈಕ್ ಡಿಕ್ಕಿಯಾಗಿ, ಗಾಯಗೊಂಡಿದ್ದರು. ಅವರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ತಾತನಿದ್ದ ಆಂಬ್ಯುಲೆನ್ಸ್‌ ಹೋಗುವುದನ್ನು ನೋಡುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿಯಾಗಿದೆ. ಅಪಘಾತದ ಬಳಿಕ ಚಾಲಕ ಕಾರನ್ನು ನಿಲ್ಲಿಸದೇ ಅಲ್ಲಿಂದ ತೆರಳಿದ್ದಾನೆ.