ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Dinesh Gundu Rao ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಯೋಗ ಮಂದಿರ ಸ್ಥಾಪನೆ; ಸಚಿವ ದಿನೇಶ್ ಗುಂಡೂರಾವ್ ಘೋಷಣೆ

ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಬಳಿಕ ರಾಜ್ಯದ ಎಲ್ಲಾ ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಜನರಿಗೆ ಯೋಗದ ಕುರಿತು ಜಾಗೃತಿ ಮೂಡಿಸಲು ಯೋಗ ಮಂದಿರಗಳನ್ನು ಸ್ಥಾಪಿಸಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಘೋಷಿಸಿದ್ದಾರೆ.

ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಯೋಗ ಮಂದಿರ ಸ್ಥಾಪನೆ; ಆರೋಗ್ಯ ಸಚಿವ

Profile Vishakha Bhat Jun 22, 2025 8:55 AM

ಬೆಂಗಳೂರು: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಬಳಿಕ ರಾಜ್ಯದ ಎಲ್ಲಾ ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಜನರಿಗೆ ಯೋಗದ ಕುರಿತು ಜಾಗೃತಿ ಮೂಡಿಸಲು ಯೋಗ ಮಂದಿರಗಳನ್ನು ಸ್ಥಾಪಿಸಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಘೋಷಿಸಿದ್ದಾರೆ. ಬೆಂಗಳೂರಿನ ವಿಧಾನಸೌಧದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಾದ್ಯಂತ ಯೋಗವನ್ನು ಜನಪ್ರಿಯಗೊಳಿಸಲು ‘ಯೋಗ ಮಂದಿರ’ಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ಥಾಪಿಸಲಾಗುತ್ತದೆ. ಮೈಸೂರನ್ನು ಯೋಗ ಜಿಲ್ಲೆಯನ್ನಾಗಿ ಮಾಡುವ ಯೋಜನೆ ಇದೆ ಎಂದು ತಿಳಿಸಿದರು.

ವಿಶ್ವ ಮಟ್ಟದಲ್ಲಿ ಮನ್ನಣೆ ಪಡೆದಿರುವ ಯೋಗವನ್ನು ನಾವು ಹೆಚ್ಚಿನ ಜನರಿಗೆ ಪರಿಚಯಿಸಬೇಕಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಹಾಕಿಕೊಳ್ಳುತ್ತಿದೆ. ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಯೋಗ ಪರಿಚಯಿಸುವ ‘ಯೋಗ ಮಂದಿರ’ಗಳನ್ನು ಪ್ರಾರಂಭಿಸುವುದಾಗಿ ತಿಳಿಸಿದರು.

ಮೈಸೂರು ಜಿಲ್ಲೆಯನ್ನು ಯೋಗ ಜಿಲ್ಲೆಯನ್ನಾಗಿ ನಿರ್ಮಿಸುವತ್ತ ಈಗಾಗಲೇ ಯೋಜನೆ ರೂಪಿಸಲಾಗಿದೆ.‌ ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಮೈಸೂರು ಜಿಲ್ಲೆಯ ಪ್ರತಿ ಮನೆಗಳಲ್ಲಿ ಒಬ್ಬರಾದರೂ ಯೋಗಭ್ಯಾಸ ನಡೆಸುವ ರೀತಿಯಲ್ಲಿ ವ್ಯವಸ್ಥೆ ಕಲ್ಪಿಸಲು ಗುರಿ ಹೊಂದಲಾಗಿದೆ. ದೇಶದಲ್ಲಿಯೇ ಪ್ರಥಮ ಬಾರಿಗೆ ರಾಜ್ಯದಲ್ಲಿ ಒಂದು ಜಿಲ್ಲೆಯನ್ನು ಸಂಪೂರ್ಣವಾಗಿ ಯೋಗ ಜಿಲ್ಲೆಯನ್ನಾಗಿ ರೂಪಿಸುವತ್ತ ಹೆಜ್ಜೆ ಇಟ್ಟಿದ್ದೇವೆ. ರಾಜ್ಯದಲ್ಲಿ ಪರಂಪರಾಗತವಾಗಿ ಬಂದ ಅಷ್ಟಾಂಗ ಯೋಗಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ರಾಜ್ಯದ ಹಲವೆಡೆ ಯೋಗ ದಿನಾಚರಣೆಯ ಪ್ರಯುಕ್ತ ಯೋಗ ಪಾರ್ಕ್, ಯೋಗ ಧನುಷ್, ಹಸಿರು ಯೋಗ, ಯೋಗ ಮಹಾಕುಂಭ, ಯೋಗ ಸಂಯೋಗ, ಯೋಗ ಅನ್ ಪ್ಲಗ್ಸ್ ನಂತಹ ಕಾರ್ಯಕ್ರಮಗಳನ್ನು ಆಯುಷ್ ಇಲಾಖೆಯಿಂದ ಹಮ್ಮಿಕೊಳ್ಳಲಾಗಿದೆ. ಹಸಿರು ಯೋಗ ಕಾರ್ಯಕ್ರಮದ ಅಡಿಯಲ್ಲಿ 1 ಲಕ್ಷ ಗಿಡಗಳನ್ನ ನಡಲಾಗುವುದು. ಅಲ್ಲದೇ ಯೋಗ ಧನಷ್ ಎಂಬ ಕಾರ್ಯಕ್ರಮದ ಮೂಲಕ ರಾಜ್ಯದಾದ್ಯಂತ 5 ಲಕ್ಷ ಜನರಿಗೆ ಯೋಗ ಪ್ರೋಟೋಕಾಲ್ ಅನ್ನು ಹೇಳಿಕೊಡಲಾಗಿದ್ದು, ಕಾರ್ಯಕ್ರಮದ ಅಡಿಯಲ್ಲಿ 5000 ಶಾಲೆಗಳಲ್ಲಿ ಯೋಗ ಪ್ರೋಟೋಕಾಲ್ ಅನ್ನು ಮಾಡಲು ಕ್ರಮಕೈಗೊಳ್ಳಲಾಗಿದೆ ಎಂದು ದಿನೇಶ್‌ ಗುಂಡುರಾವ್‌ ಹೇಳಿದ್ದಾರೆ.