ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Bengaluru Murder: ಅಣ್ಣನ ಪ್ರೀತಿ ನಿರಾಕರಿಸಿದ ಯುವತಿಗೆ ತಮ್ಮನಿಂದ ಚಾಕು ಇರಿತ; ಚಿಕಿತ್ಸೆ ಫಲಿಸದೆ ಲಾ ವಿದ್ಯಾರ್ಥಿನಿ ಸಾವು

​ಬೆಂಗಳೂರಿನ ನಗರದ ಜೀವನ್ ಭೀಮಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಲಾ ವಿದ್ಯಾರ್ಥಿನಿಯನ್ನು ಯುವಕನೊಬ್ಬ ಪ್ರೀತಿಸುತ್ತಿದ್ದ. ಆದರೆ, ಆಕೆ ದೂರವಾದ ಹಿನ್ನೆಲೆಯಲ್ಲಿ ಯುವತಿಗೆ ತಮ್ಮ ಚಾಕುವಿನಿಂದ ಇರಿದಿದ್ದಾನೆ. ಯುವತಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.

ಬೆಂಗಳೂರು: ಸಹೋದರನ ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯನ್ನು ತಮ್ಮ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ (Bengaluru Murder) ನಗರದ ಜೀವನ್ ಭೀಮಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅಮೃತಾ ಹತ್ಯೆಯಾದ ಯುವತಿ. ಈಕೆಯನ್ನು ಹತ್ಯೆ ಮಾಡಿದ ಆರೋಪದಡಿ ಪ್ರಿಯಕರ ಧನುಷ್ ಹಾಗೂ ಆತನ ಸಹೋದರ ಸೂರ್ಯನನ್ನು ಬಂಧಿಸಲಾಗಿದೆ.

ಜುಲೈ 13ರಂದು ಘಟನೆ ನಡೆದಿದ್ದು, ಮೂರು ದಿನಗಳ ಕಾಲ ಆಸ್ಪತ್ರೆಯಲ್ಲಿದ್ದ ಅಮೃತಾ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಸಿ.ವಿ.ರಾಮನ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Bengaluru Murder (5)

ಎಚ್​​ಎಎಲ್ ಕೋಡಿಚಿಕ್ಕನಹಳ್ಳಿಯಲ್ಲಿ ಅಮೃತಾ ಕುಟುಂಬ ವಾಸವಾಗಿದ್ದು, ಈಕೆ ನಾಲ್ಕನೇ ವರ್ಷದ ಕಾನೂನು ಪದವಿ ವ್ಯಾಸಂಗ ಮಾಡುತ್ತಿದ್ದಳು. ಮೂರು ವರ್ಷಗಳ ಹಿಂದೆ ಓಂ ಶಕ್ತಿ ಮಾಲೆ ಹಾಕುವ ವೇಳೆ ಅಮೃತಾಗೆ ಧನುಷ್ ಪರಿಚಯವಾಗಿದ್ದ. ಈ ಪರಿಚಯ ನಂತರ ಪ್ರೀತಿಗೆ ತಿರುಗಿತ್ತು. ಆದರೆ, ಧನುಷ್ ತನಗೆ ಈಗಾಗಲೇ ಮದುವೆಯಾಗಿ ವಿಚ್ಛೇದನವಾಗಿದ್ದು, ಒಂದು ಮಗು ಇರುವುದನ್ನು ಮುಚ್ಚಿಟ್ಟಿದ್ದ. ಈ ಸತ್ಯ ತಿಳಿಯುತ್ತಿದ್ದಂತೆ ಅಮೃತಾ ಆತನಿಂದ ದೂರವಾಗಿದ್ದಳು.

ಇದರಿಂದ ಆಕ್ರೋಶಗೊಂಡ ಧನುಷ್‌ನ ತಮ್ಮ ಸೂರ್ಯ, ಅಣ್ಣನ ಪ್ರೀತಿ ನಿರಾಕರಿಸಿದವಳನ್ನು ಬಿಡುವುದಿಲ್ಲ ಎಂದು ಹೇಳಿಕೊಂಡು ಕಳೆದ ಜುಲೈ 13ರಂದು ಸಂಜೆ ಯುವತಿಯ ಮನೆಯ ಬಳಿ ತೆರಳಿ ಗಲಾಟೆ ಮಾಡಿ, ಆಕೆಯ ಬೆನ್ನು ಮತ್ತು ಎದೆಗೆ ಮನಬಂದಂತೆ ಚಾಕುವಿನಿಂದ ಇರಿದಿದ್ದ.

Viral Video: ಸಮೋಸ ನೀಡಲು ತಡವಾಗಿದ್ದಕ್ಕೆ ರಣರಂಗವಾದ ಬೇಕರಿ; ನೌಕರನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಗ್ರಾಹಕರು

ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಅಮೃತಾಳನ್ನು ತಕ್ಷಣವೇ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಮೂರು ದಿನಗಳ ಕಾಲ ಸಾವು-ಬದುಕಿನ ನಡುವೆ ಹೋರಾಡಿ ಚಿಕಿತ್ಸೆ ಫಲಕಾರಿಯಾಗದೇ, ಜುಲೈ 15ರಂದು ಸಂಜೆ ಆಸ್ಪತ್ರೆಯಲ್ಲಿ ಆಕೆ ಸಾವನ್ನಪ್ಪಿದ್ದಾಳೆ. ಸದ್ಯ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.