ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Self Harming: ವಿಧಾನಸೌಧದ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ!

Self Harming: ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಮೂಲದ ಸಂಜಯ್ ಎಂಬಾತ ಬೆಂಗಳೂರಿನ ವಿಧಾನಸೌಧದ ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ವಿಷ ಸೇವಿಸಿದ್ದೇನೆ ಎಂಬುದಾಗಿ ಸಂಜಯ್ ಹೇಳಿದ ಕಾರಣ, ಆತನನ್ನು ಆಸ್ಪತ್ರೆಗೆ ಪೊಲೀಸರು ದಾಖಲಿಸಿದ್ದಾರೆ.

ವಿಧಾನಸೌಧದ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ!

Profile Prabhakara R Apr 2, 2025 9:05 PM

ಬೆಂಗಳೂರು: ಶಕ್ತಿ ಸೌಧ ವಿಧಾನಸೌಧದ ಮುಂದೆಯೇ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ (Self Harming) ಯತ್ನಿಸಿರುವುದು ನಡೆದಿದೆ. ಪೊಲೀಸರು ನನಗೆ ಹೊಡೆದಿದ್ದಾರೆ, ನ್ಯಾಯ ಬೇಕು ಎಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಪೊಲೀಸರು ವಶಕ್ಕೆ ಪಡೆದು, ಆಸ್ಪತ್ರೆಗೆ ದಾಖಲಿಸಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಮೂಲದ ಸಂಜಯ್ ಎಂಬಾತ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ಮಫ್ತಿಯಲ್ಲಿದ್ದಂತ ವಿಧಾನಸೌಧ ಠಾಣೆಯ ಪೊಲೀಸರು ಸಂಜಯ್‌ನನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಪ್ಲಾಸ್ಟಿಕ್ ಕವರ್‌ನಲ್ಲಿ ವಿಷ ಹಾಗೂ ಕೆಲವು ದಾಖಲೆಗಳನ್ನು ಸಂಜಯ್ ತಂದಿದ್ದ. ಚನ್ನರಾಯಪಟ್ಟಣ ಠಾಣೆಯ ಪೊಲೀಸರು ನನಗೆ ಹೊಡೆದಿದ್ದಾರೆ. ನನಗೆ ನ್ಯಾಯ ಕೊಡಿಸಬೇಕು ಎಂಬುದಾಗಿ ವಿಷ ಸೇವಿಸಲು ಮುಂದಾಗಿದ್ದ. ಹೀಗಾಗಿ ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಷ ಸೇವಿಸಿದ್ದೇನೆ ಎಂಬುದಾಗಿ ಸಂಜಯ್ ಹೇಳಿದ ಕಾರಣ, ಆತನನ್ನು ಆಸ್ಪತ್ರೆಗೆ ಪೊಲೀಸರು ದಾಖಲಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Actress Ranya Rao: ನಟಿ ರನ್ಯಾ ರಾವ್‌ಗೆ ಮತ್ತೊಂದು ಶಾಕ್‌; ಡಿವೋರ್ಸ್‌ ಕೊಡಲು ಮುಂದಾದ ಪತಿ!

ಸಿಗದ ರಜೆ, ನೊಂದ ಕೆಎಸ್‌ಆರ್‌ಟಿಸಿ ಚಾಲಕ ಬಸ್‌ನಲ್ಲೇ ಆತ್ಮಹತ್ಯೆ

ಬೆಳಗಾವಿ: ಬೆಳಗಾವಿಯಲ್ಲಿ (Belagavi news) ಘೋರ ಘಟನೆ ನಡೆದಿದೆ. ತಮ್ಮ ಮನೆಯಲ್ಲಿಯೇ ನಡೆಯುತ್ತಿರುವ ಮದುವೆಗೆ ತೆರಳಲೂ ಮೇಲಧಿಕಾರಿಗಳು ರಜೆ (Leave) ಕೊಡಲಿಲ್ಲ ಎಂದು ತೀವ್ರವಾಗಿ ಮನನೊಂದ ಕೆಎಸ್ಆರ್ಟಿಸಿ ಚಾಲಕನೊಬ್ಬ (KSRTC driver) ಬಸ್‌ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (Self Harming) ಶರಣಾಗಿದ್ದಾನೆ. ಇಲ್ಲಿನ ಹಳೆ ಗಾಂಧಿ‌ನಗರದ ನಿವಾಸಿ ಬಾಲಚಂದ್ರ ಶಿವಪ್ಪ ಹುಕ್ಕೋಜಿ (47) ಸಾವಿಗೆ ಶರಣಾದವರು. ಶಹಾಪುರ ನಾಕಾದಿಂದ ವಡಗಾವಿಗೆ ಸಂಚರಿಸುವ ಬಸ್ಸಿನಲ್ಲಿ ಅವರು ಚಾಲಕರಾಗಿದ್ದರು.

ಮನೆಯಲ್ಲಿ ಬಾಲಚಂದ್ರ ಅವರ ಅಕ್ಕನ ಮಗಳ ಮದುವೆ ನಿಶ್ಚಯವಾಗಿತ್ತು. ಮದುವೆಗೆ ಕೆಲ ದಿನ ರಜೆ ಕೊಡುವಂತೆ ಡಿಪೊ‌ ಮ್ಯಾನೇಜರ್ ಬಳಿ ಅರ್ಜಿ ಸಲ್ಲಿಸಿದ್ದರು. ಆದರೆ ಅವರು ರಜೆ ಕೊಡದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದವರು ದೂರಿದ್ದಾರೆ.

ಜ್ಯೂಸ್‌ ಎಂದು ಭಾವಿಸಿ ಕಳೆನಾಶಕ ಸೇವಿಸಿ ಬಾಲಕಿ ಸಾವು

poison drink girl death

ಬೆಂಗಳೂರು: ಮಕ್ಕಳು ಇರುವ ಮನೆಯಲ್ಲಿ ವಿಷಕಾರಿ (Poison) ರಾಸಾಯನಿಕ ದ್ರವ್ಯಗಳಿದ್ದರೆ ಅವುಗಳನ್ನು ಎಚ್ಚರಿಕೆಯಿಂದ ಮಕ್ಕಳ ಕೈಗೆ ಸಿಗದಂತೆ ಇಡದಿದ್ದರೆ ಅನಾಹುತ ಕಟ್ಟಿಟ್ಟ ಬುತ್ತಿ. ಬೆಂಗಳೂರಿನಲ್ಲಿ (Bengaluru news) ಇಂಥಹುದೇ ದುರಂತ ಸಂಭವಿಸಿದೆ. ಜ್ಯೂಸ್ ಎಂದು ತಿಳಿದು ಅಲೋವೆರಾ ಡಬ್ಬದಲ್ಲಿದ್ದ ಕಳೆನಾಶಕ (Herbicide) ಔಷಧಿ ಕುಡಿದು ಬಾಲಕಿಯೊಬ್ಬಳು (girl death) ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬ್ಯಾಟರಾಯನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಿಧಿಕೃಷ್ಣ (14) ಎನ್ನುವ ಬಾಲಕಿ ಹೀಗೆ ವಿಷ ಸೇವಿಸಿ ಸಾವನ್ನಪ್ಪಿದ್ದಾಳೆ.

ಆರೋಗ್ಯ ಕಾಪಾಡಿಕೊಳ್ಳಲು ನಿಧಿ ಅಲೋವೆರಾ ಜ್ಯೂಸ್ ಕುಡಿಯುತ್ತಿದ್ದಳು. ಈ ನಡುವೆ ಕುಟುಂಬಸ್ಥರು ಅಲೋವೆರಾ ಜ್ಯೂಸ್ ಖಾಲಿಯಾದ ಡಬ್ಬದಲ್ಲಿ ಕಳೆನಾಶಕ ಔಷಧ ತುಂಬಿಟ್ಟಿದ್ದರು. ಮಾರ್ಚ್ 4ರಂದು ಜ್ಯೂಸ್ ಎಂದು ಭಾವಿಸಿ ನಿಧಿ ಹರ್ಬಿಸೈಡ್ ಔಷಧ ಕುಡಿದಿದ್ದಾಳೆ. ಅನಾರೋಗ್ಯ ತಲೆದೋರಿದ ಹಿನ್ನೆಲೆಯಲ್ಲಿ ತಕ್ಷಣ ನಿಧಿಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಾರ್ಚ್ 31ರಂದು ನಿಧಿ ಮೃತಪಟ್ಟಿದ್ದಾಳೆ. ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.