ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Interest Free loan: 83 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲI

ಪ್ರಸಕ್ತ ಸಾಲಿನ ರಾಜ್ಯ ಬಜೆಟ್‌ನಲ್ಲಿ ಸಹಕಾರ ಇಲಾಖೆಯ ಮೂಲಕ ರೈತರ ಆರ್ಥಿಕ ಸಬಲೀಕರಣಕ್ಕೆ ವಿಶೇಷ ಒತ್ತು ನೀಡಲಾಗಿದೆ. ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ ವಿತರಣೆ ಯ ಗುರಿಯನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸುವ ಜತೆಗೆ, ಕೃಷಿ ಮಾರುಕಟ್ಟೆಗಳ ಸಂಪೂರ್ಣ ಗಣಕೀಕರಣ ಹಾಗೂ ಜಿಲ್ಲಾ ಮಟ್ಟದಲ್ಲಿ ಸಹಕಾರ ಬ್ಯಾಂಕ್‌ಗಳ ಜಾಲವನ್ನು ವಿಸ್ತರಿಸುವ ಕುರಿತಾದ ಮಹತ್ವದ ಘೋಷಣೆಗಳನ್ನು ಸರಕಾರ ಮಾಡಿದೆ.

ಅನ್ನದಾತನ ಆದಾಯ ಹೆಚ್ಚಳಕ್ಕೆ ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆ ಅನುಷ್ಠಾನ

ಉತ್ಪಾದನೋತ್ತರ ಕೃಷಿ ಚಟುವಟಿಕೆಗಳಾದ ಸಂಸ್ಕರಣೆ, ಮೌಲ್ಯ ವರ್ಧನೆ, ಮೌಲ್ಯ ಸರಪಳಿ ಅಭಿವೃದ್ಧಿ, ಕೃಷಿ ತ್ಯಾಜ್ಯಗಳ ಮರುಬಳಕೆ ಹಾಗೂ ಮಾರುಕಟ್ಟೆ ಸಂಪರ್ಕಗಳನ್ನು ಸಮಗ್ರವಾಗಿ ಬಲಪಡಿಸುವ ಮೂಲಕ ಗ್ರಾಮೀಣ ರೈತರಿಗೆ ಸ್ಥಿರ ಮತ್ತು ಹೆಚ್ಚುವರಿ ಆದಾಯದ ಮೂಲಗಳನ್ನು ಸೃಜಿಸುವ ಉದ್ದೇಶದಿಂದ ‘ಮುಖ್ಯಮಂತ್ರಿ ಕೃಷಿ ವಿಸ್ತಾರ’ ಯೋಜನೆ ಮುಂದಿನ ಮೂರು ವರ್ಷಗಳಲ್ಲಿ 100 ಕೋಟಿ ರು. ವೆಚ್ಚದಲ್ಲಿ ರಾಜ್ಯ ಸರಕಾರ ಅನುಷ್ಠಾನಗೊಳಿಸಲಿದೆ.

ಪ್ರಸಕ್ತ ಸಾಲಿನ ರಾಜ್ಯ ಬಜೆಟ್‌ನಲ್ಲಿ ಸಹಕಾರ ಇಲಾಖೆಯ ಮೂಲಕ ರೈತರ ಆರ್ಥಿಕ ಸಬಲೀಕರಣಕ್ಕೆ ವಿಶೇಷ ಒತ್ತು ನೀಡಲಾಗಿದೆ. ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ ವಿತರಣೆ ಯ ಗುರಿಯನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸುವ ಜತೆಗೆ, ಕೃಷಿ ಮಾರುಕಟ್ಟೆಗಳ ಸಂಪೂರ್ಣ ಗಣಕೀಕರಣ ಹಾಗೂ ಜಿಲ್ಲಾ ಮಟ್ಟದಲ್ಲಿ ಸಹಕಾರ ಬ್ಯಾಂಕ್‌ಗಳ ಜಾಲವನ್ನು ವಿಸ್ತರಿಸುವ ಕುರಿತಾದ ಮಹತ್ವದ ಘೋಷಣೆಗಳನ್ನು ಸರಕಾರ ಮಾಡಿದೆ.

ಶೂನ್ಯ ಬಡ್ಡಿ: 70 ಸಾವಿರ ಕೋಟಿ ರು.ಕೃಷಿ ಸಾಲ ಕಳೆದ ಮೂರು ವರ್ಷಗಳಲ್ಲಿ ರಾಜ್ಯ ಸರಕಾರ 40 ಲಕ್ಷ ರೈತರಿಗೆ 468 ಕೋಟಿ ರು. ಮೊತ್ತದಲ್ಲಿ ಬಿತ್ತನೆ ಬೀಜಗಳಿಗೆ ಸಹಾಯಧನ ವಿತರಣೆ ಮಾಡಿದೆ. 2825 ಕೋಟಿ ರು. ವೆಚ್ಚ ಭರಿಸಿ 7 ಲಕ್ಷ ರೈತರಿಗೆ ಹನಿ ನೀರಾವರಿ ಘಟಕ ಸ್ಥಾಪನೆ ಹಾಗೂ 3.41 ಲಕ್ಷ ರೈತರಿಗೆ ಕೃಷಿ ಯಂತ್ರೋಪಕರಣಗಳ ವಿತರಣೆ ಮಾಡಿದೆ. 363 ಕೋಟಿ ರು. ಮೊತ್ತದಲ್ಲಿ 32,138 ಕೃಷಿ ಹೊಂಡಗಳ ನಿರ್ಮಾಣ ಮಾಡಲಾಗಿದೆ.

ಇದನ್ನೂ ಓದಿ: Karnataka Budget 2026: ಕೃಷಿ, ಹೈನುಗಾರಿಕೆ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಸಿಕ್ಕಿದ್ದೇನು? ಇಲ್ಲಿದೆ ಮಾಹಿತಿ

51 ಲಕ್ಷ ರೈತರಿಗೆ 6213 ಕೋಟಿ ಬೆಳೆ ವಿಮೆ ಪರಿಹಾರ ನೀಡಿದೆ. 36 ಲಕ್ಷ ನೀರಾವರಿ ಪಂಪ್‌ಸೆಟ್‌ಗಳಿಗೆ 48000 ಕೋಟಿ ರು.ಉಚಿತ ವಿದ್ಯುತ್ ಸಹಾಯಧನ ನೀಡಿದೆ. 83 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 70 ಸಾವಿರ ಕೋಟಿ ರು. ಕೃಷಿ ಸಾಲ ವಿತರಣೆ ಮಾಡಿದೆ.

ರಾಜ್ಯದಲ್ಲಿ ಸಿರಿಧಾನ್ಯ ಮತ್ತು ಸಾವಯವ ಉತ್ಪನ್ನಗಳನ್ನು ಉತ್ತೇಜಿಸಲು ನಿರ್ಮಿಸ ಲಾಗುತ್ತಿರುವ ʼʼಮಿಲೆಟ್ ಹಬ್‌ʼ ಅನ್ನು ರೈತರು, ಗ್ರಾಮೀಣ ಯುವಕರು ಮತ್ತು ನವ ಉದ್ಯಮಿಗಳಿಗೆ ತಾಂತ್ರಿಕ ಸಹಾಯ, ಸಂಸ್ಕರಣಾ ಸೌಲಭ್ಯ, ಗುಣಮಟ್ಟ ಪ್ರಮಾಣೀಕರಣ ಮತ್ತು ಮಾರುಕಟ್ಟೆ ಸಂಪರ್ಕಗಳನ್ನು ಒಂದೇ ಸೂರಿನಡಿ ಕಲ್ಪಿಸುವ ಏಕಗವಾಕ್ಷಿ ವ್ಯವಸ್ಥೆಯೊಂದಿಗೆ ಸ್ವಾವಲಂಬಿ ಸಂಸ್ಥೆಯನ್ನಾಗಿಸಲಾಗುತ್ತದೆ.

ರೈತರಿಗೆ ಮಣ್ಣು, ನೀರು, ಬೀಜ ಹಾಗೂ ರಸಗೊಬ್ಬರ ಪರೀಕ್ಷೆಗಳಲ್ಲಿ ನಿಖರ ಫಲಿತಾಂಶ ಗಳನ್ನು ಒದಗಿಸಿ ಕೃಷಿ ಉತ್ಪಾದಕತೆ ಹೆಚ್ಚಿಸಲು ಇಲಾಖೆಯ ಎಲ್ಲಾ ಪ್ರಯೋಗಾಲಯಗಳಿಗೆ ಎನ್‌ಎಬಿಎಲ್ ಮಾನ್ಯತೆ ಪಡೆದು ವಿಶ್ವಾಸಾರ್ಹ ಹಾಗೂ ವೈಜ್ಞಾನಿಕ ಪರೀಕ್ಷಣಾ ಸೇವೆ ಗಳನ್ನು ಒದಗಿಸಲಾಗುತ್ತದೆ.

ರೈತಸ್ನೇಹಿ ಕಾರ್ಯಕ್ರಮಗಳು

ಚಿತ್ರದುರ್ಗ ಜಿಲ್ಲೆಯ ಬಬ್ಬೂರಿನ ಜಿ ಕೃಷಿ ತರಬೇತಿ ಕೇಂದ್ರವನ್ನು ರಾಜ್ಯಮಟ್ಟದ ಕೃಷಿ ಉದ್ದಿಮೆ ತರಬೇತಿ ಕೇಂದ್ರವನ್ನಾಗಿ ಉನ್ನತೀಕರಿಸಲಾಗುತ್ತದೆ. ಕೃಷಿ ಚಟುವಟಿಕೆಯಲ್ಲಿ ರೈತರ ಸಮಯ ಹಾಗೂ ಶ್ರಮ ತಗ್ಗಿಸುವುದರೊಂದಿಗೆ ಉತ್ಪಾದನಾ ವೆಚ್ಚ ಕಡಿತಕ್ಕೆ ಅತ್ಯಾಧುನಿಕ ನಿಖರ ಬಿತ್ತನೆ ಮತ್ತು ನಾಟಿ ಯಂತ್ರಗಳನ್ನು ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿ ಸೇರ್ಪಡೆ.

ಕೃಷಿ ಸಂಬಂಧಿತ ಕಸುಬು ಮತ್ತು ಸ್ಥಳೀಯ ಗುಡಿ ಕೈಗಾರಿಕೆ ಪ್ರೋತ್ಸಾಹಿಸಲು ಹಾಗೂ ಸಣ್ಣ, ಅತೀ ಸಣ್ಣ ರೈತರಿಗೆ ಸ್ಥಳೀಯವಾಗಿ ಅಗತ್ಯವಿರುವ ಎತ್ತು ಚಾಲಿತ ಹಾಗೂ ಕೈಚಾಲಿತ ಉಪಕರಣಗಳನ್ನು ಕೃಷಿ ಯಾಂತ್ರೀಕರಣ ಯೋಜನೆಯಡಿ ಒದಗಿಸಲಾಗುವುದು.

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕನ್ನು ಸಂಪೂರ್ಣ ಸಾವಯವ ತಾಲ್ಲೂಕನ್ನಾಗಿ ಪರಿವರ್ತಿಸಲು ಅಧಿಕೃತ ಸಾವಯವ ಪ್ರಮಾಣೀಕರಣ ವ್ಯವಸ್ಥೆ ಜಾರಿ.

ಹವಾಮಾನ ಬದಲಾವಣೆಗೆ ಹೊಂದಾಣಿಕೆ ಹಾಗೂ ತಗ್ಗಿಸುವಿಕೆಯ ರಾಜ್ಯದ ಪ್ರಯತ್ನ ಬಲಪಡಿಸಿ ಕೃಷಿಯನ್ನು ಸುಸ್ಥಿರ ಹಾಗೂ ಪರಿಸರ ಸ್ನೇಹಿಯಾಗಿಸಲು ಭತ್ತದ ಕೃಷಿಯಲ್ಲಿ ನೀರಿನ ಬಳಕೆಯ ದಕ್ಷತೆ ಹೆಚ್ಚಳಕ್ಕೆ ಪರ್ಯಾಯ ತೇವ-ಒಣಗಿಸುವ ವಿಧಾನ ಉತ್ತೇಜನ.

ಅಂಕಿ ಅಂಶ

70 ಸಾವಿರ ಕೋಟಿ ರು. ಕೃಷಿ ಸಾಲ ವಿತರಣೆ

100 ಕೋಟಿ ರು. ವೆಚ್ಚದಲ್ಲಿ ‘ಮುಖ್ಯಮಂತ್ರಿ ಕೃಷಿ ವಿಸ್ತಾರ’ ಯೋಜನೆ ಅನುಷ್ಠಾನ

468 ಕೋಟಿ ರು. ಮೊತ್ತದಲ್ಲಿ ಬಿತ್ತನೆ ಬೀಜಗಳಿಗೆ ಸಹಾಯಧನ ವಿತರಣೆ

2825 ಕೋಟಿ ರು. ವೆಚ್ಚ ಭರಿಸಿ 7 ಲಕ್ಷ ರೈತರಿಗೆ ಹನಿ

ನೀರಾವರಿ ಘಟಕ ಸ್ಥಾಪನೆ

2.23 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹನಿ ನೀರಾವರಿ ಅಳವಡಿಸಿ

2.36 ಲಕ್ಷ ರೈತರಿಗೆ ಅನುಕೂಲ