ಬೆಂಗಳೂರು: ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಸ್ಥಳೀಯ ಸಂಸ್ಥೆ ಚುನಾವಣೆಗಳ ಮೀಸಲು ಅಧಿಸೂಚನೆಯನ್ನು ರಾಜ್ಯ ಸರಕಾರ ಹೊರಡಿಸಿದ್ದು, ಜನವರಿ ವೇಳೆಗೆ ಚುನಾವಣೆ ನಡೆಯುವುದು ಬಹುತೇಕ ಖಚಿತವಾಗಿದೆ. ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುವ ಬಗ್ಗೆ ಪದೇಪದೆ ರಾಜ್ಯ ಸರಕಾರ ಹೇಳುತ್ತಿದ್ದರೂ, ಮೀಸಲು ಅಧಿಸೂಚನೆ ಹೊರಡಿ ಸದೇ ಇದ್ದಿದ್ದರಿಂದ ಚುನಾವಣೆ ನಡೆಯುವ ಬಗ್ಗೆ ಹಲವು ಗೊಂದಲಗಳಿದ್ದವು. ಆದರೀಗ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಯಿಂದ ಅಂತಿಮ ಅಧಿಸೂಚನೆ ಹೊರಡಿಸಿದ್ದು, 30 ಜಿಲ್ಲೆಗಳ 1101 ಜಿಲ್ಲಾ ಪಂಚಾಯತಿ ಕ್ಷೇತ್ರ ಗಳಿಗೆ ಹಾಗೂ 234 ತಾಲೂಕುಗಳ 3580 ತಾಲೂಕು ಪಂಚಾಯತಿ ಸದಸ್ಯ ಸ್ಥಾನದ ಮೀಸಲನ್ನು ನಿಗದಿಪಡಿಸಿ ಪ್ರಕಟಿಸಿದೆ.
ಈ ಬಗ್ಗೆ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ, ರಾಜ್ಯ ಸರಕಾರ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಕ್ಷೇತ್ರಗಳ ಮೀಸಲು ಅಂತಿಮ ಅಧಿಸೂಚನೆ ಪ್ರಕಟಿಸಿದ್ದು, ಜನವರಿಯಲ್ಲಿ ಚುನಾವಣೆ ನಡೆಯಲಿದೆ.
2022ರಲ್ಲಿಯೇ ತಾಲೂಕು ಮತ್ತು ಜಿಲ್ಲಾ ಪಂಚಾಯತಿಗಳ ಅವಧಿ ಪೂರ್ಣವಾಗಿತ್ತು. ಹಿಂದಿನ ಸರಕಾರ ಚುನಾವಣೆ ನಡೆಸಿರಲಿಲ್ಲ. ನಮ್ಮ ಸರಕಾರ ಕೆಲವು ಪಂಚಾಯತಿಗಳನ್ನು ಮೇಲ್ದರ್ಜೆ ಗೇರಿಸಿದ್ದರಿಂದ ಹಾಗೂ ಕೆಲವು ಗ್ರಾಮ ಪಂಚಾಯತಿ ಕ್ಷೇತ್ರಗಳು ನಗರ ಸಭೆ, ನಗರಪಾಲಿಕೆ, ಮಹಾನಗರ ಪಾಲಿಕೆ ವ್ಯಾ ಪ್ತಿಗೆ ಸೇರಿದ ಪರಿಣಾಮವಾಗಿ ಕ್ಷೇತ್ರ ಪುನರ್ವಿಂಗಡಣೆ ಅನಿವಾರ್ಯ ವಾಗಿತ್ತು. ಆದ್ದರಿಂದ ಚುನಾ ವಣೆ ವಿಳಂಬವಾಯಿತು ಎಂದು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ: Panchayat season 5: ಪಂಚಾಯತ್ ಸೀಸನ್ 5 ಯಾವಾಗ ರಿಲೀಸ್? ಇಲ್ಲಿದೆ ಬಿಗ್ ಅಪ್ಡೇಟ್!
ಪಕ್ಷಗಳಲ್ಲಿ ತಯಾರಿ ಆರಂಭ: ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಮೀಸಲು ಪ್ರಕಟವಾ ಗುತ್ತಿದ್ದಂತೆ ಸ್ಥಳೀಯ ಮಟ್ಟದಲ್ಲಿ ರಾಜಕೀಯ ಲೆಕ್ಕಾಚಾರಗಳು ಶುರುವಾಗಿದೆ. ಮೂರು ಪಕ್ಷದಲ್ಲಿ ಯೂ ಟಿಕೆಟ್ಗಾಗಿ ರೇಸ್ ಜೋರಾಗಿದೆ. ಜಿಲ್ಲಾ ಹಾಗೂ ತಾಲೂಕು ಪಂಚಾಯತಿ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಸ್ಪಷ್ಟನೆ ಸಿಗದೇ ಇರುವುದರಿಂದ ಟಿಕೆಟ್ ಹಂಚಿಕೆ ವಿಷಯದಲ್ಲಿ ಸ್ಪಷ್ಟನೆ ಸಿಕ್ಕಿಲ್ಲ. ಇನ್ನು ಆಡಳಿತಾರೂಢ ಕಾಂಗ್ರೆಸ್ ನಿಂದ ಸ್ಪರ್ಧಿಸಲು ಹಲವು ಮುಖಂಡರು ಉತ್ಸಾಹ ತೋರಿದ್ದರೂ, ಆಶಾ ಕಾರ್ಯಕರ್ತರ ಪ್ರತಿಭಟನೆ, ಹಾಲು, ಮೊಸರು ಮತ್ತು ಬಸ್ ಪ್ರಯಾಣ ದರ ಏರಿಕೆ, ವಿಧಾನಪರಿಷತ್ ಚುನಾವಣೆಗಳಲ್ಲಿನ ಹಿನ್ನಡೆ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶದ ಮೇಲೆ ಪರಿಣಾಮ ಬೀರುವುದೇ ಎನ್ನುವ ಗೊಂದಲಕ್ಕೆ ಪಕ್ಷದ ಕಾರ್ಯಕರ್ತರು ಹಾಗೂ ಆಕಾಂಕ್ಷಿಗಳು ಬಿದ್ದಿದ್ದಾರೆ.
ಜಿಬಿಎಗೆ ಹಳೆಯ ಮತದಾರರ ಪಟ್ಟಿ ಬಳಕೆ: ರಾಜ್ಯ ಚುನಾವಣಾ ಆಯೋಗ
ಬೆಂಗಳೂರು: ಜಿಬಿಎ ವ್ಯಾಪ್ತಿಯ ಚುನಾವಣೆ ನಡೆಸಲು 2025ರ ರಾಜ್ಯದ ಮತದಾರರ ಪಟ್ಟಿಯನ್ನೇ ಬಳಸಿಕೊಳ್ಳಲು ರಾಜ್ಯ ಚುನಾವಣಾ ಆಯೋಗ ಸಿದ್ಧವಿದೆ. ಈ ಸಂಬಂಧ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ ಕೂಡಲೇ ರಾಜ್ಯದ ಮತದಾರರ ಪಟ್ಟಿ ಆಧರಿಸಿ ಚುನಾವಣೆ ನಡೆಸಲಾಗುವುದು ಎಂದು ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್.ಸಂಗ್ರೇಶಿ ತಿಳಿಸಿದರು. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಮೂಲಕ ಸಿದ್ಧಪಡಿಸಿ ರುವ ಅಂತಿಮ ಮತದಾರರ ಪಟ್ಟಿ ಬಳಸಬಾರದು. ಬದಲಿಗೆ 2025ರ ಮತದಾರರ ಪಟ್ಟಿಯನ್ನೇ ಬಳಸಬೇಕು ಎಂದು ಆಗ್ರಹಿಸಿ ಎಸ್ಐಆರ್ ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ ಮಂಗಳವಾರ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್.ಸಂಗ್ರೇಶಿಗೆ ಮನವಿ ಸಲ್ಲಿಸಿತು. ಈ ವೇಳೆ ಅವರು ಮೇಲಿನಂತೆ ಪ್ರತಿಕ್ರಿಯಿಸಿದರು.
ತಡವಾಗಿದ್ದೇಕೆ ?
2022ರಲ್ಲಿಯೇ ತಾಲೂಕು ಮತ್ತು ಜಿಲ್ಲಾ ಪಂಚಾಯತಿಗಳ ಅವಧಿ ಪೂರ್ಣವಾಗಿತ್ತು. ಹಿಂದಿನ ಸರಕಾರ ಚುನಾವಣೆಯನ್ನು ನಡೆಸಿರಲಿಲ್ಲ
ನಮ್ಮ ಸರಕಾರ ಕೆಲ ಪಂಚಾಯತಿಗಳನ್ನು ಮೇಲ್ದರ್ಜೆಗೇರಿಸಿದೆ, ಆದ್ದರಿಂದ ಕೆಲವೆಡೆ ಕ್ಷೇತ್ರ ಮರುವಿಂಗಡಣೆ ಮಾಡುವುದು ಅನಿವಾರ್ಯವಿತ್ತು
ಕೆಲ ಗ್ರಾಪಂ ಕ್ಷೇತ್ರಗಳು ನಗರಸಭೆ, ನಗರ ಪಾಲಿಕೆ, ಮಹಾನಗರ ಪಾಲಿಕೆ ವ್ಯಾಪ್ತಿಗೆ ಸೇರಿದ್ದರಿಂದ ಕ್ಷೇತ್ರಗಳನ್ನು ಪುನರ್ ವಿಂಗಡಣೆ ಮಾಡಲೇಬೇಕಾಯಿತು
ಹಲವು ಬದಲಾವಣೆಗಳು, ಆಡಳಿತಾತ್ಮಕ ಸುಧಾರಣೆಗಳ ಕಾರಣದಿಂದ ಪಂಚಾಯತಿ ಚುನಾವಣೆ ನಡೆಸುವುದು ವಿಳಂಬವಾಯಿತು: ಸಚಿವ ಈಶ್ವರ ಖಂಡ್ರೆ
![]()
ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿ ಘೋಷಿಸಿ ಚುನಾವಣೆ ನಡೆಸಲಿದೆ. ಬಹುತೇಕವಾಗಿ ಜನವರಿ ತಿಂಗಳಲ್ಲಿ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿಗಳಿಗೆ ಚುನಾವಣೆಗಳು ನಡೆಯಲಿವೆ. ಕಾಂಗ್ರೆಸ್ ಪಕ್ಷ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಿಸಲು ಸಂಪೂರ್ಣ ಸಜ್ಜಾಗಿದೆ.
-ಈಶ್ವರ್ ಖಂಡ್ರೆ, ಸಚಿವ