ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

BESCOM: ವಿದ್ಯುತ್ ಬಿಲ್ ಮೇಲೆ ಜಾತಿ ಗಣತಿ ಸಮೀಕ್ಷೆ ಪರಿಣಾಮ ಬೀರುತ್ತಾ? ಸ್ಪಷ್ಟನೆ ಕೊಟ್ಟ ಬೆಸ್ಕಾಂ

ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಮನೆಗಳನ್ನು ಗುರುತಿಸಿ ಪಟ್ಟಿ ಮಾಡುವ ಕಾರ್ಯಕ್ಕೆ ಬೆಸ್ಕಾಂ ಮೀಟರ್ ರೀಡರ್‌ಗಳು ನಿಯೋಜನೆಗೊಂಡಿದ್ದರಿಂದ ಕೆಲ ಗೃಹ ಜ್ಯೋತಿ ಗ್ರಾಹಕರ ಬಿಲ್‌ನಲ್ಲಿ ಆಗಿದ್ದ ವ್ಯತ್ಯಯವನ್ನು ಸರಿಪಡಿಸಿ ಪರಿಷ್ಕೃತ ಬಿಲ್ ವಿತರಿಸಲಾಗುವುದು ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ.

ಬೆಂಗಳೂರು: ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಮನೆಗಳನ್ನು ಗುರುತಿಸಿ ಪಟ್ಟಿ ಮಾಡುವ ಕಾರ್ಯಕ್ಕೆ ಬೆಸ್ಕಾಂ ಮೀಟರ್ ರೀಡರ್‌ಗಳು ನಿಯೋಜನೆಗೊಂಡಿದ್ದರಿಂದ ಕೆಲ ಗೃಹ ಜ್ಯೋತಿ ಗ್ರಾಹಕರ ಬಿಲ್‌ನಲ್ಲಿ ಆಗಿದ್ದ ವ್ಯತ್ಯಯವನ್ನು ಸರಿಪಡಿಸಿ ಪರಿಷ್ಕೃತ ಬಿಲ್ ವಿತರಿಸಲಾಗುವುದು ಎಂದು ಬೆಸ್ಕಾಂ (BESCOM) ಸ್ಪಷ್ಟಪಡಿಸಿದೆ.

ಸೆಪ್ಟೆಂಬರ್‌ನಲ್ಲಿ ಮೀಟರ್ ರೀಡರ್‌ಗಳು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಭಾಗವಾಗಿ ಮನೆಗಳನ್ನು ಪಟ್ಟಿ ಮಾಡುವ ಕಾರ್ಯ ಹಾಗೂ ಮೀಟರ್‌ ರೀಡಿಂಗ್‌ ಅನ್ನು ಪ್ರೋಬ್‌ಗಳ ಮೂಲಕ ಮೊದಲ ಬಾರಿಗೆ ನಡೆಸುತ್ತಿರುವುದರಿಂದ ವಿದ್ಯುತ್‌ ಬಿಲ್‌ ವಿತರಣೆಯ ದಿನಾಂಕವನ್ನು ಸೆ.15ನೇ ತಾರೀಕಿನಿಂದ 25ನೇ ತಾರೀಕಿನವರೆಗೆ ವಿಸ್ತರಿಸಲಾಗಿದೆ.

ಈ ಪ್ರಕ್ರಿಯೆಯಿಂದ ಕೆಲ ಪ್ರಕರಣಗಳಲ್ಲಿ ಗೃಹಜ್ಯೋತಿ ಗ್ರಾಹಕರಿಗೆ ಭಾಗಶಃ ಬಿಲ್‌ ಬಂದಿರುವುದು ಬೆಸ್ಕಾಂ ಗಮನಕ್ಕೆ ಬಂದಿದೆ. ಅವುಗಳನ್ನು ಕಳೆದ ತಿಂಗಳ ಸರಾಸರಿಯಂತೆ ಲೆಕ್ಕ ಹಾಕಿ, ಪರಿಷ್ಕೃತ ಬಿಲ್‌ ನೀಡಲಾಗುತ್ತದೆ. ಈ ಮೂಲಕ ಗೃಹಜ್ಯೋತಿ ಫಲಾನುಭವಿಗಳಿಗೆ ಯೋಜನೆಯ ಲಾಭ ಪಡೆಯುವಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಈ ಸುದ್ದಿಯನ್ನೂ ಓದಿ | Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ಕರೆಂಟ್‌ ಇರಲ್ಲ