ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Bidar Blast: ಬೀದರ್‌ನಲ್ಲಿ ನಿಗೂಢ ಸ್ಫೋಟ, ಆರು ಮಂದಿಗೆ ಗಾಯ, ಮೂವರು ಗಂಭೀರ

ಮೂವರ ಮುಖ, ಮೈ, ಕೈ ಸುಟ್ಟಿದ್ದು ಎಲ್ಲರನ್ನೂ ಬ್ರೀಮ್ಸ್ ಆಸ್ಪತ್ರೆ ದಾಖಲಿಸಲಾಗಿದೆ. ಅನ್ವರ್ ಪಷಾ ಎಂಬ ಯುವಕನ ಸ್ಥಿತಿ ಗಂಭೀರವಾಗಿದ್ದು, ಆತನನ್ನು ಹೆಚ್ಚಿನ ಚಿಕಿತ್ಸೆಗೆ ಹೈದ್ರಾಬಾದ್‌ಗೆ ರವಾನೆ ಮಾಡಲಾಗಿದೆ. ವಸ್ತು ಬ್ಲಾಸ್ಟ್‌ ಆದಾಗ ಪಕ್ಕದಲ್ಲೇ ಆರು ಜನ ಮಕ್ಕಳು ಮತ್ತು ಇಬ್ಬರು ಯುವರು ನಿಂತಿದ್ದರು ಎಂದು ತಿಳಿದು ಬಂದಿದೆ.

ಬೀದರ್‌ನಲ್ಲಿ ನಿಗೂಢ ಸ್ಫೋಟ

ಬೀದರ್, ಜ.30: ಅನುಮಾನಾಸ್ಪದ ವಸ್ತುವೊಂದು ಸ್ಫೋಟಗೊಂಡು (Bidar Blast) ಶಾಲೆಗೆ ಹೋಗುವ ಮಕ್ಕಳು ಸೇರಿದಂತೆ ಆರು ಮಂದಿ ಗಂಭೀರವಾಗಿ ಗಾಯಗೊಂಡ (injury) ಘಟನೆ ಬೀದರ್‌ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ. ಇವರಲ್ಲಿ ಮೂರು ಮಂದಿ ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ ಎಂದು ಗೊತ್ತಾಗಿದೆ.

ಮೂವರ ಮುಖ, ಮೈ, ಕೈ ಸುಟ್ಟಿದ್ದು ಎಲ್ಲರನ್ನೂ ಬ್ರೀಮ್ಸ್ ಆಸ್ಪತ್ರೆ ದಾಖಲಿಸಲಾಗಿದೆ. ಅನ್ವರ್ ಪಷಾ ಎಂಬ ಯುವಕನ ಸ್ಥಿತಿ ಗಂಭೀರವಾಗಿದ್ದು, ಆತನನ್ನು ಹೆಚ್ಚಿನ ಚಿಕಿತ್ಸೆಗೆ ಹೈದ್ರಾಬಾದ್‌ಗೆ ರವಾನೆ ಮಾಡಲಾಗಿದೆ. ವಸ್ತು ಬ್ಲಾಸ್ಟ್‌ ಆದಾಗ ಪಕ್ಕದಲ್ಲೇ ಆರು ಜನ ಮಕ್ಕಳು ಮತ್ತು ಇಬ್ಬರು ಯುವರು ನಿಂತಿದ್ದರು ಎಂದು ತಿಳಿದು ಬಂದಿದೆ. ಮತ್ತೊಬ್ಬ ಗಾಯಾಳು ಜಬ್ಬಾರ್ ಸಾಬ್ (65 ) ಎಂಬವರನ್ನು ಸೋಲ್ಲಾಪೂರ್ ಆಸ್ಪತ್ರೆಗೆ ರವಾನಿಸಲಾಗಿದೆ. ಆಸ್ಪತ್ರೆ ಆವರಣದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಸ್ಫೋಟಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ನಡೆಸುತ್ತಿದ್ದಾರೆ. ಸ್ಫೋಟಗೊಂಡದ್ದು ಹಳೆಯ ಸ್ಫೋಟಕವೇ, ಅಥವಾ ಕಲ್ಲು ಗಣಿಗಾರಿಕೆಗೆ ಬಳಸುವ ಜಿಲೆಟಿನ್‌ ಕಡ್ಡಿಗಳು ಬ್ಲಾಸ್ಟ್‌ ಆಗಿವೆಯೇ ಎಂಬ ಅನುಮಾನ ಮೂಡಿದೆ. ಕಳೆದ 6 ತಿಂಗಳಿನಲ್ಲಿ ಎರಡನೇ ಬಾರಿಗೆ ಸ್ಫೋಟ ಸಂಭವಿಸಿದ್ದು, ಸ್ಥಳೀಯರಲ್ಲಿ ಆತಂಕ ಮಡುಗಟ್ಟಿದೆ.

Haveri Accident: ಹಾವೇರಿ ಬಳಿ ಬಸ್-ಟ್ರ್ಯಾಕ್ಟರ್ ಮುಖಾಮುಖಿ ಡಿಕ್ಕಿಯಾಗಿ 15 ಜನಕ್ಕೆ ತೀವ್ರ ಗಾಯ

ಹರೀಶ್‌ ಕೇರ

View all posts by this author