ಬೀದರ್, ಮಾರ್ಚ್ 05: ಜಿಲ್ಲೆಯ ಬಸವಕಲ್ಯಾಣದಲ್ಲಿ (basavakalyana) ಮಾರ್ಚ್ 03ರ ತಡರಾತ್ರಿ ಭಾರಿ ಹೈಡ್ರಾಮಾ ನಡೆದಿದೆ. ಮುಸ್ಲಿಂ ಮೌಲ್ವಿಗಳ ಮೇಲೆ ಹಿಂದೂ ಯುವಕರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಇದರಿಂದ ಆಕ್ರೋಶಗೊಂಡ ಸಾವಿರಾರು ಮುಸ್ಲಿಂ ಸಮುದಾಯದ ಜನರು ಬಸವಕಲ್ಯಾಣ ನಗರ ಪೊಲೀಸ್ ಠಾಣೆ ಮುಂದೆ ಬೃಹತ್ ಪ್ರತಿಭಟನೆ (Muslims Protest) ನಡೆಸಿದ್ದು, ಮೌಲ್ವಿಗಳ ಮೇಲೆ ಹಲ್ಲೆ ಮಾಡಿದ ಹಿಂದೂ ಯುವಕರನ್ನು ನಮ್ಮ ವಶಕ್ಕೆ ಕೊಡುವಂತೆ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಮಾಹಿತಿಯ ಪ್ರಕಾರ, ಕೆಲವು ಹಿಂದೂ ಯುವಕರು ಮುಸ್ಲಿಂ ಮೌಲ್ವಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾದ ವಿಚಾರ ನಗರದಲ್ಲಿ ಕಾಡ್ಗಿಚ್ಚಿನಂತೆ ಹಬ್ಬಿದೆ. ಇದರಿಂದ ಕೆರಳಿದ ಮುಸ್ಲಿಂ ಸಮುದಾಯದ ಸಾವಿರಾರು ಯುವಕರು ಮತ್ತು ಮುಖಂಡರು ನಗರದ ಗಾಂಧಿ ವೃತ್ತದಲ್ಲಿರುವ ಪೊಲೀಸ್ ಠಾಣೆಯತ್ತ ಧಾವಿಸಿದ್ದಾರೆ. ‘ಹಲ್ಲೆ ನಡೆಸಿದವರ ವಿರುದ್ಧ ಎಫ್ಐಆರ್ ದಾಖಲಾಗಬೇಕು. ಇಲ್ಲ ಅವರನ್ನು ನಮ್ಮ ವಶಕ್ಕೆ ನೀಡಬೇಕು’ ಎಂದು ಪಟ್ಟು ಹಿಡಿದ ಪ್ರತಿಭಟನಾಕಾರರು ಠಾಣೆಯ ಮುಂಭಾಗದಲ್ಲಿ ಭಾರಿ ಗದ್ದಲ ಸೃಷ್ಟಿಸಿದ್ದಾರೆ. ಗದ್ದಲ ಗಲಾಟೆ ಮಾಡಬೇಡಿ ಎಂದು ಪೊಲೀಸರು ಮೈಕ್ನಲ್ಲಿ ಅನೌನ್ಸ್ ಮಾಡಿದರೂ ಸಹ ಕ್ಯಾರೇ ಎನ್ನದೇ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗುತ್ತಾ ಆಕ್ರೋಶ ಹೊರಹಾಕಿದ್ದಾರೆ.
ಪ್ರತಿಭಟನೆ ಕಾವು ಹೆಚ್ಚಾಗುತ್ತಿದ್ದಂತೆಯೇ ಪೊಲೀಸರು ಹಿಂದೂ ಯುವಕರ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಳಿಕ ಮುಸ್ಲಿಮರು ಪ್ರತಿಭಟನೆ ಕೈಬಿಟ್ಟಿದ್ದಾರೆ. ಇನ್ನು ಏಕಾಏಕಿ ಪ್ರತಿಭಟನೆ ಮಾಡಿದ್ದವರ ಪೈಕಿ 49 ಮುಸ್ಲಿಮರ ವಿರುದ್ಧವೂ ಸಹ ಪ್ರಕರಣ ದಾಖಲಾಗಿದೆ. ಈ ಪ್ರತಿಭಟನೆ ಹಿನ್ನೆಲೆ ಬಸವಕಲ್ಯಾಣ ನಗರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
Assault Case: ಖಮೇನಿ ಹತ್ಯೆ ಕುರಿತು ಸ್ಟೋರಿ ಹಾಕಿದ ಹಿಂದೂ ಯುವಕನ ಮೇಲೆ ಹಲ್ಲೆ