ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Bidar News: ಬೇಸಗೆ ಆರಂಭಕ್ಕೂ ಮುನ್ನ ಕುಡಿಯುವ ನೀರಿಗೆ ಹಾಹಾಕಾರ; ಬೀದರ್‌ನಲ್ಲಿ ಸಮಸ್ಯೆ

ಬೇಸಗೆ ಆರಂಭಕ್ಕೂ ಮುನ್ನವೇ ರಾಜ್ಯದ ವಿವಿಧ ಕಡೆಗಳಲ್ಲಿ ನೀರಿನ ಅಭಾವ ಕಂಡು ಬಂದಿದೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಜಂಬಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ತಾಂಡಾಗಳಲ್ಲಿ ಕುಡಿಯುವ ನೀರಿನ‌ ಸಮಸ್ಯೆ ಉಲ್ಬಣಿಸಿದೆ.

ಬೇಸಗೆ ಆರಂಭಕ್ಕೂ ಮುನ್ನ ಕುಡಿಯುವ ನೀರಿಗೆ ಹಾಹಾಕಾರ

ಸಾಂದರ್ಭಿಕ ಚಿತ್ರ.

Profile Ramesh B Jan 27, 2025 11:17 AM

ಬೀದರ್‌: ಬೇಸಗೆ ಆರಂಭಕ್ಕೂ ಮುನ್ನವೇ ರಾಜ್ಯದ ವಿವಿಧ ಕಡೆಗಳಲ್ಲಿ ನೀರಿನ ಅಭಾವ ಕಂಡು ಬಂದಿದೆ. ಬೀದರ್‌ನ ಕೆಲವು ತಾಂಡಾದಲ್ಲಿ ಈಗಾಗಲೇ ನೀರಿಗಾಗಿ ಹಾಹಾಕಾರ ಎದ್ದಿದೆ (Bidar News). ಕೊಡ ಹಿಡಿದು ನಳ್ಳಿಯ ಮುಂದೆ ಜನರು ಕ್ಯೂ ನಿಂತಿರುವುದು ಕಂಡು ಬಂದಿದ್ದು, ಈ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಜಂಬಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ತಾಂಡಾಗಳಲ್ಲಿ ಕುಡಿಯುವ ನೀರಿನ‌ ಸಮಸ್ಯೆ ಉಲ್ಬಣಿಸಿದೆ. ಜಂಬಿಗಿ ತಾಂಡಾ, ಗಾನಾ ತಾಂಡಾದಲ್ಲಿ ಈ ಸಮಸ್ಯೆ ಮೀತಿಮೀರಿದೆ.

ವಿದ್ಯಾರ್ಥಿಗಳು ಶಾಲೆ ತೊರೆದು ಕಿ.ಮೀ.ಗಟ್ಟಲೆ ದೂರ ಹೋಗಿ ನೀರು ತರುವ ಸ್ಥಿತಿ ನಿರ್ಮಾಣವಾಗಿದೆ. ಈಗಲೇ ಹೀಗಾದರೆ ಬೇಸಗೆಯಲ್ಲಿ ಹೇಗೆ ಎಂದು ತಾಂಡಾ ನಿವಾಸಿಗಳು ಪ್ರಶ್ನಿಸಿದ್ದಾರೆ. ತಾಂಡಾಗಳಿಗೆ ಕುಡಿಯುವ ನೀರು ಪೂರೈಸಿ ಎಂದು ಸ್ಥಳೀಯ ನಿವಾಸಿಗಳು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ.

ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರೀ ಮಳೆ

ಬೆಂಗಳೂರು: ಫೆಬ್ರವರಿ ಬರುತ್ತಿದ್ದಂತೆ ಚಳಿ ಕಡಿಮೆ ಆಗಿ ಬಿಸಿಲು ಹೆಚ್ಚುತ್ತಾ ಹೋಗುತ್ತದೆ. ಆದರೆ ಭಾರತೀಯ ಹವಾಮಾನ ಇಲಾಖೆ (IMD) ಮತ್ತೊಮ್ಮೆ ಶೀತ ಗಾಳಿಯ ಎಚ್ಚರಿಕೆಯನ್ನು ನೀಡಿದೆ. ಜತೆಗೆ ಕೆಲ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು (Rain Alert) ನೀಡಿದೆ. ಹಿಮಾಚಲ ಪ್ರದೇಶ, ರಾಜಸ್ಥಾನ ಮತ್ತು ಪಂಜಾಬ್‌ನಲ್ಲೂ ಶೀತಲ ಅಲೆ ಬೀಸುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.

ಪಶ್ಚಿಮ ಹಿಮಾಲಯ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ, ಉತ್ತರಾಖಂಡ ರಾಜ್ಯಗಳಲ್ಲಿ ಪಾಶ್ಚಾತ್ಯ ಅವಾಂತರಗಳು ಸಕ್ರಿಯವಾಗಿರುತ್ತವೆ. ಇದರಿಂದಾಗಿ, ಮೂರು ರಾಜ್ಯಗಳಲ್ಲಿ ಮಳೆ ಮತ್ತು ಹಿಮಪಾತವಾಗುವ ಸಾಧ್ಯತೆಯಿದೆ. ಮೊದಲ ಪಾಶ್ಚಿಮಾತ್ಯ ಅಡಚಣೆ ಜ. 29ರ ಸುಮಾರಿಗೆ ಮತ್ತು ಎರಡನೆಯದು ಫೆ. 1ರಂದು ಸಕ್ರಿಯಗೊಳ್ಳುವ ನಿರೀಕ್ಷೆಯಿದೆ ಎಂದು ಇಲಾಖೆ ತಿಳಿಸಿದೆ.

ಈ ಸುದ್ದಿಯನ್ನೂ ಓದಿ: State Film Awards: ಬಾಕಿ ಉಳಿದಿರುವ ಐದು ವರ್ಷಗಳ ರಾಜ್ಯ ಚಲನಚಿತ್ರ ಪ್ರಶಸ್ತಿ ಇದೇ ವರ್ಷ ಘೋಷಣೆ : ಕೆ.ವಿ.ಪ್ರಭಾಕರ್

ಕರ್ನಾಟಕದಲ್ಲಿ ಭಾರೀ ಮಳೆ ನಿರೀಕ್ಷೆ

ಜ. 29ರಿಂದ ಫೆ. 1ರವರೆಗೆ ಪಶ್ಚಿಮ ಹಿಮಾಲಯ ಪ್ರದೇಶ ಮತ್ತು ಪಕ್ಕದ ಬಯಲು ಪ್ರದೇಶಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ತಮಿಳುನಾಡು, ಪುದುಚೇರಿ, ಕೇರಳ, ಕರಾವಳಿ ಆಂಧ್ರಪ್ರದೇಶ ಮತ್ತು ಕರ್ನಾಟಕದಲ್ಲೂ ಮಳೆಯಾಗುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ. ಕೇರಳದಲ್ಲಿ ಈಗಾಗಲೇ ಯಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದ್ದು, 24 ಗಂಟೆಗಳಲ್ಲಿ 64.5 ಮಿ.ಮೀ.ನಿಂದ 115.5 ಮಿ.ಮೀ. ಮಳೆಯಾಗುವ ಸಾಧ್ಯತೆ ಇದೆ.