ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Bidar News: ಬೀದರ್‌ನ ಕಾರಂಜಾ ಡ್ಯಾಂನ ಕಾಲುವೆಗೆ ಬಿದ್ದು ತಂದೆ-ಮಗ ಸಾವು

ಕೈಕಾಲು ತೊಳೆದುಕೊಳ್ಳಲು ಕಾರಂಜಾ ಡ್ಯಾಂನ ಕಾಲುವೆಯಲ್ಲಿ ಕಾಲುವೆಗೆ ಯುವಕ ಇಳಿದಾಗ ಕಾಲು ಜಾರಿ ನೀರಿಗೆ ಬಿದ್ದಿದ್ದಾನೆ. ಮಗ ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡು ಆತನನ್ನು ರಕ್ಷಿಸಲು ತಂದೆ ತೆರಳಿದ್ದು, ಈ ವೇಳೆ ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಸಾಂದರ್ಭಿಕ ಚಿತ್ರ

ಬೀದರ್​​, ಫೆ.16: ಕಾರಂಜಾ ಡ್ಯಾಂನ ಕಾಲುವೆಗೆ ಬಿದ್ದು ತಂದೆ, ಮಗ ಮೃತಪಟ್ಟಿರುವ ಘಟನೆ ಬೀದರ್ (Bidar News) ಜಿಲ್ಲೆ ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿ ಗ್ರಾಮದ ಬಳಿ ನಡೆದಿದೆ. ಹಳ್ಳಿಖೇಡ್(ಬಿ) ಗ್ರಾಮದ ವಿಶ್ವನಾಥ (50) ಮತ್ತು ಅಮರೇಶ (23) ಮೃತರು. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೋಲಿಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ಭೇಟಿ ನೀಡಿ, ಮೃತ ದೇಹಗಳನ್ನು ಹೊರ ತೆಗೆದಿದ್ದಾರೆ.

ಬೀದರ್‌ನಲ್ಲಿ ಸಿಮೆಂಟ್ ಖಾಲಿ ಮಾಡಿ ವಾಪಸ್ ಊರಿನತ್ತ ತಂದೆ-ಮಗ ಇಬ್ಬರೂ ಹೋಗುತ್ತಿದ್ದರು. ಈ ವೇಳೆ ನೀರು ಕಂಡ ಹಿನ್ನೆಲೆ ಅಮರೇಶ್ ಕೈಕಾಲು ತೊಳೆದುಕೊಳ್ಳಲೆಂದು ಕಾಲುವೆಗೆ ಇಳಿದಿದ್ದ. ಆ ಸಂದರ್ಭ ಕಾಲು ಜಾರಿ ಕಾರಂಜಾ ಡ್ಯಾಂನ ಕಾಲುವೆಗೆ ಬಿದ್ದಿದ್ದಾನೆ. ಮಗ ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡ ತಂದೆ ವಿಶ್ವನಾಥ ಜಮಾದಾರ್ ಕೂಡಲೇ ಆತನ ರಕ್ಷಣೆಗೆಂದು ಹೋಗಿದ್ದಾರೆ. ಆದರೆ ದುರಾದೃಷ್ಟವಶಾತ್​​ ತಂದೆ-ಮಗ ಇಬ್ಬರೂ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಶಾಲಾ ಕಟ್ಟಡದಿಂದ ಜಿಗಿದು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಆತ್ಮಹತ್ಯೆ

ಚಿತ್ರದುರ್ಗ: ಶಾಲಾ ಕಟ್ಟಡದ 3ನೇ ಮಹಡಿಯಿಂದ ಹಾರಿ ಎಸ್‌ಎಸ್ಎಲ್‌ಸಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿತ್ರದುರ್ಗ ತಾಲೂಕಿನ ಭರಮಸಾಗರದಲ್ಲಿ ನಡೆದಿದೆ. ಇಲ್ಲಿನ ಡಿವಿಎಸ್ ವಸತಿ ಶಾಲೆಯ ವಿದ್ಯಾರ್ಥಿ ಕೊಟ್ರೇಶ್ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ತಿಳಿದುಬಂದಿದೆ.

ಚಿತ್ರದುರ್ಗ ತಾಲೂಕಿನ ಭರಮಸಾಗರದ ಡಿವಿಎಸ್ ಶಾಲೆಯಲ್ಲಿ ಈ ಒಂದು ದುರಂತ ನಡೆದಿದೆ. ಚಿತ್ರದುರ್ಗದ ಕರಿಯಣ್ಣನಹಳ್ಳಿ ನಿವಾಸಿಯಾಗಿರುವ ವಿದ್ಯಾರ್ಥಿ ಕೊಟ್ರೇಶ್ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕೊಟ್ರೇಶ್ ಶಾಲಾ ಕಟ್ಟಡದ 3ನೇ ಮಹಡಿಯಿಂದ ಕೆಳಕ್ಕೆ ಜಿಗಿದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ವಿದ್ಯಾರ್ಥಿಯ ಈ ತೀವ್ರ ನಿರ್ಧಾರಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಪರೀಕ್ಷೆಯ ಒತ್ತಡವೋ ಅಥವಾ ವೈಯಕ್ತಿಕ ಕಾರಣಗಳೋ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಭರಮಸಾಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.