ಬೀದರ್: ಪ್ರೀತಿಸುವಂತೆ ಸಹಪಾಠಿ ಒತ್ತಾಯಿಸಿದ್ದರಿಂದ ಬೇಸತ್ತು ಶಾಲೆಯ ಮಹಡಿ ಮೇಲಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಭೆಮಳಖೇಡ ಗ್ರಾಮದಲ್ಲಿ ನಡೆದಿದೆ. ಮದಿಯಾ ನಶೀರ್ ಪಾಷಾ (16) ಆತ್ಮಹತ್ಯೆ ಮಾಡಿಕೊಂಡ ಬಾಲಕಿ.
ಭೆಮಳಖೇಡ ಗ್ರಾಮದ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಗೆ ಲವ್ ಮಾಡುವಂತೆ ಸಹಪಾಠಿ ಚುಡಾಯಿಸುತ್ತಿದ್ದ. ಪ್ರೀತಿಸುವಂತೆ ಒತ್ತಡ ಹಾಕಿದ್ದರಿಂದ ಶಾಲಾ ಕಟ್ಟಡದ ಮೇಲಿಂದ ಜಿಗಿದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಶಂಕೆ ವ್ಯಕ್ತವಾಗಿದೆ. ಬಾಲಕಿಗೆ ಸಹಪಾಠಿ ಚುಡಾಯಿಸಿದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಭೆಮಳಖೇಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ನೀರಿನ ಸಂಪ್‌ಗೆ ಬಿದ್ದು ಎರಡೂವರೆ ವರ್ಷದ ಮಗು ಸಾವು
ನೆಲಮಂಗಲ: ಆಟವಾಡುವ ವೇಳೆ ನೀರಿನ ಸಂಪ್‌ಗೆ ಬಿದ್ದು ಎರಡೂವರೆ ವರ್ಷದ ಮಗು ಮೃತಪಟ್ಟಿರುವ (Child Death) ಘಟನೆ ಬೆಂಗಳೂರು ಉತ್ತರ ತಾಲೂಕಿನ (Bengaluru North) ಬ್ಯಾಡರಹಳ್ಳಿಯಲ್ಲಿ ನಡೆದಿದೆ. ಅಣ್ಣಯ್ಯ ಹಾಗೂ ಋತು ದಂಪತಿಯ ಮಗ ಚಿರಾಗ್ ಮೃತ ಮಗು ಎಂದು ಗುರುತಿಸಲಾಗಿದೆ.
ಟಿಪ್ಪರ್ ಲಾರಿ ಡಿಕ್ಕಿ; ಕಾಲೇಜು ಗೇಟಿನ ಎದುರೇ MBBS ವಿದ್ಯಾರ್ಥಿನಿ ಸಾವು
ದಂಪತಿ ಸಂಬಂಧಿಕರ ಮದುವೆಗೆ ತೆರಳಲು ರೆಡಿಯಾಗುತ್ತಿದ್ದರು. ಕಾರು ತೊಳೆಯಲು ಸಂಪಿನ ಕ್ಯಾಪ್ ತೆರೆದು ಅಣ್ಣಯ್ಯ ಮನೆಯೊಳಗೆ ತೆರಳಿದ್ದರು. ಈ ವೇಳೆ ಆಟವಾಡುತ್ತಿದ್ದ ಚಿರಾಗ್ ಸಂಪ್‌ಗೆ ಬಿದ್ದು ಮೃತ ಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಮನೆಯಿಂದ ಹೊರಬಂದು ನೋಡಿದಾಗ ಘಟನೆ ಬೆಳಕಿಗೆ ಬೆಳಕಿಗೆ ಬಂದಿದೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.