Khaji Arshad Ali: ವಿಧಾನ ಪರಿಷತ್ ಮಾಜಿ ಸದಸ್ಯ ಖಾಜಿ ಅರ್ಷದ್ ಅಲಿ ನಿಧನ
ವಿಧಾನ ಪರಿಷತ್ ಮಾಜಿ ಸದಸ್ಯ ಖಾಜಿ ಅರ್ಷದ್ ಅಲಿ ಅವರು ಬೀದರ್ ನಗರದಲ್ಲಿ ಸೋಮವಾರ (ಮಾ. 3) ಹೃದಯಾಘಾತದಿಂದ ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಪುತ್ರ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.


ಬೀದರ್: ವಿಧಾನ ಪರಿಷತ್ ಮಾಜಿ ಸದಸ್ಯ ಖಾಜಿ ಅರ್ಷದ್ ಅಲಿ (Khaji Arshad Ali) ನಗರದಲ್ಲಿ ಸೋಮವಾರ (ಮಾ. 3) ಹೃದಯಾಘಾತದಿಂದ ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಪುತ್ರ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಮಂಗಳವಾರ (ಮಾ. 4) ಮಧ್ಯಾಹ್ನ 1.30ಕ್ಕೆ ನಗರದ ಜಾಮೀಯಾ ಮಸೀದಿಯಲ್ಲಿ ಗೌರವ ಸಲ್ಲಿಸಿ ಬಳಿಕ ಭಾಲ್ಕಿಯ ಅವರ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
2 ಅವಧಿಗೆ ವಿಧಾನ ಪರಿಷತ್ ಸದಸ್ಯ, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಕೆಲಸ ನಿರ್ವಹಿಸಿದ್ದರು. ಉರ್ದು ಹಾಗೂ ಹಿಂದಿ ಭಾಷೆಯ ಎರಡು ಪತ್ರಿಕೆಗಳ ಮಾಲೀಕರಾಗಿದ್ದರು.
ಮಾಜಿ ವಿಧಾನಪರಿಷ್ಯತ ಸದಸ್ಯರು,ಆತ್ಮೀಯರು ಆಗಿದ್ದ ದಿ.ಕಾಜಿ ಅರಶದ್ ಅಲಿ ಅವರು ಹೃದಯಾಘಾತದಿಂದ ನಿಧನರಾದ ಸುದ್ದಿ ತಿಳಿದು ದುಃಖವಾಗುತ್ತಿದೆ.
— Bhagwanth Khuba (@bhagwantkhuba) March 3, 2025
ದೇವರು ಮೃತರ ಆತ್ಮಕ್ಕೆ ಶಾಂತಿಯನ್ನು ನೀಡಿ, ಅವರ ಕುಟುಂಬಸ್ಥರಿಗೆ ಈ ದುಃಖವನ್ನು ತಡೆಯುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
ಓಂ ಶಾಂತಿಃ 💐💐 pic.twitter.com/5T9P5GuNlf
ಗಣ್ಯರ ಸಂತಾಪ
ಖಾಜಿ ಅರ್ಷದ್ ಅಲಿ ನಿಧನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಮಾಜಿ ವಿಧಾನ ಪರಿಷತ್ ಸದಸ್ಯ ಅರವಿಂದ ಕುಮಾರ ಅರಳಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಈ ಸುದ್ದಿಯನ್ನೂ ಓದಿ: Vimala Rangachar: ಹಿರಿಯ ರಂಗ ಕಲಾವಿದೆ ವಿಮಲಾ ರಂಗಾಚಾರ್ ಇನ್ನಿಲ್ಲ
ಕಾಗವಾಡ ಶಾಸಕ ರಾಜು ಕಾಗೆ ಪುತ್ರಿ ನಿಧನ
ಚಿಕ್ಕೋಡಿ: ಕಾಗವಾಡ ಶಾಸಕ ರಾಜು ಕಾಗೆ (Raju Kage) ಅವರ ಹಿರಿಯ ಪುತ್ರಿ ಕೃತಿಕಾ ಅನಾರೋಗ್ಯ ಹಿನ್ನೆಲೆಯಲ್ಲಿ ಶನಿವಾರ (ಮಾ. 1) ನಿದನ ಹೊಂದಿದರು. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ನೇರ್ಲಿ ಗ್ರಾಮದ ಡಾ. ಅನಿಲ ಪಾಟೀಲ ಅವರನ್ನು ವರಿಸಿದ್ದ ರಾಜು ಕಾಗೆ ಅವರ ಪುತ್ರಿ ಕೃತಿಕಾ ರಾಜು ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಅಸುನೀಗಿದ್ದರು. ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಪಲಕಾರಿಯಾಗದೆ ಶನಿವಾರ ಇಹಲೋಕ ತ್ಯಜಿಸಿದ್ದರು.
ಭಾನುವಾರ ಬೆಳಗ್ಗೆ 10 ಗಂಟೆಗೆ ಕಾಗವಾಡ ಶಾಸಕ ರಾಜು ಕಾಗೆ ಅವರ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆದಿದೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಪಟ್ಟಣದಲ್ಲಿ ಅಂತ್ಯಕ್ರಿಯೆ ನೆರವೇರಿದೆ.