Bidar News: ಮಾತು ಬಾರದ ಮಹಿಳೆ ಬಾಯಿಗೆ ಬಟ್ಟೆ ತುರುಕಿ ಅನುಚಿತ ವರ್ತನೆ; ಆರೋಪಿ ಬಂಧನ
Physical Abuse: ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಹಳ್ಳಿಖೇಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಾತು ಬಾರದ ಮಹಿಳೆ ಬಾಯಿಗೆ ಬಟ್ಟೆ ತುರುಕಿ ವ್ಯಕ್ತಿಯೊಬ್ಬ ಅನುಚಿತವಾಗಿ ವರ್ತಿಸಿರುವ ಆರೋಪಿಯನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

-

ಬೀದರ್: ಮಾತು ಬಾರದ ಮಹಿಳೆ ಬಾಯಿಗೆ ಬಟ್ಟೆ ತುರುಕಿ ವ್ಯಕ್ತಿಯೊಬ್ಬ ಅನುಚಿತವಾಗಿ ವರ್ತಿಸಿರುವ ಘಟನೆ (Bidar News) ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಹಳ್ಳಿಖೇಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿಯನ್ನು ಅಬು ಪಾಷಾ ಎಂದು ಗುರುತಿಸಲಾಗಿದೆ. ಘಟನೆ ನಡೆದ ದಿನ ಸಂತ್ರಸ್ತೆಯ ತಾಯಿ ಕೂಲಿ ಕೆಲಸಕ್ಕೆ ಹೋಗಿದ್ದಾಗ ಆರೋಪಿ ವಿಕೃತಿ ಮೆರೆದಿದ್ದಾನೆ.
ಸಂತ್ರಸ್ತೆಯ ತಾಯಿ ಮನೆಗೆ ಮರಳುತ್ತಿದ್ದಂತೆ ಆಕೆಯನ್ನು ತಳ್ಳಿ ಆರೋಪಿ ಓಡಿಹೋಗಿದ್ದಾನೆ. ಕೂಡಲೇ ತಾಯಿ ಮಗಳ ಬಳಿ ಹೋಗಿ ಕೇಳಿದಾಗ ಸನ್ನೆ ಮಾಡಿ ನಡೆದ ವಿಷಯವನ್ನು ತಿಳಿಸಿದ್ದಾಳೆ. ಮಹಿಳೆ ಬಾಯಿಗೆ ಬಟ್ಟೆ ತುರುಕಿ, ಆಕೆಯ ಬಟ್ಟೆ ಹರಿದು ಮಾನಭಂಗ ಮಾಡಲು ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ.
ಈ ಕುರಿತು ಸಂತ್ರಸ್ತೆಯ ತಾಯಿ ಹಳ್ಳಿಖೇಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, 329(4), 79 BNS, ಹಾಗೂ ಕಲಂ 3(1)w, 3(2) SC/ST ಕಾಯ್ದೆಯಡಿ ಕೇಸ್ ದಾಖಲಾಗಿದೆ. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.
ಈ ಸುದ್ದಿಯನ್ನೂ ಓದಿ | Stabbing Case: ಬೆಂಗಳೂರಿನ ಪಿಜಿಯಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಚಾಕು ಇರಿದ ಯುವಕ!
ಜ್ಞಾನಭಾರತಿಯಲ್ಲಿ ಅಮಾನುಷ ಘಟನೆ, ಅತಿಥಿ ಉಪನ್ಯಾಸಕಿಗೆ ಐವರು ಲೆಕ್ಚರರ್‌ಗಳಿಂದ ಲೈಂಗಿಕ ಕಿರುಕುಳ
ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಬೆಂಗಳೂರು ವಿಶ್ವವಿದ್ಯಾಲಯ (Bengaluru University) ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ (Harassment) ಆರೋಪ ಹಿನ್ನೆಲೆಯಲ್ಲಿ ಐವರು ಉಪನ್ಯಾಸಕರ ವಿರುದ್ಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಾಗಿದೆ. ಐವರು ಲೆಕ್ಚರರ್‌ಗಳು ವಿವಿಧ ಸಂದರ್ಭಗಳಲ್ಲಿ ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ನೀಡಿದ್ದು, ಜ್ಞಾನಭಾರತಿ ಆವರಣದಲ್ಲೇ ಈ ಕೃತ್ಯ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಉಪನ್ಯಾಸಕರಾದ ಸ್ವರೂಪ ಕುಮಾರ್, ರಾಮಾಂಜನೇಯ ಸೇರಿದಂತೆ ಐವರು ಉಪನ್ಯಾಸಕರ ವಿರುದ್ಧ ಎಫ್ಐಆರ್ ದಾಖಲಾಗಿದೆ. FIR ದಾಖಲಾದ ಬೆನ್ನಲ್ಲೇ ಉಪನ್ಯಾಸಕರ ಹಲವು ವಿಡಿಯೋಗಳು ವೈರಲ್ ಆಗಿವೆ. ಮಕ್ಕಳಿಗೆ ಪಾಠ ಮಾಡುವ ಉಪನ್ಯಾಸಕರೇ ಕುಡಿದು ಮತ್ತರಾಗಿ ಬೇಕಾಬಿಟ್ಟಿ ವರ್ತಿಸಿದ, ಡ್ಯಾನ್ಸ್ ಮಾಡುವ ವಿಡಿಯೋ ವೈರಲ್ ಆಗಿವೆ. ಮದ್ಯ ಸೇವಿಸಿ ಅತಿಥಿ ಉಪನ್ಯಾಸಕ ರಾಮಾಂಜನೇಯ ಶರ್ಟ್ ಬಿಚ್ಚಿ ಬೆಂಗಳೂರು ವಿಶ್ವವಿದ್ಯಾಲಯ ಆವರಣದಲ್ಲಿ ಡ್ಯಾನ್ಸ್ ಮಾಡಿದ್ದಾನೆ. ಉಪನ್ಯಾಸಕ ರಾಮಾಂಜನೇಯ ವಿರುದ್ಧ ಇದೀಗ ಸಾಲು ಸಾಲು ಆರೋಪಗಳು ಕೇಳಿಬಂದಿವೆ.
ಕಣ್ಣು ಕಾಣದ ವಿದ್ಯಾರ್ಥಿಗೆ ಇಂಟರ್ನಲ್ ಮಾರ್ಕ್ಸ್ ನೀಡಲು ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ ಎಂದು ಈತನ ಮೇಲೆ ಆರೋಪಿಸಲಾಗಿದೆ. ನೇತ್ರಾನಂದ ಎಂಬ ಅಂಧ ವಿದ್ಯಾರ್ಥಿ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ಅಂಬೇಡ್ಕರ್ ಜಯಂತಿ ಆಚರಣೆಯಲ್ಲಿ ವಿದ್ಯಾರ್ಥಿನಿ ಜೊತೆಗೆ ಕುಡಿದು ಡ್ಯಾನ್ಸ್ ಮಾಡಿದ್ದಾನೆ ಎಂದು ಹೇಳಲಾಗಿದೆ. ವಿದ್ಯಾರ್ಥಿಯನ್ನು ಎತ್ತಿಕೊಂಡು ಉಪನ್ಯಾಸಕ ಡ್ಯಾನ್ಸ್ ಮಾಡಿರುವ ವಿಡಿಯೋ ಸಹ ವೈರಲ್ ಆಗಿದೆ.
ಈ ಸುದ್ದಿಯನ್ನೂ ಓದಿ | Physical Assault: ಬಾಲಕಿಯನ್ನು ತುಂಡರಿಸಿ 2 ಚೀಲಗಳಲ್ಲಿ ತುಂಬಿದ ನೀಚ! ಶಿಕ್ಷಕನ ಚಪಲಕ್ಕೆ ವಿದ್ಯಾರ್ಥಿನಿ ಬಲಿ
ಜವಾಬ್ದಾರಿಯಿಂದ ವರ್ತಿಸಬೇಕಾದ ಉಪನ್ಯಾಸಕರು ಬೇಜವಾಬ್ದಾರಿಯಿಂದ ವರ್ತಿಸುವ ಘಟನೆಗೆ ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಹೆತ್ತವರು ಆತಂಕ ಮತ್ತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಂದೊಮ್ಮೆ ಜ್ಞಾನಭಾರತಿ ಆವರಣದಲ್ಲಿ ವಿದ್ಯಾರ್ಥಿನಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಸುಲಿಗೆ, ಕಳವು ಪ್ರಕರಣಗಳೂ ಇಲ್ಲಿ ನಡೆದಿವೆ.