Bidar Rain: ಬೀದರ್‌ನಲ್ಲಿ ಮಳೆ ಅಬ್ಬರ; ಸಿಡಿಲು ಬಡಿದು ಯುವರೈತ ಸಾವು
Lightning strike: ಬೇಸಿಗೆಯ ಬಿರುಬಿಸಿಲಿನ ನಡುವೆ ಬೀದರ್ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರಿಸುತ್ತಿದೆ. ಇದೇ ರೀತಿ ಮುಂದಿನ 6 ದಿನ ಗುಡುಗು ಸಹಿತ ಮಳೆಯ ಆರ್ಭಟ ಮುಂದುವರಿಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಏಪ್ರಿಲ್ 1ರಂದು 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮೃತ ರೈತ ರಾಹುಲ್ ಭಾಸ್ಕರ್ -
ಬೀದರ್, ಮಾರ್ಚ್ 31: ಕೃಷಿ ಚಟುವಟಿಕೆಗಾಗಿ ಜಮೀನಿಗೆ ಹೋಗಿದ್ದಾಗ ಸಿಡಿಲು ಬಡಿದು ಯುವರೈತ ಮೃತಪಟ್ಟಿರುವ ದಾರುಣ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬಾದಲಗಾಂವ ಗ್ರಾಮದಲ್ಲಿ ನಡೆದಿದೆ. ರಾಹುಲ್ ಭಾಸ್ಕರ್ (25) ಮೃತ ರೈತ.
ಕೆಲಸದ ನಿಮಿತ್ತ ರಾಹುಲ್ ಜಮೀನಿಗೆ ತೆರಳಿದ್ದ ವೇಳೆ ಏಕಾಏಕಿ ಮಳೆ ಆರಂಭವಾಗಿದೆ. ಈ ವೇಳೆ ಸಿಡಿಲು ಬಡಿದು ದುರಂತ ಸಂಭವಿಸಿದೆ. ಕುಟುಂಬಕ್ಕೆ ಆಧಾರಸ್ತಂಭವಾಗಿದ್ದ ಯುವಕನ ಸಾವಿನಿಂದ ಪೋಷಕರು ಕಂಗಾಲಾಗಿದ್ದಾರೆ. ಬೀದರ್, ಔರಾದ್, ಭಾಲ್ಕಿ ಸೇರಿ ಮುಂಜಾನೆ ಹಲವೆಡೆ ಮಳೆಯಾಗಿದೆ. ಘಟನಾ ಸ್ಥಳಕ್ಕೆ ಪೋಲಿಸರು ಹಾಗೂ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಾಳೆಯೂ ರಾಜ್ಯದ ವಿವಿಧೆಡೆ ಮಳೆ ಅಬ್ಬರ ಸಾಧ್ಯತೆ
ಬೇಸಿಗೆಯ ಬಿರುಬಿಸಿಲಿನ ನಡುವೆಯೂ ಬೀದರ್ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರಿಸುತ್ತಿದ್ದು, ಮುಂದಿನ 6 ದಿನ ಗುಡುಗು ಸಹಿತ ಮಳೆಯ ಆರ್ಭಟ ಮುಂದುವರಿಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಏಪ್ರಿಲ್ 1ರಂದು 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಯಲ್ಲಿ ಬುಧವಾರ ಸಾಧಾರಣ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ತಿಳಿಸಿದೆ.
Health Benefits of Mint: ಬೇಸಿಗೆಯಲ್ಲೂ ತಂಪಾಗಿಸುವ ಪುದೀನಾದ ಸತ್ವಗಳು ಗೊತ್ತೇ?
ಮುಂದಿನ 5 ದಿನಗಳವರೆಗೆ ರಾಜ್ಯದಾದ್ಯಂತ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ. ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ. ಸಂಜೆ / ರಾತ್ರಿಯ ವೇಳೆಗೆ ಕೆಲವು ಪ್ರದೇಶಗಳಲ್ಲಿ, ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 34°C ಮತ್ತು 22°C ಇರುವ ಸಾಧ್ಯತೆ ಇದೆ.