Karnataka Weather: ಇಂದು ಬೀದರ್, ವಿಜಯಪುರ ಸೇರಿ ಈ ಜಿಲ್ಲೆಗಳಲ್ಲಿ ಶೀತ ಗಾಳಿ ಎಚ್ಚರಿಕೆ
Karnataka Weather: ಇಂದು ಬೀದರ್, ವಿಜಯಪುರ ಸೇರಿ ಈ ಜಿಲ್ಲೆಗಳಲ್ಲಿ ಶೀತ ಗಾಳಿ ಎಚ್ಚರಿಕೆ
Prabhakara R
December 19, 2024
ಬೆಂಗಳೂರು: ಡಿ.19ರಂದು ರಾಜ್ಯಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದ್ದು, ಬೀದರ್, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ತೀವ್ರ ಶೀತ ಗಾಳಿ ಬೀಸುವ ಸಾಧ್ಯತೆಯಿದೆ. ಅಲ್ಲಿ ತಾಪಮಾನವು 6 ರಿಂದ 7 ಡಿಗ್ರಿ ಸೆಲ್ಸಿಯಸ್ ಆಗಿರುತ್ತದೆ, ಇದು ಸಾಮಾನ್ಯಕ್ಕಿಂತ 6-7 ° ಸೆ ಕಡಿಮೆ ಇರುತ್ತದೆ. ಇನ್ನು ಯಾದಗಿರಿ, ರಾಯಚೂರು ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಶೀತ ಗಾಳಿ ಇರುವ ಸಾಧ್ಯತೆಯಿದೆ. ಅಲ್ಲಿ ತಾಪಮಾನವು ಸುಮಾರು 10 ಡಿಗ್ರಿ ಸೆಲ್ಸಿಯಸ್ ಇರುತ್ತದೆ, ಇದು ಸಾಮಾನ್ಯಕ್ಕಿಂತ 4-5 ° C ಗಿಂತ ಕಡಿಮೆ ಇರುತ್ತದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ಮಂಜು/ದಟ್ಟ ಮಂಜು ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather) ಮುನ್ಸೂಚನೆ ನೀಡಿದೆ.
ಡಿ.20ರಂದು ರಾಜ್ಯಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ. ಬೀದರ್, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ತೀವ್ರ ಶೀತ ಅಲೆಗಳ ಪರಿಸ್ಥಿತಿ ಇರುವ ಸಾಧ್ಯತೆಯಿದೆ. ಅಲ್ಲಿ ತಾಪಮಾನವು 6 ರಿಂದ 7 ಡಿಗ್ರಿ ಸೆಲ್ಸಿಯಸ್ ಆಗಿರುತ್ತದೆ, ಇದು ಸಾಮಾನ್ಯಕ್ಕಿಂತ 6-7 ° ಸೆ ಕಡಿಮೆ ಇರುತ್ತದೆ. ಯಾದಗಿರಿ, ರಾಯಚೂರು ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಶೀತ ಅಲೆ ಸಾಧ್ಯತೆಯಿದೆ. ಅಲ್ಲಿ ತಾಪಮಾನವು ಸುಮಾರು 10 ಡಿಗ್ರಿ ಸೆಲ್ಸಿಯಸ್ ಇರುತ್ತದೆ, ಇದು ಸಾಮಾನ್ಯಕ್ಕಿಂತ 4-5 ° C ಗಿಂತ ಕಡಿಮೆ ಇರುತ್ತದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ಮಂಜು/ದಟ್ಟ ಮಂಜು ಇರುವ ಸಾಧ್ಯತೆಯಿದೆ.
ಇನ್ನು ಡಿ.21ರಂದು ಚಾಮರಾಜನಗರ ಮತ್ತು ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ.
ಡಿ.22ರಂದು ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ತುಮಕೂರು, ಮೈಸೂರು, ಮಂಡ್ಯ, ಹಾಸನ, ಬಳ್ಳಾರಿ, ವಿಜಯನಗರ ಮತ್ತು ಚಿತ್ರದುರ್ಗ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ರಾಯಚೂರು, ಗದಗ, ಹಾವೇರಿ ಮತ್ತು ಕೋಪಳ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ.
ಡಿ. 23ರಂದು ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ತುಮಕೂರು, ಮೈಸೂರು, ಮಂಡ್ಯ, ಹಾಸನ, ಬಳ್ಳಾರಿ, ವಿಜಯನಗರ ಮತ್ತು ಚಿತ್ರದುರ್ಗ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ರಾಯಚೂರು, ಗದಗ, ಹಾವೇರಿ ಮತ್ತು ಕೋಪಳ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ.
ಡಿ. 24ರಂದು ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ತುಮಕೂರು, ಮೈಸೂರು, ಮಂಡ್ಯ, ಹಾಸನ, ಬಳ್ಳಾರಿ, ವಿಜಯನಗರ ಮತ್ತು ಚಿತ್ರದುರ್ಗ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ರಾಯಚೂರು, ಗದಗ, ಹಾವೇರಿ ಮತ್ತು ಕೋಪಳ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ.
ತಾಪಮಾನದ ಮುನ್ಸೂಚನೆಉತ್ತರ ಒಳನಾಡಿನ ಬೀದರ್, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಮುಂದಿನ 3 ದಿನಗಳವರೆಗೆ ಸಾಮಾನ್ಯ ತಾಪಮಾನದಿಂದ 6-7 ° C ಕಡಿಮೆ ಮತ್ತು ಯಾದಗಿರಿ, ರಾಯಚೂರು ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಮಾನ್ಯದಿಂದ 4-5 ° C ಕಡಿಮೆ ಇರುವ ಸಾಧ್ಯತೆ ಇದೆ. ನಂತರ ಉತ್ತರ ಒಳನಾಡಿನಲ್ಲಿ ಕನಿಷ್ಠ ತಾಪಮಾನದಲ್ಲಿ ಕ್ರಮೇಣ ಹೆಚ್ಚಳವಾಗಲಿದೆ. ಮುಂದಿನ 3 ದಿನಗಳವರೆಗೆ ಸಾಮಾನ್ಯ ತಾಪಮಾನದಿಂದ ಕನಿಷ್ಠ ತಾಪಮಾನ 2-3 °C ಇಳಿಕೆ ಮತ್ತು ನಂತರ ದಕ್ಷಿಣ ಅಂತರಿಕ ಕರ್ನಾಟಕದಲ್ಲಿ ಕನಿಷ್ಠ ತಾಪಮಾನದಲ್ಲಿ ಕ್ರಮೇಣ ಹೆಚ್ಚಳ. ಕರಾವಳಿ ಕರ್ನಾಟಕದ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ.
ಡಿ.20ರ ಬೆಳಗ್ಗೆವರೆಗಿನ ಬೆಂಗಳೂರು, ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:ಮುಂದಿನ 24 ಗಂಟೆಗಳ ಕಾಲ ಮುಖ್ಯವಾಗಿ ನಿರ್ಮಲ ಆಕಾಶ ಇರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು/ದಟ್ಟ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 25 ° C ಮತ್ತು 15 ° C ಇರುವ ಸಾಧ್ಯತೆ ಇದೆ.
ಈ ಸುದ್ದಿಯನ್ನೂ ಓದಿ | Sunita Williams: ಗಗನಯಾತ್ರಿ ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುವ ದಿನಾಂಕ ಮತ್ತೆ ಮುಂದೂಡಿಕೆ; ನಾಸಾ ಹೇಳಿದ್ದಿಷ್ಟು