ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

RSS: ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾದ ಅಡುಗೆ ಸಿಬ್ಬಂದಿ ವಜಾ

Bidar News: ಬೀದರ್‌ ಜಿಲ್ಲೆಯ ಬಸವಕಲ್ಯಾಣದಲ್ಲಿ ನಡೆದ ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಸುಮಾರು 20ಕ್ಕೂ ಹೆಚ್ಚು ಸರ್ಕಾರಿ ಅಧಿಕಾರಿಗಳು ಭಾಗಿಯಾಗಿದ್ದಾರೆ ಎನ್ನಲಾಗುತ್ತಿದೆ. ಜಿಲ್ಲೆಯ ಹಲವು ಭಾಗಗಳಲ್ಲಿ ನಡೆದ ಪಥಸಂಚಲನದಲ್ಲಿ ಹಲವು ಸರ್ಕಾರಿ ಸಿಬ್ಬಂದಿ, ಅಧಿಕಾರಿಗಳು ಭಾಗಿಯಾಗಿದ್ದಾರೆ.

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾದ ಅಡುಗೆ ಸಿಬ್ಬಂದಿ ವಜಾ

-

ಹರೀಶ್‌ ಕೇರ ಹರೀಶ್‌ ಕೇರ Oct 22, 2025 1:23 PM

ಬೀದರ್‌: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಪಥಸಂಚಲನದಲ್ಲಿ ಭಾಗಿಯಾದ, ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಅಡುಗೆ ಸಿಬ್ಬಂದಿಗೆ ಸರ್ಕಾರ ಗೇಟ್‌ಪಾಸ್ ನೀಡಿದ ಘಟನೆ ಬಸವ ಕಲ್ಯಾಣದಲ್ಲಿ ನಡೆದಿದೆ. ಬಸವ ಕಲ್ಯಾಣದ (bidar news) ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಅಡುಗೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ಪ್ರಮೋದ್ ಅವರನ್ನು ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಕೆಲಸದಿಂದ ತಾಲೂಕು ಆಡಳಿತ ಬಿಡುಗಡೆಗೊಳಿಸಿದೆ.

ಬಸವಕಲ್ಯಾಣದಲ್ಲಿ ನಡೆದ ಆರ್‌ಎಸ್‌ಎಸ್ ಪಥ ಸಂಚಲನದಲ್ಲಿ ಸಿಬ್ಬಂದಿ ಪ್ರಮೋದ್ ಭಾಗಿಯಾಗಿದ್ದು ಸರ್ಕಾರದಿಂದ ವೇತನ ಪಡೆದು ಯಾವುದೇ ಸಂಘ ಸಂಸ್ಥೆಯಲ್ಲಿ ಭಾಗಿಯಾಗಬಾರದೆಂದು ಆದೇಶ ಪ್ರತಿಯಲ್ಲಿ ಉಲ್ಲೇಖಿಸಿದೆ. ಬಸವಕಲ್ಯಾಣದಲ್ಲಿ ನಡೆದ ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಸುಮಾರು 20ಕ್ಕೂ ಹೆಚ್ಚು ಸರ್ಕಾರಿ ಅಧಿಕಾರಿಗಳು ಭಾಗಿಯಾಗಿದ್ದಾರೆ ಎನ್ನಲಾಗುತ್ತಿದೆ. ಜಿಲ್ಲೆಯ ಹಲವು ಭಾಗಗಳಲ್ಲಿ ನಡೆದ ಪಥಸಂಚಲನದಲ್ಲಿಹಲವು ಸರ್ಕಾರಿ ಸಿಬ್ಬಂದಿ, ಅಧಿಕಾರಿಗಳು ಭಾಗಿಯಾಗಿದ್ದಾರೆ.

ಅಮಾನತಾದ ಪಿಡಿಒಗೆ ಇನ್ನಷ್ಟು ಸಂಕಷ್ಟ

ಇತ್ತೀಚೆಗೆ, ಆರೆಸ್ಸೆಸ್‌ ಪಥಸಂಚಲನದಲ್ಲಿ ಭಾಗಿಯಾದುದಕ್ಕಾಗಿ ಲಿಂಗಸುಗೂರು ತಾಲ್ಲೂಕಿನ ರೋಡಲಬಂಡಾ ಗ್ರಾಮದಲ್ಲಿ ಪಿಡಿಒ ಆಗಿ ಕೆಲಸ ಮಾಡುತ್ತಿರುವ ಪ್ರವೀಣ್‌ ಅವರನ್ನು ಅಮಾನತು ಮಾಡಲಾಗಿತ್ತು. ಇದೀಗ ಅವರಿಗೆ ಇನ್ನಷ್ಟು ಸಂಕಷ್ಟ ಎದುರಾಗಿದ್ದು, ಅವರ ಮೇಲೆ ಕರ್ತವ್ಯ ಲೋಪ, ಹಣ ದುರ್ಬಳಕೆಯ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: RSS : ನ.2ರಂದು ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ: ಇ-ಮೇಲ್​ ಮೂಲಕ ಡಿಸಿಗೆ ಅರ್ಜಿ ಸಲ್ಲಿಕೆ

ಬೇರೆ ಕಡೆ ನಿಯೋಜನೆಯಾಗಿದ್ದರೂ ಪಿಡಿಓ ಸ್ಥಾನದಲ್ಲಿ ಉಳಿದು ಅನುದಾನದ ಹಣವನ್ನು ದುರ್ಬಳಕೆ ಮಾಡಿದ್ದಾರೆ ಎಂಬ ಆರೋಪ ಪ್ರವೀಣ್‌ ಮೇಲೆ ಬಂದಿದೆ. ಈ ಸಂಬಂಧ ಸಿರವಾರ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಯಿಂದ ಜಿಲ್ಲಾ ಪಂಚಾಯತ್‌ ಸಿಇಓಗೆ ವರದಿ ಸಲ್ಲಿಕೆಯಾಗಿದ್ದು ಪರಿಶೀಲನೆ ಹಂತದಲ್ಲಿದೆ. ಅಕ್ಟೋಬರ್12 ರಂದು ಲಿಂಗಸುಗೂರು ಪಟ್ಟಣದಲ್ಲಿ ಆರ್‌ಎಸ್‌ಎಸ್‌ ಶತಮಾನೋತ್ಸವದ ಹಿನ್ನೆಲೆಯಲ್ಲಿ ಪಂಥಸಂಚಲನ ಕಾರ್ಯಕ್ರಮ ನಡೆದಿತ್ತು. ಈ ಪಥಸಂಚಲನದಲ್ಲಿ ಕೈಯಲ್ಲಿ ದೊಣ್ಣೆ ಹಿಡಿದುಕೊಂಡು ಗಣವೇಷ ಧರಿಸಿ ಪ್ರವೀಣ್ ಭಾಗವಹಿಸಿದ್ದರು.