ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಮಳೆ ಅನಾಹುತ; ವಾಟರ್ ಪಾರ್ಕ್ ಗೋಡೆ ಕುಸಿತ, 10 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

Heavy Rain: ರಾಜ್ಯದಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ಬೀದರ್ (Bidar) ತಾಲೂಕಿನ ಅಣದೂರು ವಾಡಿ ಗ್ರಾಮದ ಬಳಿ ಇರುವ ಮಾಂಜ್ರಾ ವಾಟರ್ ಪಾರ್ಕ್‌ನ ಗೋಡೆ ಕುಸಿದು ಬಿದ್ದು ಅನಾಹುತ ಸಂಭವಿಸಿದೆ.

ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆಗೆ (Heavy Rain) ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ಬೀದರ್ (Bidar) ತಾಲೂಕಿನ ಅಣದೂರು ವಾಡಿ ಗ್ರಾಮದ ಬಳಿ ಇರುವ ಮಾಂಜ್ರಾ ವಾಟರ್ ಪಾರ್ಕ್‌ನ ಗೋಡೆ ಕುಸಿದು ಬಿದ್ದು ಅನಾಹುತ ಸಂಭವಿಸಿದೆ. ಮಕ್ಕಳು, ಮಹಿಳೆಯರು ಸೇರಿ 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ. ಸದ್ಯ ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಗೋಡೆ ಕುಸಿತದಿಂದ ರೂಂನಲ್ಲಿದ್ದ ಜಯಶ್ರೀ, ನೀಲಮ್ಮ, ಶೀವಲೀಲಾ, ಮಕ್ಕಳು ಆರಾದ್ಯ, ಶ್ರದ್ಧಾ, ಶ್ರೇಯಸ್ ಸೇರಿ 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಮಕ್ಕಳಿಗೆ ತಲೆಗೆ ಬಾರಿ ಪೆಟ್ಟಾದ ಹಿನ್ನಲೆ ಮಕ್ಕಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗದಗ ಜಿಲ್ಲೆಯಲ್ಲಿ ಬಿರುಗಾಳಿ ಮಳೆಗೆ ಚವಡಿ ಕೂಟ ಬಳಿ ಮನೆಯ ಮೇಲಿದ್ದ ಸಿಂಟೆಕ್ಸ್ ಕಿತ್ತು ಬಂದು, ವಿದ್ಯುತ್ ತಂತಿಯ ಮೇಲೆ ಕೂತು ನೇತಾಡಿದೆ. ಕಲಬುರಗಿ ಜಿಲ್ಲೆಯ ಪಿಲ್ಲಿಗುಂಟಾ ತಾಂಡಾದಲ್ಲಿ ಸಿಡಿಲಿಗೆ 25 ಮೇಕೆಗಳು ಬಲಿಯಾಗಿವೆ. ಚಿಕ್ಕೋಡಿ ಉಪ ವಿಭಾಗದಲ್ಲಿ ಬಿರುಗಾಳಿ ಸಮೇತ ಸುರಿದ ಮಳೆಗೆ ಕಟಕಭಾವಿ ಗ್ರಾಮದಲ್ಲಿ ಮನೆಯ ಮೇಲ್ಛಾವಣಿ ಹಾರಿ ಹೋಗಿದೆ.

ಮೇಲ್ಛಾವಣಿ ಹಾರಿಹೋದ ಪರಿಣಾಮ ಕಂಪ್ಯೂಟರ್, ಫ್ಯಾನ್, ಟಿವಿ ಎಲ್ಲಾ ಹಾಳಾಗಿ ಹೋಗಿದ್ದು, ಸಾವಿರಾರು ರೂಪಾಯಿಯ ನಷ್ಟವಾಗಿದೆ ಎಂದು ಮನೆ ಕಳೆದುಕೊಂಡ ಕುಟುಂಬಸ್ಥರ ಕಣ್ಣೀರು ಹಾಕಿದ್ದಾರೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹವಾಮಾನ ಇಲಾಖೆಯ ಪ್ರಕಾರ, ರಾಜ್ಯದ ಹಲವೆಡೆ ಮುಂದಿನ ದಿನಗಳಲ್ಲಿ ಭಾರಿ ಮಳೆಯ ನಿರೀಕ್ಷೆಯಿದೆ. ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇರುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಉತ್ತರ, ದಕ್ಷಿಣ ಒಳನಾಡಿನ ಕೆಲ ಭಾಗಗಳಲ್ಲಿ ಮಳೆಯ ನಿರೀಕ್ಷೆ ಇದ್ದು, ಗಂಟೆಗೆ 40-50 ಕಿ.ಮೀ. ಗಾಳಿ, ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಮುಂದಿನ ಮೂರು ದಿನ ನಗರದಲ್ಲಿ 75ರಿಂದ 115 ಮಿಲಿ ಮಿಟರ್‌ವರೆಗೆ ಜೋರು ಮಳೆ ಸುರಿಯಬಹುದು.

Vishakha Bhat Heggar

View all posts by this author