ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಔರಾದ್‌ನ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 50 ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಬೀದರ್‌ ಜಿಲ್ಲೆಯ ಔರಾದ ತಾಲೂಕಿನ ಜಮಲಾಪುರ ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಸುಮಾರು 50 ಮಕ್ಕಳು ಅಸ್ವಸ್ಥಗೊಂಡ ಘಟನೆ ಮಂಗಳವಾರ ಜರುಗಿದೆ. ಬಿಸಿಯೂಟ ಸೇವಿಸಿದ ಬಳಿಕ ಮಕ್ಕಳಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಔರಾದ್‌ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಔರಾದ್‌ನ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 50 ವಿದ್ಯಾರ್ಥಿಗಳು ಅಸ್ವಸ್ಥ

ಅಸ್ವಸ್ಥ ವಿದ್ಯಾರ್ಥಿಗಳಿಗೆ ಔರಾದ್‌ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ. -

Profile
Siddalinga Swamy Feb 3, 2026 9:11 PM

ಬೀದರ್‌, ಫೆ.3: ಮಧ್ಹಾಹ್ನದ ಬಿಸಿಯೂಟ ಸೇವಿಸಿದ ಸುಮಾರು 50 ಮಕ್ಕಳು ಅಸ್ವಸ್ಥಗೊಂಡ ಘಟನೆ ಬೀದರ್‌ ಜಿಲ್ಲೆಯ (Bidar News) ಔರಾದ್‌ ತಾಲೂಕಿನ ಜಮಲಾಪುರ ಸರ್ಕಾರಿ ಶಾಲೆಯಲ್ಲಿ ಮಂಗಳವಾರ ಜರುಗಿದೆ. ಬಿಸಿಯೂಟ ಸೇವಿಸಿದ ಬಳಿಕ ಮಕ್ಕಳಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಔರಾದ್‌ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಾಲೆಯಲ್ಲಿ ಮಕ್ಕಳು ಮಧ್ಯಾಹ್ನ ಬಿಸಿಯೂಟ ಸೇವಿಸಿದ ಕೆಲವು ಮಕ್ಕಳಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ನಂತರ ವಾಂತಿ ಆಗಿದೆ. ಅಸ್ವಸ್ಥಗೊಂಡಿದ್ದ ಮಕ್ಕಳನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ತಪಾಸಣೆ ನಡೆಸಿ ಚಿಕಿತ್ಸೆ ಕೊಡಿಸಲಾಗಿದೆ.

ಆಸ್ಪತ್ರೆಗೆ ಬಂದ ವಿದ್ಯಾರ್ಥಿಗಳ ಪೈಕಿ ಇಪ್ಪತ್ತು ಮಕ್ಕಳಲ್ಲಿ ಹೊಟ್ಟೆ ನೋವು ಇದೆ. ಎಲ್ಲರಿಗೂ ಚಿಕಿತ್ಸೆ ಕೊಡುತ್ತಿದ್ದೇವೆ. ಬಿಸಿಯೂಟ ಸೇವನೆಯಲ್ಲಿ ಸಮಸ್ಯೆ ಆಗಿರಬಹುದು. ಪರಿಶೀಲನೆ ನಡೆಯುತ್ತಿದೆ ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ. ಗಾಯತ್ರಿ ತಿಳಿಸಿದ್ದಾರೆ. ಆಸ್ಪತ್ರೆಗೆ ತಹಸೀಲ್ದಾರ್‌ ಮಹೇಶ್ ಪಾಟೀಲ, ಬಿಸಿಯೂಟ ಅಧಿಕಾರಿ ಧೂಳಪ್ಪ‌ ಮಾಳೆನೂರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಆಸ್ಪತ್ರೆಗೆ ಶಾಸಕ ಪ್ರಭು ಚವ್ಹಾಣ್‌ ಭೇಟಿ

ಬಿಸಿಯೂಟ ಸೇವಿಸಿ ಮಕ್ಕಳು ಅಸ್ವಸ್ಥರಾದ ಮಾಹಿತಿ ತಿಳಿದ ತಕ್ಷಣ ಶಾಸಕ ಪ್ರಭು ಚವ್ಹಾಣ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ, ಮಕ್ಕಳ ಆರೋಗ್ಯ ವಿಚಾರಿಸಿದರು. ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿಯಿಂದ ಚಿಕಿತ್ಸೆಯ ವಿವರ ಪಡೆದು, ಮಕ್ಕಳಿಗೆ ಸೂಕ್ತ ಚಿಕಿತ್ಸೆ ಒದಗಿಸುವಂತೆ ಸೂಚಿಸಿದರು.

ನಂತರ ಮಾತನಾಡಿದ ಶಾಸಕ ಪ್ರಭು ಚವ್ಹಾಣ, ಬಿಸಿಯೂಟ ಸೇವಿಸಿದ ನಂತರ ಕೆಲವು ವಿದ್ಯಾರ್ಥಿಗಳಿಗೆ ವಾಂತಿ, ಭೇದಿಯಾಗಿದೆ. ತಕ್ಷಣ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಕ್ಕಳನ್ನು ಭೇಟಿ ಮಾಡಿ ಮಾತನಾಡಿಸಿದ್ದೇನೆ‌. ವೈದ್ಯರು ನಿರಂತರವಾಗಿ ತಪಾಸಣೆ ನಡೆಸುತ್ತಿದ್ದು, ಸದ್ಯಕ್ಕೆ ಎಲ್ಲ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ.

ವೇಗವಾಗಿ ಚಲಿಸುವ ಬಸ್‌ನ ಮುಂದೆ ಅಚಾನಕ್ ಆಗಿ ಎದುರು ಬಂದ ಬಾಲಕಿ; ಎದೆ ಝಲ್‌ ಎನಿಸುವ ದೃಶ್ಯ ವೈರಲ್‌

ಕಳಪೆ ಆಹಾರ ಪೂರೈಕೆ: ಶಾಸಕ ಚವ್ಹಾಣ್‌ ಆರೋಪ

ವಿದ್ಯಾರ್ಥಿಗಳಿಗೆ ಕಳಪೆ ಆಹಾರ ಸಾಮಗ್ರಿ ಸರಬರಾಜು ಆಗುತ್ತಿರುವ ಬಗ್ಗೆ ಶಿಕ್ಷಣ ಇಲಾಖೆಯ ಸಚಿವರು ಮತ್ತು ಸಂಬಂಧಿಸಿದ ಅಧಿಕಾರಿಗಳಿಗೆ ಪತ್ರ ಬರೆದಿದ್ದೇನೆ. ಆದರೆ ಇದುವರೆಗೂ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ ಎಂದು ಆರೋಪಿಸಿರುವ ಶಾಸಕ ಪ್ರಭು ಚವ್ಹಾಣ, ಶಾಲೆಗಳಿಗೆ ಆಹಾರ ಸಾಮಗ್ರಿ ಪೂರೈಕೆದಾರರು ಕಳಪೆ ಗುಣಮಟ್ಟದ ಆಹಾರ ಪೂರೈಸುತ್ತಿದ್ದು, ಹೆಚ್ಚಿನ ಲಾಭ ಗಳಿಸುವ ದುರಾಸೆಯಿಂದ ಮಕ್ಕಳ ಆರೋಗ್ಯದೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ. ಇವರ ಮೇಲೆ ಶಿಸ್ತು ಕ್ರಮವಾಗಬೇಕು ಆಗ್ರಹಿಸಿದ್ದಾರೆ.