ಮಾಜಿ ಸಚಿವ, ಶತಾಯುಷಿ ಡಾ. ಭೀಮಣ್ಣ ಖಂಡ್ರೆ ನಿವಾಸಕ್ಕೆ ಮಠಾಧೀಶರು, ಗಣ್ಯರು ಭೇಟಿ
Bheemanna Khandre: ಸ್ವಾತಂತ್ರ್ಯ ಹೋರಾಟಗಾರ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಮಾಜಿ ಅಧ್ಯಕ್ಷ, ಮಾಜಿ ಸಚಿವ, ಶತಾಯುಷಿ ಡಾ. ಭೀಮಣ್ಣ ಖಂಡ್ರೆ (102) ಅವರ ನಿವಾಸಕ್ಕೆ ಕಳೆದ ಮೂರು ದಿವಸಗಳಿಂದ ನಾನಾ ಮಠಾಧೀಶರು, ಗಣ್ಯರು ಖಂಡ್ರೆ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಡಾ. ಭೀಮಣ್ಣ ಖಂಡ್ರೆ ಅವರ ನಿವಾಸಕ್ಕೆ ಭೇಟಿ ನೀಡಿದ ಮಠಾಧೀಶರು. -
ಬೀದರ್, ಜ. 15: ಸ್ವಾತಂತ್ರ್ಯ ಹೋರಾಟಗಾರ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಮಾಜಿ ಅಧ್ಯಕ್ಷ, ಮಾಜಿ ಸಚಿವ, ಶತಾಯುಷಿ ಡಾ. ಭೀಮಣ್ಣ ಖಂಡ್ರೆ (102) ಅವರ (Bheemanna Khandre) ನಿವಾಸಕ್ಕೆ ಕಳೆದ ಮೂರು ದಿವಸಗಳಿಂದ ನಾನಾ ಮಠಾಧೀಶರು, ಗಣ್ಯರು ಖಂಡ್ರೆ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಉತ್ತರಾಖಂಡ ಕೇದಾರ ಪೀಠದ ಜಗದ್ಗುರು ಶ್ರೀ ಭೀಮಾಶಂಕರ ಲಿಂಗ ಶಿವಾಚಾರ್ಯರು, ರಂಭಾಪುರಿ ಪೀಠದ ಜಗದ್ಗುರು ಶ್ರೀ ಡಾ. ವೀರಸೋಮೇಶ್ವರ ಶಿವಾಚಾರ್ಯರು, ತಡೋಳಾದ ರಾಜೇಶ್ವರ ಶಿವಾಚಾರ್ಯರು, ಅನುಭವ ಮಂಟಪದ ಸಂಚಾಲಕ ಶಿವಾನಂದ ಸ್ವಾಮೀಜಿ, ಹಲಬರ್ಗಾದ ಹಾವಗಿಲಿಂಗೇಶ್ವರ ಶಿವಾಚಾರ್ಯರು, ನಾಡೋಜ ಡಾ. ಬಸವಲಿಂಗ ಪಟ್ಟದೇವರು, ಗುರುಬಸವ ಪಟ್ಟದೇವರು, ಗದಗ ಜಿಲ್ಲೆಯ ಬಾಳೆ ಹೊಸೂರ ಮಠದ ದಿಂಗಾಲೇಶ್ವರ ಸ್ವಾಮೀಜಿ, ಹಾರಕೂಡದ ಡಾ. ಚನ್ನವೀರ ಶಿವಾಚಾರ್ಯರು, ಮುಗುಳಖೋಡ ಶ್ರೀಗಳು, ಹಣೆಗಾಂವ ಶಂಕರಲಿಂಗ ಶಿವಾಚಾರ್ಯರು, ಚಿದಂಬರ ಆಶ್ರಮದ ಶಿವಕುಮಾರ ಸ್ವಾಮೀಜಿ, ಬಸವಗಿರಿಯ ಪ್ರಭುದೇವ ಸ್ವಾಮೀಜಿ, ಹುಡಗಿ ಹಿರೇಮಠ ಸಂಸ್ಥಾನದ ಶ್ರೀಗಳು, ವಿರೂಪಾಕ್ಷ ಶಿವಾಚಾರ್ಯರು, ಡಾ. ಸಿದ್ದರಾಮ ಬೆಲ್ದಾಳ ಶರಣರು ಸೇರಿದಂತೆ ಹಲವರು ಭೇಟಿ ನೀಡಿ ಡಾ. ಭೀಮಣ್ಣ ಖಂಡ್ರೆ ಅವರ ಆರೋಗ್ಯ ವಿಚಾರಿಸಿ ಶೀಘ್ರ ಗುಣ ಮುಖ ಹೊಂದಲಿ ಎಂದು ಪ್ರಾರ್ಥಿಸಿದರು.
ನಿವಾಸದಲ್ಲಿ ಮುಂದುವರಿದ ಚಿಕಿತ್ಸೆ
ಭಾಲ್ಕಿ ಪಟ್ಟಣದ ಮನೆಯಲ್ಲಿಯೇ ಚಿಕಿತ್ಸೆ ಮುಂದುವರಿಸಲಾಗುತ್ತಿದ್ದು, ಕಳೆದ ಎರಡು ಮೂರು ದಿನಗಳಿಗೆ ಹೋಲಿಸಿದರೆ ಡಾ. ಭೀಮಣ್ಷ ಖಂಡ್ರೆ ಅವರ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಂಡು ಬಂದಿದೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ವೈದ್ಯರ ತಂಡ ದಿನದ ಇಪ್ಪತ್ತನಾಲ್ಕು ಗಂಟೆ ಅವರ ಆರೋಗ್ಯದ ಮೇಲೆ ನಿಗಾವಹಿಸಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಗಣ್ಯರು ಭೇಟಿ
ಸಚಿವ ರಹೀಂಖಾನ್, ಮುಖಂಡರಾದ ಗುರುನಾಥ ಕೊಳ್ಳೂರ. ಡಿ.ಕೆ. ಸಿದ್ರಾಮ, ವಿಧಾನ ಪರಿಷತ್ ಮಾಜಿ ಸದಸ್ಯ ವಿಜಯಸಿಂಗ್ ಸೇರಿದಂತೆ ಅನೇಕ ಗಣ್ಯರು ಚುನಾಯಿತ ಪ್ರತಿನಿಧಿಗಳು ಭೇಟಿ ನೀಡಿದರು.
ಮಾಜಿ ಸಚಿವ, ಶತಾಯುಷಿ ಭೀಮಣ್ಣ ಖಂಡ್ರೆ ಆರೋಗ್ಯ ಏರುಪೇರು, ಆಸ್ಪತ್ರೆಗೆ ದಾಖಲು
ಸಚಿವ ಈಶ್ವರ ಖಂಡ್ರೆ ಹೇಳಿದ್ದೆನು?
ʼʼನಮ್ಮ ತಂದೆ ಶತಾಯುಷಿ ಡಾ. ಭೀಮಣ್ಣ ಖಂಡ್ರೆ ಅವರ ಆರೋಗ್ಯ ಸ್ಥಿರವಾಗಿದೆ. ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ. ಕಾರ್ಯಕರ್ತರು, ಅಭಿಮಾನಿಗಳು ಯಾವುದೇ ಕಾರಣಕ್ಕೂ ಆತಂಕಪಡಬಾರದುʼʼ ಎಂದು ತಿಳಿಸಿದ್ದಾರೆ.