ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಈ ಬಾರಿ ಬಜೆಟ್‌ನಲ್ಲಿ ಪತ್ರಕರ್ತ ಸಮುದಾಯಕ್ಕೆ ಸಿಹಿ ಸುದ್ದಿ ಇರುತ್ತೆ: ಕೆ.ವಿ. ಪ್ರಭಾಕರ್

KV Prabhakar: ಪತ್ರಕರ್ತ ಸಮುದಾಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲಿನಿಂದಲೂ ನೆರಳಾಗಿ ನಿಂತಿದ್ದಾರೆ. ಈ ಬಾರಿಯ ಬಜೆಟ್‌ನಲ್ಲೂ ಶ್ರಮಿಕ ಪತ್ರಕರ್ತ ಸಮುದಾಯಕ್ಕೆ ಉತ್ತಮ‌ ಅನುಕೂಲಗಳು ಆಗುವ ಭರವಸೆ ಇದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರ ಕೆ.ವಿ. ಪ್ರಭಾಕರ್ ತಿಳಿಸಿದ್ದಾರೆ.

ಈ ಬಾರಿ ಬಜೆಟ್‌ನಲ್ಲಿ ಪತ್ರಕರ್ತ ಸಮುದಾಯಕ್ಕೆ ಸಿಹಿ ಸುದ್ದಿ: ಕೆವಿಪಿ

ಬೀದರ್‌ ಜಿಲ್ಲಾ ಪತ್ರಕರ್ತರ ಸಂಘದ ಕಾರ್ಯಕ್ರಮದಲ್ಲಿ ಕೆ.ವಿ. ಪ್ರಭಾಕರ್ ಮಾತನಾಡಿದರು. -

Profile
Siddalinga Swamy Feb 23, 2026 9:11 PM

ಬೀದರ್, ಫೆ.23: ಕಾರ್ಯನಿರತ ಪತ್ರಕರ್ತರ 40ನೇ ಸಮ್ಮೇಳನದಲ್ಲಿ ತಾಂತ್ರಿಕ ಮತ್ತು ನೈತಿಕ‌ ಸವಾಲುಗಳ ಬಗ್ಗೆ ಅರ್ಥಪೂರ್ಣ ಚರ್ಚೆಯಾಗಲಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರ ಕೆ.ವಿ. ಪ್ರಭಾಕರ್ (KV Prabhakar) ಕರೆ‌ ನೀಡಿದರು.‌ ಜಿಲ್ಲಾ ಪತ್ರಕರ್ತರ ಸಂಘದ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ 'ಸಮ್ಮೇಳನದ ವೆಬ್ ಸೈಟ್' ಉದ್ಘಾಟಿಸಿ, ಅವರು ಮಾತನಾಡಿದರು.

ಇಂದು ಅಭಿವೃದ್ಧಿ ಪತ್ರಿಕೋದ್ಯಮ ಪಕ್ಕಕ್ಕೆ ಸರಿದು ಹೇಳಿಕೆ ಆಧಾರಿತ ಪತ್ರಿಕೋದ್ಯಮವೇ ಪ್ರಧಾನ ಆಗುತ್ತಿರುವುದು ಆರೋಗ್ಯಕರ ಸಂಗತಿ ಅಲ್ಲ. ಹೀಗಾಗಿ ಕಾರ್ಯನಿರತ ಪತ್ರಕರ್ತರ 40ನೇ ಸಮ್ಮೇಳನ ಮಾಧ್ಯಮ ಜಗತ್ತಿನ 'ಮಂಥನ' ದ ವೇದಿಕೆಯಾಗಬೇಕು ಎಂದು ಕರೆ ನೀಡಿದರು.

ಈ ಸಮ್ಮೇಳನ ವೃತ್ತಿಪರರಿಗೆ ತಮ್ಮ ನೋಟಗಳನ್ನು, ಆಯ್ಕೆಗಳನ್ನು ಮತ್ತು ವೃತ್ತಿಪರತೆಯನ್ನು ತೀಕ್ಷ್ಣಗೊಳಿಸಿಕೊಳ್ಳಲು ಮತ್ತು ಅವರ ಆಂತರಿಕ ದಿಕ್ಸೂಚಿಯನ್ನು ಮರು ಚಿಂತನೆಗೆ ಒಳಪಡಿಸಿಕೊಳ್ಳಲು ವೇದಿಕೆಯನ್ನು ಒದಗಿಸುತ್ತದೆ ಎನ್ನುವ ಭರವಸೆ ಇದೆ ಎಂದು ಆಶಿಸಿದರು.‌

ಕೃತಕ ಬುದ್ಧಿಮತ್ತೆ ತಂತ್ರಜ್ಞಾನ-ಚಾಲಿತ ಯುಗದಲ್ಲಿ ನಮ್ಮ ಕೌಶಲ್ಯಗಳನ್ನು ನವೀಕರಣಗೊಳಿಸಿಕೊಳ್ಳುವುದರ ಜತೆಗೆ‌ ಪತ್ರಿಕೋದ್ಯಮದ ಆದ್ಯತೆಗಳನ್ನೂ ಮರು ಪರಿಶೀಲನೆಗೆ ಚರ್ಚೆಗೆ ಒಳಪಡಿಸಬೇಕಿದೆ. ಇವತ್ತಿನ ತಾಂತ್ರಿಕ ವೇಗ ಮತ್ತು ಹೊಸ ಹೊಸ ತಂತ್ರಜ್ಞಾನದ ವೇಗದಲ್ಲಿ ಬಹುತೇಕ ಪ್ರತಿ ಐದು ವರ್ಷಗಳಿಗೆ ಒಮ್ಮೆ ನಾವು ಕಲ್ಪಿಸಕೊಳ್ಳಲಾಗದ ತಂತ್ರಜ್ಞಾನ‌ ಹೊರಗೆ ಬರುತ್ತಿವೆ. ಹೊಸದಾಗಿ ಬಂದಿರುವ AI ತಂತ್ರಜ್ಞಾನದ ಸಾಧ್ಯತೆಗಳನ್ನು ಮತ್ತು ಅಪಾಯಗಳನ್ನು ನಾವು ಸರಿಯಾಗಿ ಗ್ರಹಿಸುವ ಮೊದಲೇ ಹೊಸ ತಂತ್ರಜ್ಞಾನ‌ ಬಂದಿರುತ್ತದೆ. ಈಗಾಗಲೇ‌ AI ಕೂಡ ಹಳತಾಗಿ "Super AI" ಅಂತ ಬರುತ್ತಿದೆ ಎಂದರು.‌ ಇವೆಲ್ಲವನ್ನೂ ಅರಿಯುವ ಮತ್ತು ಅಪಾಯಗಳನ್ನು ತಡೆಯುವ ಕಾರ್ಯಾಗಾರವಾಗಿ ಈ ಬಾರಿಯ ಸಮ್ಮೇಳನ ಯಶಸ್ವಿಯಾಗಲಿ ಎಂದು ಆಶಿಸುತ್ತೇನೆ ಎಂದರು.

ಡೀಪ್‌ಫೇಕ್‌ಗಳನ್ನು ಹೇಗೆ ಗುರುತಿಸುವುದು ಮತ್ತು ಸಾಮಾಜಿಕ ಮಾಧ್ಯಮ ಲೀಡ್‌ಗಳನ್ನು ಪರಿಶೀಲಿಸುವುದು ಹೇಗೆ ಎಂಬುದನ್ನು News room ಗಳು ಕಲಿಸಬೇಕಾಗಿದೆ. ಮಾಧ್ಯಮ ಲೋಕದ ಕಾರ್ಪುರೇಟೀಕರಣದ ತಂದೊಡ್ಡಿರುವ ನೈತಿಕ ಸವಾಲುಗಳ ನಡುವೆಯೇ ಈಗ AI ಮತ್ತು ಆಧುನಿಕ ತಂತ್ರಜ್ಞಾನವೂ ಹೊಸ ಹೊಸ ನೈತಿಕ ಸವಾಲುಗಳನ್ನು ಮುಂದಿಟ್ಟಿದೆ. ಹೀಗಾಗಿ, ನೈತಿಕ ಮತ್ತು ತಾಂತ್ರಿಕ ಸವಾಲುಗಳ ಬಗ್ಗೆ ಅರ್ಥಪೂರ್ಣ ಚರ್ಚೆಗೆ ಸಮ್ಮೇಳನ ವೇದಿಕೆಯಾಗಲಿ ಎಂದು ನಾನು ಬಯಸುತ್ತೇನೆ ಎಂದರು.

ಪತ್ರಕರ್ತ ಸಮುದಾಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲಿನಿಂದಲೂ ನೆರಳಾಗಿ ನಿಂತಿದ್ದಾರೆ. ಈ ಬಾರಿಯ ಬಜೆಟ್‌ನಲ್ಲೂ ಶ್ರಮಿಕ ಪತ್ರಕರ್ತ ಸಮುದಾಯಕ್ಕೆ ಉತ್ತಮ‌ ಅನುಕೂಲಗಳು ಆಗುವ ಭರವಸೆ ಇದೆ ಎಂದರು.

ಪಿ. ರಾಮಯ್ಯ ಪತ್ರಿಕಾ ವೃತ್ತಿ, ರಾಜಕಾರಣದ ಘನತೆ ಹೆಚ್ಚಿಸಲು ಶ್ರಮಿಸಿದ್ದರು: ಕೆ.ವಿ. ಪ್ರಭಾಕರ್

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಈಶ್ವರ್ ಖಂಡ್ರೆ, ರಹೀಮ್ ಖಾನ್, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಉಪಾಧ್ಯಕ್ಷ ಮದನ್ ಗೌಡ, ಜಿಲ್ಲಾಧ್ಯಕ್ಷ ಆನಂದ್ ದೇವಪ್ಪ ಸೇರಿ ರಾಜ್ಯ ಮತ್ತು ಜಿಲ್ಲಾ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.