ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Bidar Accident: ಬೀದರ್‌ನಲ್ಲಿ ಬೈಕ್‌-ಕಾರು ನಡುವೆ ಭೀಕರ ಅಪಘಾತ; ಬಾಲಕ ಸೇರಿ ಮೂವರ ದುರ್ಮರಣ

ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ. ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರಿ, ಡಿವೈಎಸ್ಪಿ ಮಡೋಳಪ್ಪ, ಸಿಪಿಐ ಅಮೋಲ್ ಕಾಳೆ ಹಾಗೂ ಪಿಎಸ್‌ಐ ಅಂಬರೀಶ್ ವಾಗೋಡೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೀದ‌ರ್: ಬೈಕ್‌ಗೆ ಕಾರು ಡಿಕ್ಕಿ ಹೊಡೆದಿದ್ದರಿಂದ ಬಾಲಕ ಸೇರಿ ಮೂವರು ದುರ್ಮರಣ ಹೊಂದಿರುವ ಘಟನೆ (Bidar Accident) ಜಿಲ್ಲೆಯ ಹುಲಸೂರು ತಾಲೂಕಿನ ಮುಚಳಂಬ ಗ್ರಾಮದ ಸಮೀಪ ನಡೆದಿದೆ. ಬಸವಕಲ್ಯಾಣ ನಗರದ ಲಾಲ್ ತಲಾಬ್ ನಿವಾಸಿ ಬಾಬಾ (26), ಶಹಾಪುರ ಗಲ್ಲಿಯ ಸಮೀರ್ (22) ಹಾಗೂ ಶಾಹುಸೇನ್ ಗಲ್ಲಿಯ ರೆಹಾನ್ (12) ಮೃತರು.

ಮುಚಳಂಬ ಗ್ರಾಮದಲ್ಲಿ ನಡೆಯುತ್ತಿರುವ ಯಲ್ಲಾಲಿಂಗ ಮಠದ ಜಾತ್ರೆಯಲ್ಲಿ ಭಾಗವಹಿಸಿ, ಒಂದೇ ಬೈಕ್‌ನಲ್ಲಿ ಮೂವರು ಸೋಮವಾರ ತಡರಾತ್ರಿ ಬಸವಕಲ್ಯಾಣಕ್ಕೆ ಹಿಂದಿರುಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡು ತೀವ್ರ ರಕ್ತಸ್ರಾವವಾಗಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ. ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರಿ, ಡಿವೈಎಸ್ಪಿ ಮಡೋಳಪ್ಪ, ಸಿಪಿಐ ಅಮೋಲ್ ಕಾಳೆ ಹಾಗೂ ಪಿಎಸ್‌ಐ ಅಂಬರೀಶ್ ವಾಗೋಡೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಲಾರಿಗೆ ಕಾರು ಡಿಕ್ಕಿಯಾಗಿ ಇಬ್ಬರ ಸಾವು!

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ (Bengaluru-Mysuru Expressway) ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸರಕು ಸಾಗಣೆ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವಿನಹಳ್ಳಿ ಗೇಟ್ ಬಳಿಯ ಫ್ಲೈಓವರ್ ಮೇಲೆ ಅಪಘಾತ (Mandya Car Accident) ನಡೆದಿದೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರನ್ನು ಮಂಡ್ಯದ ಗುತ್ತಲು ಬಡಾವಣೆಯ ಮಹದೇವು (49) ಹಾಗೂ ತೈಲೂರು ಗ್ರಾಮದ ರಿತ್ವಿಕಾ (8) ಎಂದು ಗುರುತಿಸಲಾಗಿದೆ. ಕುಟುಂಬದ ಸದಸ್ಯರು ಕಾರಿನಲ್ಲಿ ನಂಜನಗೂಡಿನ ದೇವಸ್ಥಾನಕ್ಕೆ ತೆರಳುತ್ತಿದ್ದರು. ಈ ವೇಳೆ ನಗುವಿನಹಳ್ಳಿ ಗೇಟ್ ಬಳಿ ಅಪಘಾತ ಸಂಭವಿಸಿದೆ.

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ ಮಹದೇವು ಹಾಗೂ ಬಾಲಕಿ ರಿತ್ವಿಕಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನೆಯಿಂದಾಗಿ ಹೆದ್ದಾರಿಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಅಪ್ಪ ಎಂದು ಕರೆಯುತ್ತಿದ್ದ 9 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪಾಪಿಯ ಕೃತ್ಯಕ್ಕೆ ಬೆಚ್ಚಿಬಿದ್ದ ದೇಶ

ಅಪಘಾತದಲ್ಲಿ ಗೌರಿ, ಲತಾ, ಶಿವರಾಜು ಹಾಗೂ ಪ್ರಾರ್ಥನಾ ಎಂಬುವವರಿಗೆ ಗಂಭೀರ ಗಾಯಗಳಾಗಿವೆ. ತಕ್ಷಣವೇ ಸ್ಥಳೀಯರು ಹಾಗೂ ಪೊಲೀಸರು ಗಾಯಾಳುಗಳ ರಕ್ಷಣೆಗೆ ಧಾವಿಸಿದ್ದಾರೆ. ಬಳಿಕ ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಮೈಸೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.