Murder Case: ತಂಗಿಯನ್ನು ಪ್ರೀತಿಸಿದ್ದಕ್ಕೆ ಯುವಕನನ್ನು ಬರ್ಬರವಾಗಿ ಹತ್ಯೆಗೈದ ಸಹೋದರರು!
Murder Case: ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ನಿರಗೂಡಿ ಗ್ರಾಮದಲ್ಲಿ ಭೀಕರ ಹತ್ಯೆ ನಡೆದಿದೆ. ತಂಗಿಯನ್ನು ಪ್ರೀತಿಸಿದ್ದಕ್ಕೆ ಆಕೆಯ ಸಹೋದದರು, ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಬೀದರ್: ತಂಗಿಯನ್ನು ಪ್ರೀತಿಸಿದ್ದಕ್ಕೆ ಆಕೆಯ ಸಹೋದರರು, ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆಗೈದ ಘಟನೆ (Murder Case) ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ನಿರಗೂಡಿ ಗ್ರಾಮದಲ್ಲಿ ಜರುಗಿದೆ. ಪ್ರಶಾಂತ್ ಬಿರಾದರ್ (25) ಕೊಲೆಯಾದ ಯುವಕ. ಯಲ್ಲಾಲಿಂಗ ಮೇತ್ರೆ, ಪ್ರಶಾಂತ್ ಮೇತ್ರೆ ಕೊಲೆ ಅರೋಪಿಗಳು. ಮೃತ ಯುವಕ ಹಾಗೂ ಆರೋಪಿಗಳ ಸಹೋದರಿ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದರು. ಶುಕ್ರವಾರ ರಾತ್ರಿ 9 ಗಂಟೆಗೆ ನಿರಗೂಡಿ ಗ್ರಾಮದಲ್ಲಿ ಪ್ರಶಾಂತ್ ಹಾಗೂ ಯುವತಿ ಸಹೋದರರ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಪ್ರಶಾಂತ್ ತಲೆ ಮೇಲೆ ಯುವತಿಯ ಸಹೋದರರು ಕಲ್ಲು ಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಸ್ಥಳಕ್ಕೆ ಡಿವೈಎಸ್‌ಪಿ ನ್ಯಾಮೇಗೌಡ, ಸಿಪಿಐ ಅಲಿಸಾಬ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಸ್-ಬೈಕ್ ಡಿಕ್ಕಿಯಾಗಿ ದಂಪತಿ ದುರ್ಮರಣ, ಹಲವರಿಗೆ ಗಾಯ
ಬಾಗಲಕೋಟೆ: ಸಾರಿಗೆ ಬಸ್ ಮತ್ತು ಬೈಕ್ ಡಿಕ್ಕಿಯಾಗಿ ದಂಪತಿ ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ (Road Accident) ಬಾಗಲಕೋಟೆ ಜಿಲ್ಲೆಯ ಮುಧೋಳ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅಪಘಾತದಲ್ಲಿ ಬಸ್ ಡಿಕ್ಕಿಯಾಗಿದ್ದರಿಂದ ಬೈಕ್‌ನಲ್ಲಿದ್ದ ದಂಪತಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಅಡ್ಡ ಬಂದ ಬೈಕ್ ತಪ್ಪಿಸಲು ಹೋಗಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿದ್ದರಿಂದ ಬಸ್‌ನಲ್ಲಿದ್ದ ಹಲವರು ಗಾಯಗೊಂಡಿದ್ದಾರೆ. ಮುಗಳಖೋಡ ಗ್ರಾಮದ ಶಂಕರ ಲಕ್ಷ್ಮೇಶ್ವರ (50), ಶ್ರೀದೇವಿ ಲಕ್ಷ್ಮೇಶ್ವರ (40) ಮೃತ ದಂಪತಿ.
ಮಹಾಲಿಂಗಪುರ-ಮುಧೋಳ್ ಮಾರ್ಗದ ಮಳಲಿ ಬಳಿ ಅಪಘಾತದ ನಡೆದಿದೆ. ಮುಗಳಖೋಡದಿಂದ ಮಳಲಿ ಕಡೆಗೆ ಬೈಕ್‌ನಲ್ಲಿ ದಂಪತಿ ಹೊರಟಿದ್ದರು. ಇದೇ ವೇಳೆ ಕೊಲ್ಹಾಪುರದಿಂದ ಯಾದಗಿರಿ ಕಡೆಗೆ ಬಸ್ ಹೊಗುತ್ತಿತ್ತು. ಈ ವೇಳೆ ಬಸ್ ಮತ್ತು ಬೈಕ್ ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಇನ್ನು ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಸ್ವಾಗತ ಕಮಾನು ನೆಲಕ್ಕುರುಳಿದ್ದು, ಬಸ್‌ನಲ್ಲಿದ್ದ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಡಿಪೋಗೆ ಸೇರಿದ ಕೆಎಸ್‌ಆರ್‌ಟಿಸಿ ಬಸ್ ಅಪಘಾತಕ್ಕೀಡಾಗಿದ್ದು, ಸ್ಥಳಕ್ಕೆ ಮುಧೋಳ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಈ ಸುದ್ದಿಯನ್ನೂ ಓದಿ | MLC Rajendra Rajanna: ಕೊಲೆ ಯತ್ನ; ಪೆನ್‌ಡ್ರೈವ್ ಸಮೇತ ದೂರು ನೀಡಿದ ರಾಜೇಂದ್ರ, ತನಿಖೆಗೆ ತಂಡ ರಚನೆ
ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ 10 ವರ್ಷದ ಬಾಲಕ ಸಾವು
ಬೆಂಗಳೂರು: ಬಿಬಿಎಂಪಿ ಲಾರಿ ಡಿಕ್ಕಿಯಾಗಿ ಬೈಕ್‌ನಲ್ಲಿ ಹೋಗುತ್ತಿದ್ದ ಹತ್ತು ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ (Road Accident) ಬೆಂಗಳೂರಿನ ಥಣಿಸಂದ್ರದ ಬಳಿ ನಡೆದಿದೆ. ಐಮಾನ್ (10) ಮೃತ ಬಾಲಕ. ತಂದೆಯ ಜತೆ ಬಾಲಕ ಬೈಕ್‌ನಲ್ಲಿ ಹೋಗುತ್ತಿದ್ದಾಗ ದುರಂತ ಸಂಭವಿಸಿದೆ. ನಗರದ ಥಣಿಸಂದ್ರ ರೈಲ್ವೆ ನಿಲ್ದಾಣದ ಬಳಿ ಘಟನೆ ನಡೆದಿದೆ. ಅಪ್ಪನ ಜತೆ ಬೈಕ್‌ನಲ್ಲಿ ಐಮಾನ್ ತೆರಳುತ್ತಿದ್ದಾಗ ಬಿಬಿಎಂಪಿಯ ಕಸದ ಲಾರಿ ಡಿಕ್ಕಿ ಹೊಡೆದಿದ್ದು, ಇದರಿಂದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಘಟನೆಯಿಂದ ರೊಚ್ಚಿಗೆದ್ದ ಸಾರ್ವಜನಿಕರು, ಕಸ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಹೆಣ್ಣೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸುದ್ದಿಯನ್ನೂ ಓದಿ | MLC Rajendra Rajanna: ಕೊಲೆ ಯತ್ನ; ಪೆನ್‌ಡ್ರೈವ್ ಸಮೇತ ದೂರು ನೀಡಿದ ರಾಜೇಂದ್ರ, ತನಿಖೆಗೆ ತಂಡ ರಚನೆ