ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ವಿನಯ್ ಕುಲಕರ್ಣಿಗೆ ಬಿಗ್‌ ರಿಲೀಫ್‌; ಜಾಮೀನು ಮಂಜೂರು

ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2016ರ ಜೂನ್‌ 15ರಂದು ನಡೆದಿದ್ದ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶ್‌ಗೌಡ ಗೌಡರ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಧಾರವಾಡ ಕ್ಷೇತ್ರದ ಶಾಸಕ ವಿನಯ ಕುಲಕರ್ಣಿಗೆ ಬಿಗ್‌ ರಿಲೀಪ್‌ ಸಿಕ್ಕಿದೆ. 5 ಲಕ್ಷ ರೂಪಾಯಿ ಬಾಂಡ್, ಇಬ್ಬರ ಶ್ಯೂರಿಟಿ ಪಡೆದು ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

Vinay Kulkarni

ಬೆಂಗಳೂರು ಜು.31: ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2016ರ ಜೂನ್‌ 15ರಂದು ನಡೆದಿದ್ದ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶ್‌ಗೌಡ ಗೌಡರ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಧಾರವಾಡ ಕ್ಷೇತ್ರದ ಶಾಸಕ ವಿನಯ ಕುಲಕರ್ಣಿಗೆ ಬಿಗ್‌ ರಿಲೀಪ್‌ ಸಿಕ್ಕಿದೆ. 5 ಲಕ್ಷ ರೂಪಾಯಿ ಬಾಂಡ್, ಇಬ್ಬರ ಶ್ಯೂರಿಟಿ ಪಡೆದು ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. 106 ದಿನಗಳಿಂದ ಅವರು ಜೈಲಿನಲ್ಲಿದ್ದರು.

ಬಿಜಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಸೆಷನ್ ಕೋರ್ಟ್ ವಿನಯ್ ಕುಲಕರ್ಣಿಗೆ ಶಿಕ್ಷೆ ವಿಧಿಸಿತ್ತು. 2026ರ ಏಪ್ರಿಲ್‌ 17 ರಂದು 82ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ವಿನಯ್‌ ಕುಲಕರ್ಣಿ ಸೇರಿ 16 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿತ್ತು. ಇನ್‌ಸ್ಪೆಕ್ಟರ್ ಚನ್ನಕೇಶವ ಟಿಂಕರಿಕರ್‌ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ, ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಶಿಕ್ಷೆಯ ಪ್ರಮಾಣ ಪ್ರಕಟಿಸಿದ್ದರು.

ಈ ತೀರ್ಪಿನ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದ ವಿನಯ್ ಕುಲಕರ್ಣಿ ಸತತವಾಗಿ ಕಾನೂನು ಹೋರಾಟ ಮಾಡಿದ್ದರು. ವಿನಯ್ ಕುಲಕರ್ಣಿ ಅವರು ಶಿಕ್ಷೆ ಅಮಾನತ್ತಿನಲ್ಲಿ ಇರಿಸಿ ಜಾಮೀನು ನೀಡುವಂತೆ ಕೋರಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ, ಜೀವಾವಧಿ ಶಿಕ್ಷೆಗೆ ತಡೆಯಾಜ್ಞೆ ನೀಡಿ, ವಿನಯ್ ಕುಲಕರ್ಣಿ ಸೇರಿದಂತೆ 10 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಚನ್ನಕೇಶವ ಟಿಂಗರಿಕರ್‌ಗೂ ಜಾಮೀನು ದೊರೆತಿದೆ.

ಹೈಕೋರ್ಟ್ ಜಾಮೀನು ನೀಡಿದ ಕಾರಣ ಇದೀಗ ವಿನಯ್ ಕುಲಕರ್ಣಿ ಮತ್ತೆ ರಾಜಕೀಯವಾಗಿ ಸಕ್ರೀಯವಾಗಲಿದ್ದಾರೆ. ಅನರ್ಹಗೊಂಡಿದ್ದ ಅವರ ಶಾಸಕತ್ವ ಮರುಸ್ಥಾಪನೆಯಾಗಲಿದೆ.