ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Suresh Kumar: ಬಿಜೆಪಿ ಶಾಸಕ ಸುರೇಶ್‌ ಕುಮಾರ್‌ಗೆ ಮಾತೃ ವಿಯೋಗ

BJP MLA: ಈ ಕುರಿತು ಸ್ವತಃ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿರುವ ಬಿಜೆಪಿ ಶಾಸಕ ಸುರೇಶ್ ಕುಮಾರ್, ʼನನ್ನನ್ನು ಹೊತ್ತು, ಹೆತ್ತು ಸಾಕಿ, ತಿದ್ದಿ ತೀಡಿ ಬೆಳೆಸಿದ ನನ್ನಮ್ಮ, ಎಲ್ಲರ ಸುಶೀಲಮ್ಮ ಟೀಚರ್ ಇನ್ನಿಲ್ಲ. ಇಂದು ಬೆಳಗಿನ ಜಾವ ನನ್ನನ್ನು ಬಿಟ್ಟು ಹೊರಟು ಬಿಟ್ಟರುʼ ಎಂದು ಬರೆದಿದ್ದಾರೆ.

ಬೆಂಗಳೂರು : ರಾಜಾಜಿನಗರದ (Rajajinagar) ಬಿಜೆಪಿ ಶಾಸಕ, ಮಾಜಿ ಸಚಿವ ಸುರೇಶ್ ಕುಮಾರ್ (BJP MLA Suresh Kumar) ಅವರಿಗೆ ಮಾತೃವಿಯೋಗ ಸಂಭವಿಸಿದೆ. ಇಂದು ಬೆಳಿಗ್ಗೆ ರಾಜಾಜಿನಗರದಲ್ಲಿರುವ ನಿವಾಸದಲ್ಲಿ ಶಾಸಕ ಸುರೇಶ್ ಕುಮಾರ್ ಅವರ ತಾಯಿ ಸುಶೀಲಮ್ಮ ನಿಧನರಾದರು. ಕಳೆದ ಹಲವು ದಿನಗಳಿಂದ ಸುಶೀಲಮ್ಮ ಅನಾರೋಗ್ಯದಿಂದ ಬಳಲುತ್ತಿದ್ದರು.

ಈ ಕುರಿತು ಸ್ವತಃ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿರುವ ಸುರೇಶ್ ಕುಮಾರ್, ʼನನ್ನನ್ನು ಹೊತ್ತು, ಹೆತ್ತು ಸಾಕಿ, ತಿದ್ದಿ ತೀಡಿ ಬೆಳೆಸಿದ ನನ್ನಮ್ಮ, ಎಲ್ಲರ ಸುಶೀಲಮ್ಮ ಟೀಚರ್ ಇನ್ನಿಲ್ಲ. ಇಂದು ಬೆಳಗಿನ ಜಾವ ನನ್ನನ್ನು ಬಿಟ್ಟು ಹೊರಟು ಬಿಟ್ಟರುʼ ಎಂದು ಬರೆದಿದ್ದಾರೆ. ಶಿಕ್ಷಕಿಯಾಗಿದ್ದ ಸುಶೀಲಮ್ಮ ಅವರು ನಿವೃತ್ತಿ ಬಳಿಕ ಬೆಂಗಳೂರಿನ ಲಕ್ಷ್ಮಿ ನಾರಾಯಣ ಕೋ ಆಪರೇಟಿವ್ ಬ್ಯಾಂಕ್​ನ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಒಟ್ಟು 8 ಬಾರಿ ನಿರ್ದೇಶಕರಾಗಿ ಆಯ್ಕೆಯಾಗಿದ್ದರು.

ಮೃತ ನರಸಿಂಹ ಮೂರ್ತಿ ಅವರಿಗೆ ಶ್ರದ್ಧಾಂಜಲಿ

ಚಿಕ್ಕಬಳ್ಳಾಪುರ : ಭಾನುವಾರ ಬೆಳಿಗ್ಗೆ ಅಪಘಾತದಲ್ಲಿ ಮೃತಪಟ್ಟ ಮಾಡಪ್ಪಲ್ಲಿ ನರಸಿಂಹ ಮೂರ್ತಿ ಅವರಿಗೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಬೆಳಿಗ್ಗೆ ಏರ್ಪಡಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಿದ್ದ ಪತ್ರಕರ್ತರು ಮೃತ ನರಸಿಂಹಮೂರ್ತಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪನಮನ ಸಲ್ಲಿಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಎಂ.ಜಯರಾಮ್ ಪ್ರಾಮಾಣಿಕ ಪತ್ರಕರ್ತ, ಕವಿ ಉಪನ್ಯಾಸಕ, ಸಾಮಾಜಿಕ ಚಿಂತಕ, ಜನಪರ ಹೋರಾಟಗಳ ಸಂಗಾತಿ, ಪತ್ರಿಕಾ ವಿತರಕರಾಗಿದ್ದ ಮಾಡಪ್ಪಲ್ಲಿ ನರಸಿಂಹಮೂರ್ತಿ ಅವರ ನಿಧನವು ತೀವ್ರ ದು:ಖವನ್ನು ತಂದಿದೆ.ವೃತ್ತಿಯಲ್ಲಿ ಪ್ರಾಮಾಣಿಕತೆ ಕಣ್ಮರೆಯಾಗುತ್ತಿರುವ ಈ ದಿನಗಳಲ್ಲಿ ನರಸಿಂಹ ಮೂರ್ತಿ ಅಂತಹವರ ಸಂತತಿ ಬೆಳೆಯಬೇಕಿದೆ.ತಾನು ಕಷ್ಟದಲ್ಲಿದ್ದರೂ ಯಾರಿಂದಲೂ ಕೂಡ ನಯಾಪೈಸೆಗೆ ಆಶಿಸದೆ ವೃತ್ತಬದ್ಧತೆ ಮೆರೆದಿದ್ದರು ಎಂಬುದನ್ನು ಕೇಳಿ ಒಂದೆಡೆ ಸಂತೋಷವಾಗಿದ್ದರೆ, ಇಂತಹ ವ್ಯಕ್ತಿ ಅಕಾಲಿಕ ಮರಣಕ್ಕೆ ತುತ್ತಾದರು ಎಂಬ ಸುದ್ದಿ ಆಘಾತವನ್ನು ತಂದಿದೆ ಎಂದರು.

ಇದನ್ನೂ ಓದಿ: Cabinet Meeting: ದೌರ್ಜನ್ಯಕ್ಕೊಳಗಾಗಿ ಮೃತಪಟ್ಟ ಎಸ್‌ಸಿ/ಎಸ್‌ಟಿ ಸಂತ್ರಸ್ತರ ಕುಂಟುಂಬಕ್ಕೆ ಸರ್ಕಾರಿ ನೌಕರಿ

ಹರೀಶ್‌ ಕೇರ

View all posts by this author