ವಿದೇಶ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಕ್ರೈಂ ಫ್ಯಾಷನ್‌ ಲೋಕ ಉದ್ಯೋಗ

Tejasvi Surya Marriage: ಬಿಜೆಪಿ ಸಂಸದ ತೇಜಸ್ವಿ ಸೂರ್ಯ- ಸಿವಶ್ರೀ ಮದುವೆ ಮಾರ್ಚ್‌ 5ರಂದು

ಇದೇ ಮಾರ್ಚ್‌ 5 ಮತ್ತು 6ರಂದು ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಖಾಸಗಿ ರೆಸಾರ್ಟ್‍ವೊಂದರಲ್ಲಿ ಇವರ ಮದುವೆ ನಡೆಯಲಿದೆ ಎಂದು ತಿಳಿದುಬಂದಿದೆ. ಮದುವೆ ಸಮಾರಂಭ ಮುಗಿದ ಬಳಿಕ ಮಾರ್ಚ್‌ 9ರಂದು (ಭಾನುವಾರ) ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಅದ್ಧೂರಿ ಆರತಕ್ಷತೆ ಸಮಾರಂಭ ಕೂಡ ನಡೆಯಲಿದೆ.

ಬಿಜೆಪಿ ಸಂಸದ ತೇಜಸ್ವಿ ಸೂರ್ಯ- ಸಿವಶ್ರೀ ಮದುವೆ ಮಾರ್ಚ್‌ 5ರಂದು

ತೇಜಸ್ವಿ ಸೂರ್ಯ, ಸಿವಶ್ರೀ ಸ್ಕಂದಪ್ರಸಾದ್

ಹರೀಶ್‌ ಕೇರ ಹರೀಶ್‌ ಕೇರ Feb 19, 2025 6:50 AM

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಹಾಗೂ ಬಿಜೆಪಿಯ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರ ಮದುವೆಯ (BJP MP Tejaswi Surya Marriage) ದಿನಾಂಕ ಮತ್ತಿತರ ವಿವರಗಳು ದೊರೆತಿವೆ. ʼವಿಶ್ವವಾಣಿʼ ಪತ್ರಿಕೆ ಮೊದಲು ಈ ಸುದ್ದಿಯನ್ನು ಬ್ರೇಕ್‌ ಮಾಡಿತ್ತು. ಖ್ಯಾತ ಗಾಯಕಿ ಸಿವಶ್ರೀ ಸ್ಕಂದಪ್ರಸಾದ್ (Sivashree Skandaprasad) ಅವರೊಂದಿಗೆ ತೇಜಸ್ವಿ ಸೂರ್ಯ ಮಾರ್ಚ್‌ 5-6ರಂದು ಹಸೆಮಣೆ ಏರಲಿದ್ದಾರೆ.

ಈಗಾಗಲೇ ಇವರ ಮದುವೆ ಸಮಾರಂಭಕ್ಕೆ ಅದ್ಧೂರಿ ತಯಾರಿ ನಡೆಯುತ್ತಿದೆ. ಗಾಯಕಿ ಹಾಗೂ ಭರತನಾಟ್ಯ ಕಲಾವಿದೆ ಸಿವಶ್ರೀ ಸ್ಕಂದಪ್ರಸಾದ್ ಅವರೊಂದಿಗೆ ತೇಜಸ್ವಿ ಸೂರ್ಯ ಮಾರ್ಚ್ ಮೊದಲ ವಾರದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಇದೇ ಮಾರ್ಚ್‌ 5 ಮತ್ತು 6ರಂದು ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಖಾಸಗಿ ರೆಸಾರ್ಟ್‍ವೊಂದರಲ್ಲಿ ಇವರ ಮದುವೆ ನಡೆಯಲಿದೆ ಎಂದು ತಿಳಿದುಬಂದಿದೆ. ಮದುವೆ ಸಮಾರಂಭ ಮುಗಿದ ಬಳಿಕ ಮಾರ್ಚ್‌ 9ರಂದು (ಭಾನುವಾರ) ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಅದ್ಧೂರಿ ಆರತಕ್ಷತೆ ಸಮಾರಂಭ ಕೂಡ ನಡೆಯಲಿದೆ.

ಅಂದು ಬೆಳಿಗ್ಗೆ 10.30ರಿಂದ ಆರತಕ್ಷತೆ ಕಾರ್ಯಕ್ರಮ ನಡೆಯಲಿದ್ದು, ರಾಜಕೀಯ ಗಣ್ಯರು ಆಗಮಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ ಸೇರಿದಂತೆ ಬಿಜೆಪಿ ಹಿರಿಯ ನಾಯಕರು ಕೂಡ ಬರುವ ಸಾಧ್ಯತೆ ಇದೆ. ಮಾರ್ಚ್‌ 5ರಂದು ವರಪೂಜೆ ನೆರವೇರಲಿದೆ. ಮಾರ್ಚ್‌ 6ರಂದು ಕಾಶಿಯಾತ್ರೆ, ಮುಹೂರ್ತ ಸೇರಿದಂತೆ ಹಲವು ಧಾರ್ಮಿಕ ವಿಧಿವಿಧಾನಗಳು ನೆರವೇರಲಿವೆ. ಅಂದು ಬೆಳಿಗ್ಗೆ 9.30ರಿಂದ 10.15ರ ಸಮಯದಲ್ಲಿ ಶಿವಶ್ರೀ ಅವರೊಂದಿಗೆ ತೇಜಸ್ವಿ ಸೂರ್ಯ ವಿವಾಹವಾಗಲಿದ್ದಾರೆ. ನಂತರ ತೇಜಸ್ವಿ ಸೂರ್ಯ ಅವರ ನಿವಾಸದಲ್ಲಿ ವಧುವನ್ನು ಮನೆ ಬರಮಾಡಿಕೊಳ್ಳುವ ಕಾರ್ಯಕ್ರಮ ಜರುಗಲಿದೆ ಎಂದು ತಿಳಿದುಬಂದಿದೆ.

ಸಿವಶ್ರೀ ಸ್ಕಂದ ಪ್ರಸಾದ್ ಅವರು ಚೆನ್ನೈ ಮೂಲದ ಗಾಯಕಿ ಹಾಗೂ ಭರತನಾಟ್ಯ ಕಲಾವಿದೆ. ಬಿ.ಟೆಕ್ ಪದವೀಧರೆಯಾಗಿರುವ ಅವರು ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಸಂದರ್ಭದಲ್ಲಿ ತಮ್ಮ ಗಾಯನದ ಮೂಲಕ ಪ್ರಧಾನಿ ಮೋದಿ ಅವರ ಮೆಚ್ಚುಗೆಗೆ ಪಾತ್ರವಾಗಿದ್ದರು. ಮದುವೆಗೂ ಮುನ್ನ ತೇಜಸ್ವಿ ಸೂರ್ಯ ಅವರು ಸಿವಶ್ರೀ ಅವರೊಂದಿಗೆ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ ಆಶೀರ್ವಾದ ಪಡೆದಿದ್ದರು. ಸಿವಶ್ರೀ ಅವರು ಚೆನ್ನೈ ವಿಶ್ವವಿದ್ಯಾನಿಲಯದಿಂದ ಭರತನಾಟ್ಯದಲ್ಲಿ ಹಾಗೂ ಚೆನ್ನೈನ ಸಂಸ್ಕೃತ ಕಾಲೇಜಿನಿಂದ ಸಂಸ್ಕೃತದಲ್ಲಿ ಎಂಎ ಪದವಿ ಪಡೆದಿದ್ದಾರೆ. ಸೈಕ್ಲಿಂಗ್, ಟ್ರೆಕ್ಕಿಂಗ್ ಕೂಡ ಇವರಿಗೆ ಅಚ್ಚುಮೆಚ್ಚು, ಇವರು ತಮಿಳಿನ ಪೊನ್ನಿಯಿನ್ ಸೆಲ್ವನ್-ಭಾಗ 2ರ ಕನ್ನಡ ಆವೃತ್ತಿಯಲ್ಲಿ ಹಾಡಿಗೆ ಧ್ವನಿ ನೀಡಿದ್ದಾರೆ.

2021ರಲ್ಲಿ ಚೆನ್ನೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ತೇಜಸ್ವಿ ಸೂರ್ಯ ಅವರು ಸಿವಶ್ರೀ ಅವರನ್ನು ಸನ್ಮಾನಿಸಿದ್ದರು. ಈ ಫೋಟೋಗಳನ್ನು ಶಿವಶ್ರೀ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಇವರ ವಿವಾಹಕ್ಕೆ ಎರಡೂ ಕುಟುಂಬಗಳು ಗ್ರೀನ್‌ ಸಿಗ್ನಲ್‌ ಕೊಟ್ಟಿದ್ದು, ಕಂಕಣ ಭಾಗ್ಯ ಕೂಡಿ ಬಂದಿದೆ. ಇವರ ಮದುವೆಗೆ ರಾಜಕೀಯ ನಾಯಕರ ದಂಡು ಸೇರಲಿದೆ. ರಾಜ್ಯ ಹಾಗೂ ವಿವಿಧ ರಾಜ್ಯಗಳ ಬಿಜೆಪಿ ನಾಯಕರು ಕೂಡ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: Tejasvi Surya: ತೇಜಸ್ವಿ ಸೂರ್ಯ- ಸಿವಶ್ರೀ ಸ್ಕಂದಪ್ರಸಾದ್‌ ಮೊದಲ ಭೇಟಿಯ ಮಿಂಚು ಹೀಗಿತ್ತು!