BJP protest: ರೈತರೊಂದಿಗೆ ಸುವರ್ಣ ಸೌಧ ಮುತ್ತಿಗೆಗೆ ಯತ್ನ, ಬಿಜೆಪಿ ನಾಯಕರ ಬಂಧನ
ರೈತರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಬೆಳಗಾವಿಯಲ್ಲಿ ಬಿಜೆಪಿ ನಾಯಕರು (BJP protest) ಪ್ರತಿಭಟನೆ ನಡೆಸುತ್ತಿದ್ದು, ರೈತರೊಂದಿಗೆ ಸುವರ್ಣ ಸೌಧ ಮುತ್ತಿಗೆಗೆ ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಸಿಟಿ ರವಿ ಸೇರಿ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಲಗಾ ಗ್ರಾಮದ ಬಳಿ ಬ್ಯಾರಿಕೇಡ್ ಹಾಕಿ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದು, ಈ ವೇಳೆ ತಳ್ಳಾಟ, ನೂಕಾಟ ನಡೆದಿದೆ.
ಬಿಜೆಪಿ ಪ್ರತಿಭಟನೆ -
ಬೆಳಗಾವಿ, ಡಿ.09: ವಿಧಾನಮಂಡಲ ಅಧಿವೇಶನ (Belagavi assembly session) ನಡೆಯುತ್ತಿರುವ ಬೆಳಗಾವಿಯಲ್ಲಿ 'ಕರ್ನಾಟಕದ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ' ಬಿಜೆಪಿ ಮಂಗಳವಾರ ಸಾವಿರಾರು ರೈತರೊಂದಿಗೆ ಪ್ರತಿಭಟನೆ (BJP protest) ನಡೆಸಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra), ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ (R Ashok) ಮತ್ತು ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಹಲವಾರು ಶಾಸಕರು, ಎಂಎಲ್‌ಸಿಗಳು ಮತ್ತು ಪಕ್ಷದ ಇತರ ಹಿರಿಯ ನಾಯಕರ ನೇತೃತ್ವದಲ್ಲಿ ಮಾಲಿನಿ ಸಿಟಿ ಮೈದಾನದಲ್ಲಿ ಪ್ರತಿಭಟನಾಕಾರರ ಬೃಹತ್ ಗುಂಪು ಜಮಾಯಿಸಿತು.
ರಾಜ್ಯಕ್ಕೆ ಸಂಬಂಧಿಸಿದ ವಿವಿಧ ಸಮಸ್ಯೆಗಳು ಮತ್ತು ಕಾಂಗ್ರೆಸ್ ಸರ್ಕಾರದ 'ವೈಫಲ್ಯಗಳನ್ನು' ಎತ್ತಿ ತೋರಿಸಲು ಈ ಪ್ರತಿಭಟನೆಯನ್ನು ಆಯೋಜಿಸಲಾಗಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ರಾಜ್ಯದ ರೈತರ ಸಂಕಷ್ಟವನ್ನು ನಿರ್ಲಕ್ಷಿಸಿದೆ ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ.
#WATCH | Belagavi | BJP MLAs stage protest against the Karnataka state government to highlight the farmers' concerns in the Suvarna Soudha. pic.twitter.com/sTfWTM2X79
— ANI (@ANI) December 9, 2025
ರೈತರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಬೆಳಗಾವಿಯಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದು, ರೈತರೊಂದಿಗೆ ಸುವರ್ಣ ಸೌಧ ಮುತ್ತಿಗೆಗೆ ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಸಿಟಿ ರವಿ ಸೇರಿ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಲಗಾ ಗ್ರಾಮದ ಬಳಿ ಬ್ಯಾರಿಕೇಡ್ ಹಾಕಿ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದು, ಈ ವೇಳೆ ತಳ್ಳಾಟ, ನೂಕಾಟ ನಡೆದಿದೆ.
ಇಂದು ರೈತರ ಜೊತೆಗೆ ಬೆಳಗಾವಿ ಸುವರ್ಣ ಸೌಧಕ್ಕೆ ಬಿಜೆಪಿ ಮುತ್ತಿಗೆ
ರೈತರ ಆತ್ಮಹತ್ಯೆಯಲ್ಲಿ ಎರಡನೇ ಸ್ಥಾನ
ರೈತರ ಆತ್ಮಹತ್ಯೆಯಲ್ಲಿ ದೇಶದಲ್ಲೇ ಕರ್ನಾಟಕ 2ನೇ ಸ್ಥಾನದಲ್ಲಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಬಿಜೆಪಿ, ರೈತರ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ಕಾಟಾಚಾರಕ್ಕೆ ಅಧಿವೇಶನ ನಡೆಯುತ್ತಿದೆ. ರೈತರ ಅತ್ಮಹತ್ಯೆಯಲ್ಲಿ ದೇಶದಲ್ಲೇ ಕರ್ನಾಟಕ 2ನೇ ಸ್ಥಾನದಲ್ಲಿದೆ. ಕಾಂಗ್ರೆಸ್ಸಿಗರಿಗೆ ರೈತರ ಬಗ್ಗೆ ಮಾತನಾಡಲು ಯೋಗ್ಯತೆ ಇದೆಯಾ ಎಂದು ಕಿಡಿಕಾರಿದ್ದಾರೆ.
ಬೊಮ್ಮಾಯಿ ವಿದ್ಯಾನಿಧಿ ಜಾರಿ ಮಾಡಿದರು. ಅದಕ್ಕೂ ಹಣ ಕೊಡಲ್ಲ. ಪ್ರವಾಹ ಬರಗಾಲ ಬಂದಾಗ ಒಂದೇ ತಿಂಗಳಲ್ಲಿ ಪರಿಹಾರ ಕೊಡ್ತಿದ್ದೆವು. ಕಾಂಗ್ರೆಸ್ ಸರ್ಕಾರ 6 ತಿಂಗಳಾದ್ರೂ ಪರಿಹಾರ ಕೊಟ್ಟಿಲ್ಲ. ಯಾವ ಮುಖ ಇಟ್ಟುಕೊಂಡು ಕೇಂದ್ರದ ಬಳಿ ಪರಿಹಾರ ಕೇಳುತ್ತೀರಾ? ರಾಜ್ಯ ಸರ್ಕಾರ ದಲಿತರಿಗೆ ಮೀಸಲಿಟ್ಟಿದ್ದ ಹಣ ಬಳಕೆ ಮಾಡಿಕೊಳ್ಳುತ್ತಿದೆ. ಇದರ ಬಗ್ಗೆ ಒಬ್ಬ ದಲಿತ ನಾಯಕ ಕೂಡ ಮಾತನಾಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.