ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

BJP Jan Akrosh Yatra: ಬೆಲೆ ಏರಿಕೆ, ಮುಸ್ಲಿಂ ಮೀಸಲಾತಿ ವಿರೋಧಿಸಿ ಏ. 7ರಿಂದ ರಾಜ್ಯಾದ್ಯಂತ ಬಿಜೆಪಿ ಜನಾಕ್ರೋಶ ಯಾತ್ರೆ

BJP Jan Akrosh Yatra: ರಾಜ್ಯದಲ್ಲಿ ಭ್ರಷ್ಟಾಚಾರ, ಬೆಲೆ ಏರಿಕೆ, ಮುಸ್ಲಿಂ ಮೀಸಲಾತಿ, ಪರಿಶಿಷ್ಟ ಹಾಗೂ ಹಿಂದುಳಿದ ಸಮುದಾಯಗಳ ಕಲ್ಯಾಣ ಕಾರ್ಯಕ್ರಮಗಳಿಗೆ ಹಿನ್ನಡೆ ಉಂಟಾಗಿರುವುದನ್ನು ವಿರೋಧಿಸಿ ಬಿಜೆಪಿ ಜನಾಕ್ರೋಶ ಯಾತ್ರೆ ಹಮ್ಮಿಕೊಂಡಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಬೆಲೆ ಏರಿಕೆ ವಿರೋಧಿಸಿ ಏ. 7ರಿಂದ ರಾಜ್ಯಾದ್ಯಂತ ಬಿಜೆಪಿ ಜನಾಕ್ರೋಶ ಯಾತ್ರೆ

Profile Prabhakara R Apr 5, 2025 4:14 PM

ಬೆಂಗಳೂರು: ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ರಾಜಧಾನಿಯಲ್ಲಿ ಅಹೋರಾತ್ರಿ ಧರಣಿ ನಡೆಸಿದ ಬೆನ್ನಲ್ಲೇ ಏ. 7ರಿಂದ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆ (BJP Jan Akrosh Yatra) ನಡೆಸಲು ಬಿಜೆಪಿ ಮುಂದಾಗಿದೆ. ಭ್ರಷ್ಟಾಚಾರ, ಬೆಲೆ ಏರಿಕೆ, ಮುಸ್ಲಿಂ ಮೀಸಲಾತಿ, ಪರಿಶಿಷ್ಟ ಹಾಗೂ ಹಿಂದುಳಿದ ಸಮುದಾಯಗಳ ಕಲ್ಯಾಣ ಕಾರ್ಯಕ್ರಮಗಳಿಗೆ ಹಿನ್ನಡೆ ಉಂಟಾಗಿರುವುದರ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ ಹಮ್ಮಿಕೊಂಡಿದೆ. ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರು ಏ. 7ರಂದು ಜನಾಕ್ರೋಶ ಯಾತ್ರೆಗೆ ಚಾಲನೆ ನೀಡಲಿದ್ದಾರೆ.

ಏ.7ರಂದು ಮೈಸೂರು, ಚಾಮರಾಜನಗರ ಜಿಲ್ಲೆ, ಏ.8 ರಂದು ಬೆಳಗ್ಗೆ ಮಂಡ್ಯ, ಮಧ್ಯಾಹ್ನ ಹಾಸನದಲ್ಲಿ ಹೋರಾಟ ಇರಲಿದೆ. ಏ.9ರಂದು ಕೊಡಗು- ಮಂಗಳೂರಿನಲ್ಲಿ ಹೋರಾಟ, ಏ.10ರಂದು ಉಡುಪಿ, ಚಿಕ್ಕಮಗಳೂರಿನಲ್ಲಿ ಮೊದಲ ಹಂತದ ಹೋರಾಟ ಇದೆ ಇರಲಿದೆ.

ಅದೇ ರೀತಿ ಏಪ್ರಿಲ್ 13ರಿಂದ ಶಿವಮೊಗ್ಗ, ಉತ್ತರ ಕನ್ನಡದಲ್ಲಿ ಎರಡನೇ ಹಂತದ ಹೋರಾಟ ಇರುತ್ತದೆ. ರಾಜ್ಯದ ಪ್ರತಿ ಜಿಲ್ಲೆಗಳಲ್ಲೂ ಜನಾಕ್ರೋಶ ಯಾತ್ರೆ ನಡೆಯಲಿದೆ. ಪ್ರತಿ ಜಿಲ್ಲೆಯಲ್ಲೂ 2-3 ಕಿಮೀ ಪಾದಯಾತ್ರೆ ಬಳಿಕ ಸಭೆ ನಡೆಯಲಿದೆ.

ಒಂದು ತಿಂಗಳ ಕಾಲ ನಡೆಯಲಿದೆ ಜನಾಕ್ರೋಶ ಯಾತ್ರೆ

ಈ ಬಗ್ಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿದ್ದು, ಕಾಂಗ್ರೆಸ್ ಸರ್ಕಾರದ ಮೇಲೆ ಒತ್ತಡ ಹೇರಲು ಏಪ್ರಿಲ್ 7 ರಿಂದ ಒಂದು ತಿಂಗಳ ಕಾಲ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆ ನಡೆಯಲಿದೆ. ಈ ಯಾತ್ರೆಗೆ ಕೇಂದ್ರ ಸಚಿವ ಶ್ರೀ ಪ್ರಲ್ಹಾದ್ ಜೋಶಿ ಚಾಲನೆ ನೀಡಲಿದ್ದು, ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಿಂದ ಆರಂಭವಾಗಲಿದೆ. ವಿಧಾನಸಭೆ ಮತ್ತು ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ ಮತ್ತು ಛಲವಾದಿ ನಾರಾಯಣಸ್ವಾಮಿ ಅವರು ರಾಜ್ಯಾದ್ಯಂತ ಪ್ರತಿಭಟನೆಗಳ ನೇತೃತ್ವ ವಹಿಸಲಿದ್ದಾರೆ. ಸಂಸದರು, ಶಾಸಕರು ಮತ್ತು ಇತರ ಹಿರಿಯ ರಾಜ್ಯ ನಾಯಕರು ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಸರ್ಕಾರಿ ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ 4% ಮೀಸಲಾತಿ, ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆ ಹಣ ದುರ್ಬಳಕೆ ವಿರೋಧಿಸಿ ಪ್ರತಿದಿನ ಎರಡು ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಜನಾಕ್ರೋಶ ಯಾತ್ರೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ | BJP Karnataka: ಕಾಂಗ್ರೆಸ್‌ನ ಮುಸ್ಲಿಂ ತುಷ್ಟೀಕರಣ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಹೋರಾಟ: ಬಿ.ವೈ.ವಿಜಯೇಂದ್ರ

ಕಾಂಗ್ರೆಸ್ ಸರ್ಕಾರದ ದುರಾಡಳಿತ, ಜನಸಾಮಾನ್ಯರನ್ನು ಶೋಷಿಸುವ ಪರಿಯಲ್ಲಿ ನಿರಂತರ ಬೆಲೆ ಏರಿಕೆಯ ವಿರುದ್ಧ ‘ಬಿಜೆಪಿ-ಕರ್ನಾಟಕ’ಸಂಘಟಿಸಿದ್ದ ‘24 ಗಂಟೆಗಳ ಅಹೋ ರಾತ್ರಿ ಧರಣಿ ಸತ್ಯಾಗ್ರಹ’ ಸಂಪನ್ನಗೊಂಡು ರಾಜ್ಯದ ಜನರ ಗಮನಸೆಳೆಯುವಲ್ಲಿ ಸಫಲವಾಗಿದೆ. ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ, ಬೆಲೆ ಏರಿಕೆ ಹಾಗೂ ಸಂವಿಧಾನ ಆಶಯಕ್ಕೆ ವಿರುದ್ಧವಾಗಿ ಮುಸ್ಲಿಂ ಮೀಸಲಾತಿ, ಪರಿಶಿಷ್ಟ ಹಾಗೂ ಹಿಂದುಳಿದ ಸಮುದಾಯಗಳ ಕಲ್ಯಾಣ ಕಾರ್ಯಕ್ರಮಗಳಿಗೆ ಹಿನ್ನಡೆ ಉಂಟಾಗಿರುವುದರ ವಿರುದ್ಧ ಏಪ್ರಿಲ್ 7 ರಿಂದ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಜನಾಕ್ರೋಶ ಹೋರಾಟದ ಯಶಸ್ವಿಗೆ ಇದೇ ರೀತಿಯ ಸಹಕಾರ ನೀಡಬೇಕು ಎಂದು ರಾಜ್ಯದ ಜನತೆಯನ್ನು ಕೋರಿದ್ದಾರೆ.