ವಿದೇಶ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಕ್ರೈಂ ಫ್ಯಾಷನ್‌ ಲೋಕ ಉದ್ಯೋಗ

KPSC exam: ಕೆಪಿಎಸ್‌ಸಿ ಪರೀಕ್ಷೆ ಅಕ್ರಮ ತಡೆಗೆ ನೀಲಿ ಪೆನ್ ನಿಯಮ ಜಾರಿ

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಈವರೆಗೆ ಕಪ್ಪು ಬಣ್ಣದ ಬಾಲ್ ಪಾಯಿಂಟ್ ಪೆನ್‌ನಿಂದ ಪರೀಕ್ಷೆ ಬರೆಯಬೇಕು ಎಂದು ಅಭ್ಯರ್ಥಿಗಳಿಗೆ ಸೂಚಿಸಲಾಗುತ್ತಿತ್ತು. ಆದರೀಗ ಸೂಚನೆಯಲ್ಲಿ ಮಾರ್ಪಾಡು ಮಾಡಿ ಕೆಪಿಎಸ್‌ಸಿ ನಡೆಸುವ ಎಲ್ಲಾ ಪರೀಕ್ಷೆಗಳಲ್ಲಿ ಕಡ್ಡಾಯವಾಗಿ ನೀಲಿ ಬಣ್ಣದ ಪೆನ್ ಮಾತ್ರ ಬಳಸಬೇಕು ಎಂದು ಕೆಪಿಎಸ್‌ಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಕೆಪಿಎಸ್‌ಸಿ ಪರೀಕ್ಷೆ ಅಕ್ರಮ ತಡೆಗೆ ನೀಲಿ ಪೆನ್ ನಿಯಮ ಜಾರಿ

ಸಾಂದರ್ಭಿಕ ಚಿತ್ರ

ಹರೀಶ್‌ ಕೇರ ಹರೀಶ್‌ ಕೇರ Feb 22, 2025 7:32 AM

ಬೆಂಗಳೂರು : ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ (Competitive exam) ಅಕ್ರಮ (malpractice) ತಡೆಗೆ ಕೆಪಿಎಸ್‌ಸಿ ಮಹತ್ವದ ಕ್ರಮ ಕೈಗೊಂಡಿದ್ದು, ಪರೀಕ್ಷೆಗಳಲ್ಲಿ ನೀಲಿ ಬಣ್ಣದ ಬಾಲ್ ಪೆನ್ ಬಳಕೆಯನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ. ಕೆಪಿಎಸ್‌ಸಿಯು ಮಹತ್ವದ ಪ್ರಕಟಣೆಯೊಂದನ್ನು ಹೊರಡಿಸಿದ್ದು, ಇನ್ಮುಂದೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ (KPSC exam) ಕಡ್ಡಾಯವಾಗಿ ನೀಲಿ ಬಣ್ಣದ (Blue pen) ಬಾಲ್ ಪಾಯಿಂಟ್ ಪೆನ್ ಬಳಕೆ ಮಾಡಬೇಕು ಎಂದು ಸೂಚಿಸಿದೆ.

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಈವರೆಗೆ ಕಪ್ಪು ಬಣ್ಣದ ಬಾಲ್ ಪಾಯಿಂಟ್ ಪೆನ್‌ನಿಂದ ಪರೀಕ್ಷೆ ಬರೆಯಬೇಕು ಎಂದು ಅಭ್ಯರ್ಥಿಗಳಿಗೆ ಸೂಚಿಸಲಾಗುತ್ತಿತ್ತು. ಆದರೀಗ ಸೂಚನೆಯಲ್ಲಿ ಮಾರ್ಪಾಡು ಮಾಡಿ ಕೆಪಿಎಸ್‌ಸಿ ನಡೆಸುವ ಎಲ್ಲಾ ಪರೀಕ್ಷೆಗಳಲ್ಲಿ ಕಡ್ಡಾಯವಾಗಿ ನೀಲಿ ಬಣ್ಣದ ಪೆನ್ ಮಾತ್ರ ಬಳಸಬೇಕು ಎಂದು ಕೆಪಿಎಸ್‌ಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಸಾಮಾನ್ಯವಾಗಿ ಬಹುತೇಕ ಎಲ್ಲೆಡೆ ನೀಲಿ ಪೆನ್ ಬಳಕೆಯಲ್ಲಿದೆ. ಆದರೆ, ಕೆಪಿಎಸ್‌ಸಿ ಪರೀಕ್ಷೆಗೆ ಮಾತ್ರ ಕಪ್ಪು ಬಣ್ಣದ ಪೆನ್ ಬಳಕೆಗೆ ನಿರ್ದೇಶನ ನೀಡುವುದರಿಂದ ಅಭ್ಯರ್ಥಿಗಳು ಅನಗತ್ಯವಾಗಿ ಗೊಂದಲಕ್ಕೆ ಒಳಗಾಗುತ್ತಾರೆ. ಆಯೋಗದ ಸದಸ್ಯರು ಸಾಮಾನ್ಯವಾಗಿ ಬಳಕೆಯಲ್ಲಿರುವ ನೀಲಿ ಪೆನ್ ಬಳಕೆಗೆ ಸಲಹೆ ನೀಡಿದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ರಾಮಮಂದಿರ ಅವಹೇಳನ ಮಾಡಿದ ವ್ಯಕ್ತಿಗೆ 60 ದಿನಗಳ ಜೈಲುಶಿಕ್ಷೆ

ನರಗುಂದ: ರಾಮಮಂದಿರದ ಭಾವಚಿತ್ರದ ಮೇಲೆ ಅವಹೇಳನಕಾರಿ ಬರಹ ಬರೆದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಆರೋಪಿಗೆ 60 ದಿನಗಳ ಸಾದಾ ಕಾರಾಗೃಹ ಶಿಕ್ಷೆಯನ್ನು ವಿಧಿಸಿ ಕೋರ್ಟ್ ಆದೇಶಿಸಿದೆ. ನರಗುಂದದ ಸಿಜೆ ಮತ್ತು ಜೆಎಂಎಫ್ ಸಿ ಕೋರ್ಟ್, ಅಯೋಧ್ಯೆಯ ರಾಮಮಂದಿರದ ಭಾವಚಿತ್ರದ ಮೇಲೆ ಅವಹೇಳನಕಾರಿ ಬರಹ ಬರೆದು, ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಂತ ವ್ಯಕ್ತಿಗೆ 60 ದಿನಗಳ ಜೈಲು ವಾಸ ಹಾಗೂ 5000 ದಂಡವನ್ನು ವಿಧಿಸಿದೆ.

ನರಗುಂದದ ನಿವಾಸಿ ಅಕ್ಬರಸಾಬ ಖಾನ್ ಎಂಬವರು ಅ.24, 2014ರಂದು ರಾಮಮಂದಿರ ಚಿತ್ರದ ಮೇಲೆ ಹಿಂದಿ ಮತ್ತು ಇಂಗ್ಲೀಷ್ ನಲ್ಲಿ ಅಕ್ಷೇಪಾರ್ಹ ಸಾಲುಗಳ್ನು ಬರೆದು ಪೋಸ್ಟ್ ಮಾಡಿದ್ದರು. ಈ ಬಗ್ಗೆ ಪೊಲೀಸರು ದೂರು ದಾಖಲಿಸಿಕೊಂಡು, ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಈ ವಿವಾದ ಆಲಿಸಿದಂತ ನ್ಯಾಯಧೀಶರು ಆರೋಪಿಗೆ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.

ಇದನ್ನೂ ಓದಿ: Physical abuse: ರಾಜಧಾನಿಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ; ಪರಿಚಯಸ್ಥ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ!