Bomb Threat: ದಿಲ್ಲಿ- ಬೆಂಗಳೂರು ರೈಲಿಗೆ ಬಾಂಬ್ ಬೆದರಿಕೆ, ಆರೋಪಿ ಸೆರೆ
ತಡರಾತ್ರಿ 1 ಗಂಟೆ ಸುಮಾರಿಗೆ ಬಾಂಬ್ ಬೆದರಿಕೆ (bomb threat) ಹಿನ್ನೆಲೆಯಲ್ಲಿ ವಾಡಿ ಪೊಲೀಸರು ರೈಲಿನಲ್ಲಿ ತೀವ್ರ ತಪಾಸಣೆ ನಡೆಸಿದ್ದಾರೆ. ರಾತ್ರಿ 1:30ರವರೆಗೆ ತಪಾಸಣೆ ನಡೆಸಲಾಗಿದ್ದು, ಈ ವೇಳೆ ಬಾಂಬ್ ಬೆದರಿಕೆ ಕರೆ ಹುಸಿ ಎಂಬುದು ದೃಢವಾಗಿದೆ.

ಸಾಂದರ್ಭಿಕ ಚಿತ್ರ

ಬೆಂಗಳೂರು: ದೆಹಲಿಯಿಂದ (Delhi) ಬೆಂಗಳೂರಿಗೆ ಆಗಮಿಸುವ ಕೆಕೆ ಎಕ್ಸ್‌ಪ್ರೆಸ್ (Karnataka Express) ರೈಲಿನಲ್ಲಿ ಬಾಂಬ್ ಇಡಲಾಗಿದೆ (bomb threat) ಎಂದು ಕಿಡಿಗೇಡಿಯೊಬ್ಬ ಬೆದರಿಕೆ ಕರೆ ಮಾಡಿದ್ದಾನೆ. ಕೂಡಲೇ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದು, ಇದು ಹುಸಿ ಬಾಂಬ್ ಕರೆ ಎಂದು ಗೊತ್ತಾಗಿದೆ. ಹುಸಿ ಬಾಂಬ್ ಕರೆ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದು, ಇವನ ಹೆಸರು ದೀಪಕ್ ಸಿಂಗ್ ಎಂದು ತಿಳಿದು ಬಂದಿದೆ.
ತಡರಾತ್ರಿ 1 ಗಂಟೆ ಸುಮಾರಿಗೆ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ವಾಡಿ ಪೊಲೀಸರು ರೈಲಿನಲ್ಲಿ ತೀವ್ರ ತಪಾಸಣೆ ನಡೆಸಿದ್ದಾರೆ. ರಾತ್ರಿ 1:30ರವರೆಗೆ ತಪಾಸಣೆ ನಡೆಸಲಾಗಿದ್ದು, ಈ ವೇಳೆ ಬಾಂಬ್ ಬೆದರಿಕೆ ಕರೆ ಹುಸಿ ಎಂಬುದು ದೃಢವಾಗಿದೆ. ತನಿಖೆ ನಡೆಸಿದ ಪೊಲೀಸರು ಕರೆಯ ಮೂಲ ಬೆಂಬತ್ತಿ ಆರೋಪಿ ದೀಪಕ್ ಸಿಂಗ್‌ನನ್ನು ಬಂಧಿಸಿ ವಿಚಾರಣೆ ಮುಂದುವರಿಸಿದ್ದಾರೆ. ಬಾಂಬ್‌ಗಾಗಿ ತೀವ್ರ ತಪಾಸಣೆ ಹಿನ್ನೆಲೆಯಲ್ಲಿ ರೈಲಿನ ವೇಳಾಪಟ್ಟಿ ಅಸ್ತವ್ಯಸ್ತವಾಗಿದೆ.
ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಳವಳ್ಳಿಯ ಜಾವೀದ್ ಸೆರೆ
ಮಂಡ್ಯ : ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ (Social media) ಅವಹೇಳನಕಾರಿ ಪೋಸ್ಟ್ (Derogatory post) ಶೇರ್ ಮಾಡಿದ ಆರೋಪದಲ್ಲಿ ಮಳವಳ್ಳಿ (Mandya news) ತಾಲ್ಲೂಕಿನ ಕಿರುಗಾವಲು ಗ್ರಾಮದ ಜಾವೀದ್ ಎಂಬ ವ್ಯಕ್ತಿಯನ್ನು ಪೋಲೀಸರು ಬಂಧಿಸಿದ್ದಾರೆ. ಆರೋಪಿ ಜಾವೀದ್ ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್‌ಗೆ (Imran Khan) ಮೋದಿ ಶೂ ಧರಿಸುವಂತೆ ತೋರಿಸುವ ಎಡಿಟ್ ಮಾಡಿದ ಪೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುವ ಮೂಲಕ ವಿಕೃತಿ ಮೆರೆದಿದ್ದ ಎನ್ನಲಾಗಿದೆ.
ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಈ ಕುರಿತು ಅಧಿಕೃತ ಮಾಹಿತಿ ನೀಡಿದ್ದು, ಬಿಜೆಪಿ ಕಾರ್ಯಕರ್ತರ ದೂರಿನ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ನಾಗರಿಕ ಸಂಹಿತೆ (ಬಿಎನ್‌ಎಸ್) ಕಲಂ 152, 192, ಮತ್ತು 340 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: Actor Vinayakan: ಜೈಲರ್’ ಖ್ಯಾತಿಯ ವಿನಾಯಕನ್ ಮತ್ತೆ ಬಂಧನ; ಕಾರಣವೇನು?