ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

bus accident: ಹಿರಿಯೂರು ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್‌ಗೆ ಬೆಂಕಿ, 10 ಮಂದಿ ಸಜೀವ ದಹನ

ಲಾರಿ ಚಾಲಕನ ಅತಿವೇಗ ಹಾಗೂ ಅಜಾಗರೂಕತೆಯಿಂದ ಡಿವೈಡರ್ ದಾಟಿ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಗುದ್ದಿದ ರಭಸಕ್ಕೆ ಬಸ್ಸಿಗೆ ಬೆಂಕಿ ಹೊತ್ತುಕೊಂಡು 10ಕ್ಕೂ ಹೆಚ್ಚು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ 9 ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳು ಹಿರಿಯೂರು ಹಾಗೂ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಿರಿಯೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.

ಚಿತ್ರದುರ್ಗ: ಲಾರಿ ಡಿಕ್ಕಿಯಿಂದಾಗಿ ಖಾಸಗಿ ಬಸ್ಸೊಂದು ಬೆಂಕಿಗಾಹುತಿಯಾಗಿ 10ಕ್ಕೂ ಹೆಚ್ಚು ಮಂದಿ ಸಜೀವ ದಹನವಾದ ಘಟನೆ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ನಡೆದಿದೆ. ಹಿರಿಯೂರಿನಿಂದ ಬೆಂಗಳೂರಿಗೆ ತೆರಳುತಿದ್ದ ಲಾರಿ ಬೆಂಗಳೂರಿನಿಂದ ಶಿವಮೊಗ್ಗ ತೆರಳುತ್ತಿದ್ದ ಸೀಬರ್ಡ್ ಸ್ಲೀಪರ್‌ ಕೋಚ್ ಬಸ್ಸಿಗೆ ಗುದ್ದಿದೆ.

ಲಾರಿ ಚಾಲಕನ ಅತಿವೇಗ ಹಾಗೂ ಅಜಾಗರೂಕತೆಯಿಂದ ಡಿವೈಡರ್ ದಾಟಿ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಗುದ್ದಿದ ರಭಸಕ್ಕೆ ಬಸ್ಸಿಗೆ ಬೆಂಕಿ ಹೊತ್ತುಕೊಂಡು 10ಕ್ಕೂ ಹೆಚ್ಚು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ 9 ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳು ಹಿರಿಯೂರು ಹಾಗೂ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಿರಿಯೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.

ಹರೀಶ್‌ ಕೇರ

View all posts by this author