ರಾಜ್ಯ ಹಜ್ ಸಮಿತಿ ನಿಯಮಾವಳಿ-2025 ಜಾರಿಗೆ ಸಚಿವ ಸಂಪುಟ ಅನುಮೋದನೆ
Cabinet Meeting: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ (ನವೆಂಬರ್ 27) ಸಚಿವ ಸಂಪುಟ ಸಭೆ ನಡೆಯಿತು. ಕರ್ನಾಟಕ ರಾಜ್ಯ ಹಜ್ ಸಮಿತಿ ನಿಯಮಾವಳಿ 2025 ಅನ್ನು ಜಾರಿಗೆ ತರಲು ಸಚಿವ ಸಂಪುಟ ಅನುಮೋದನೆ ನೀಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ (ಸಂಗ್ರಹ ಚಿತ್ರ) -
Siddalinga Swamy
Nov 27, 2025 11:17 PM
ಬೆಂಗಳೂರು, ನ. 27: ಕರ್ನಾಟಕ ರಾಜ್ಯ ಹಜ್ ಸಮಿತಿ ನಿಯಮಾವಳಿ 2025 ಅನ್ನು ಜಾರಿಗೆ ತರಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ (Cabinet Meeting) ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಏನೇನು ನಿರ್ಣಯಗಳನ್ನು ಕೈಗೊಳ್ಳಲಾಯಿತು ಎಂಬುದರ ಕುರಿತ ವಿವರ ಇಲ್ಲಿದೆ.
ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
- ಕರ್ನಾಟಕ ಸರ್ಕಾರ (ವ್ಯವಹಾರ ನಿರ್ವಹಣೆ) ನಿಯಮಗಳು-1977 ಅನುಸೂಚಿ-1ರಲ್ಲಿನ ಕ್ರಮ ಸಂಖ್ಯೆ-15ರನ್ವಯ ರಾಜ್ಯ ದತ್ತಾಂಶ ಕೇಂದ್ರ ಹತ್ತಿರದ ವಿಪತ್ತು ಚೇತರಿಕಾ ಕೇಂದ್ರ ಮತ್ತು ವಿಪತ್ತು ಚೇತರಿಕಾ ಕೇಂದ್ರಗಳ ಕಾರ್ಯಾಚರಣೆ ಮತ್ತು ನಿರ್ವಹಣಾ ಸೇವೆಯನ್ನು ಐದು ವರ್ಷಗಳ ಅವಧಿಗೆ ಒದಗಿಸಲು ಅಂದಾಜು ವೆಚ್ಚ ಒಟ್ಟು 143.6 ಕೋಟಿ ರೂ. (ತೆರಿಗೆಯನ್ನು ಒಳಗೊಂಡಂತೆ) ಗಳಲ್ಲಿ ಪಡೆಯಲು ಹಾಗೂ ಸೂಕ್ತ ನಿರ್ವಹಣಾ ಸಂಸ್ಥೆಯನ್ನು ಆಯ್ಕೆ ಮಾಡಲು ಸಚಿವ ಸಂಪುಟ ನಿರ್ಧರಿಸಿದೆ.
- ಕರ್ನಾಟಕ ಸರ್ಕಾರದ (ವ್ಯವಹಾರ ನಿರ್ವಹಣೆ) ನಿಯಮಗಳು, 1977ರ ಮೊದಲನೇ ಅನುಸೂಚಿಯ ಕ್ರಮ ಸಂಖ್ಯೆ:15(1)ರನ್ವಯ “2025-26ನೇ ಸಾಲಿನಲ್ಲಿ 15ನೇ ಹಣಕಾಸು ಆಯೋಗದ ಅನುದಾನದಡಿ ರಾಜ್ಯದಾದ್ಯಂತ 114 ಆಯುಷ್ಮಾನ್ ಆರೋಗ್ಯ ಮಂದಿರಗಳ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ಅಂದಾಜು ಮೊತ್ತ 7,410.00 ಲಕ್ಷ ರೂ.ಗಳಲ್ಲಿ ಕೆ.ಟಿ.ಟಿ.ಪಿ. ಕಾಯ್ದೆ ಹಾಗೂ ನಿಯಮಗಳುನುಸಾರ ಟೆಂಡರ್ ಆಹ್ವಾನಿಸಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ಅನುಮೋದಿಸಿದೆ.
- ಕಲ್ಯಾಣ ಕರ್ನಾಟಕ ಪ್ರದೇಶದ ಜಿಲ್ಲೆಗಳಲ್ಲಿ ಅನುಬಂಧದಲ್ಲಿರುವಂತೆ ಸಣ್ಣ ನೀರಾವರಿ ಇಲಾಖೆಯಿಂದ ಚೆಕ್ ಡ್ಯಾಂ, ಕೆರೆ ಅಭಿವೃದ್ಧಿ ಕಾಮಗಾರಿಗಳನ್ನು 200 ಕೋಟಿ ರೂ. ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲು ನಿರ್ಣಯ.
- ಕರ್ನಾಟಕ ರಾಜ್ಯ ಹಜ್ ಸಮಿತಿ ನಿಯಮಾವಳಿ 2025 ಅನ್ನು ಜಾರಿಗೆ ತರಲು ಸಚಿವ ಸಂಪುಟ ಅನುಮೋದನೆ ನೀಡಿದೆ.
- ಬೆಳಗಾವಿ ಜಿಲ್ಲೆ, ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದ ರಿ.ಸ.ನಂ.189/1ರಲ್ಲಿ 1 ಎಕರೆ “ಫಡಾ ಜಮೀನ” ಅನ್ನು ಮಾರ್ಗದರ್ಶಿ ಮೌಲ್ಯದ ಶೇ. 5ಕ್ಕೆ ಕಾಂಗ್ರೆಸ್ ಭವನ ನಿರ್ಮಾಣಕ್ಕಾಗಿ ಕಾಂಗ್ರೆಸ್ ಭವನ ಟ್ರಸ್ಟ್, ಬೆಂಗಳೂರು ರವರಿಗೆ ಮಂಜೂರು ಮಾಡಲು ಸಚಿವ ಸಂಪುಟ ನಿರ್ಣಯಿಸಿದೆ.
- ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನಲ್ಲಿ ನಿರ್ಮಿಸುತ್ತಿರುವ ಪ್ರಜಾಸೌಧ ತಾಲೂಕು ಆಡಳಿತ ಕೇಂದ್ರ ಕಟ್ಟಡದ ನಿರ್ಮಾಣ ಕಾಮಗಾರಿಗೆ ಈಗಾಗಲೇ 1,000 ಲಕ್ಷ ರೂ. ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮನೋದನೆ ನೀಡಿರುವುದನ್ನೂ ಒಳಗೊಂಡಂತೆ ಈ ಕಾಮಗಾರಿಯ ವ್ಯತ್ಯಾಸದ ಪರಿಮಾಣಗಳ ಮತ್ತು ಹೆಚ್ಚುವರಿ ಅಂಶಗಳ ಹಾಗೂ ಹೆಚ್ಚುವರಿಯಾದ ಜಿ.ಎಸ್.ಟಿ. ಯನ್ನೂ ಒಳಗೊಂಡಂತೆ ಒಟ್ಟು 12.49 ಕೋಟಿ ರೂ.ಗೆ ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ.
- ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976ರ ಸೆಕ್ಷನ್-3, 4, 500 ಮತ್ತು 501ರನ್ವಯ ಶೆಡ್ಯೂಲ್-ಎ ರಲ್ಲಿ ಒಳಗೊಂಡ ಪ್ರದೇಶಗಳನ್ನು ಶೆಡ್ಯೂಲ್-ಬಿ ರಲ್ಲಿ ಆ ಪ್ರದೇಶದ ಗಡಿರೇಖೆ ಗುರುತಿಸಲಾಗಿರುವಂತೆ ಹಾಲಿ ಮೈಸೂರು ಮಹಾನಗರ ಪಾಲಿಕೆಯ ವ್ಯಾಪ್ತಿಗೆ ಸೇರ್ಪಡೆಗೊಳಿಸಲು ಹಾಗೂ ಒಟ್ಟಾರೆ ಪ್ರದೇಶವನ್ನು ‘ಬೃಹತ್ ಮೈಸೂರು ಮಹಾನಗರ ಪಾಲಿಕೆʼ ಪ್ರದೇಶವೆಂದು ಉದ್ಘೋಷಿಸಲು” ಸಚಿವ ಸಂಪುಟ ನಿರ್ಧರಿಸಿದೆ.
- Bangalore Water Supply Regulations, 1965 ರ ನಿಯಮಾವಳಿಗಳನ್ನು ಸಡಿಲಿಸಿ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಗ್ರಾಹಕರು ಪಾವತಿಸಲು ಬಾಕಿಯಿರುವ ನೀರಿನ ಬಿಲ್ಲಿನ ಸಂಬಂಧ ಈ ಕೆಳಕಂಡ ಅಂಶಗಳನ್ನೊಳಗೊಂಡ “ಏಕಕಾಲಿಕ ಸೆಟಲ್ಮೆಂಟ್ (One Time Settlement) ಯೋಜನೆಯನ್ನು ಅನುಷ್ಠಾನಗೊಳಿಸಲು ಮತ್ತು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಗ್ರಾಹಕರು ಬಾಕಿಯಿರುವ ನೀರಿನ ಬಿಲ್ಲಿನ ಅಸಲು ಮೊತ್ತವನ್ನು ಏಕಕಾಲದಲ್ಲಿ ಪಾವತಿಸಿದಲ್ಲಿ ಬಡ್ಡಿ ದಂಡ ಮತ್ತು ಇತರೆ ಶುಲ್ಕಗಳನ್ನು ಶೇಕಡಾ 100 ರಷ್ಟು ಮನ್ನಾ ಮಾಡಲು; ಏಕಕಾಲಿಕ ಸೆಟಲ್ಮೆಂಟ್ (One Time Settlement) ಯೋಜನೆಯನ್ನು 03 ತಿಂಗಳ ಅವಧಿಗೆ ಸೀಮಿತಗೊಳಿಸಿ ಜಾರಿಗೊಳಿಸಲು, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಬಾಕಿಯಿರುವ ಮೊತ್ತಗಳನ್ನು ಲೆಕ್ಕ ಪತ್ರದಲ್ಲಿ ಸಮನ್ವಯಗೊಳಿಸಲು ಸಚಿವ ಸಂಪುಟ ನಿರ್ಣಯಿಸಿದೆ.
- ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿನ ಘನತ್ಯಾಜ್ಯ ಸಮರ್ಪಕ ನಿರ್ವಹಣೆಗಾಗಿ (Operation and Maintenance of Landfill Sites” ಪ್ಯಾಕೇಜಿನ ಕಾಮಗಾರಿಗಳನ್ನು 100 ಕೋಟಿ ರೂ. ಅಂದಾಜು ಮೊತ್ತದಲ್ಲಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತ (BSWML) ಮೂಲಕ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ.
- ರಾಣಿ ಚನ್ನಮ್ಮ ವಿಶ್ವವಿದ್ಯಾಲಯವನ್ನು “ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ” ಎಂದು ಮರುನಾಮಕರಣಗೊಳಿಸಲು; ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳು (ಎರಡನೇ ತಿದ್ದುಪಡಿ) ವಿಧೇಯಕ, 2025ಕ್ಕೆ ಸಚಿವ ಸಂಪುಟ ಅನುಮೋದಿಸಿದೆ.
- ರಾಜ್ಯದ 10 ಕಿರು ಬಂದರುಗಳಿಂದ ಕಬ್ಬಿಣದ ಅದಿರು ರಪ್ತು ಮಾಡುವುದನ್ನು ನಿಷೇದಿಸಿ ಆದೇಶಿಸಿರುವ ಸರ್ಕಾರದ ಆದೇಶ ಸಂರ್ಖಯೆ: ಲೋಇ 186 ಪಿಎಸ್ಪಿ 2010 ದಿನಾಂಕ: 26.07.2010 ಅನ್ನು ಹಿಂಪಡೆಯಲು ಮತ್ತು “ಕರ್ನಾಟಕ ಕಿರು ಬಂದರುಗಳಲ್ಲಿ ಕಬ್ಬಿಣದ ಅದಿರು ನಿರ್ವಹಣಾ ನೀತಿ-2025” Standard Operating Procedure for Export and Import and Trade of Iron Ore from the Non Major Ports of Karnataka Namely- Karnataka Non – Major Ports Iron Ore Handling Policy-2025 ಜಾರಿಗೆ ತರಲು ಸಚಿವ ಸಂಪುಟ ನಿರ್ಣಯಿಸಿದೆ.
- ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಹೊರವಲಯದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ನೂತನ ಸ್ಯಾಟ್‌ಲೈಟ್ ಬಸ್ ನಿಲ್ದಾಣದ ಕಾಮಗಾರಿಯನ್ನು ಆರ್ಥಿಕ ಪರಿಣಾಮದಲ್ಲಿ ತಿಳಿಸಿರುವಂತೆ ಒಟ್ಟು ಅಂದಾಜು ವೆಚ್ಚ 17.50 ಕೋಟಿ ರೂ.ಗಳಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ಅನುಮೋದನೆ ನೀಡಿದೆ
- ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಈಗಾಗಲೇ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲು ಹೊರಡಿಸಿರುವ ಜಾಹೀರಾತು ಸಂಖ್ಯೆ: 1/2019ರನ್ವಯ 1000 ಚಾಲಕರ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.
- ಕಬಿನಿ ಎಡದಂಡೆ ನಾಲೆಯ ಡೀಪ್ಕಟ್ ಭಾಗಕ್ಕೆ ಕಟ್ ಆಂಡ್ ಕವರ್ ಹಾಗೂ ಅಡ್ಡಮೋರಿಗಳ ನಿರ್ಮಾಣ ಕಾಮಗಾರಿ ಮತ್ತು ಕಬಿನಿ ಎಡದಂಡೆ ನಾಲೆಯ ವಿತರಣಾ ಕಾಲುವೆ-1ರಿಂದ 19ರ ವರೆಗಿನ ಅಭಿವೃದ್ಧಿ ಕಾಮಗಾರಿಯ 50 ಕೋಟಿ ರೂ. ಮೊತ್ತದ ಅಂದಾಜು ಪ್ರಸ್ತಾವನೆಗೆ ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ಅನುಮೋದಿಸಿದೆ.
- ಬೀದರ್ ಜಿಲ್ಲೆಯ ಕಮಠಾಣಾ ಗ್ರಾಮ ಪಂಚಾಯತಿ, ಮನ್ನಾಎಖೇಳ್ಳಿ ಗ್ರಾಮ ಪಂಚಾಯತ್, ಹುಲಸೂರು ಗ್ರಾಮ ಪಂಚಾಯತ್, ಬೆಳಗಾವಿ ಜಿಲ್ಲೆಯ ಅಂಕಲಿ ಗ್ರಾಮ ಪಂಚಾಯತ್, ಮೈಸೂರು ಜಿಲ್ಲೆಯ ಸಾಲಿಗ್ರಾಮ ಗ್ರಾಮ ಪಂಚಾಯತ್, ಬೆಂಗಳೂರು ಗ್ರಾ. ಜಿಲ್ಲೆಯ ತ್ಯಾಮಗೊಂಡ್ಲು ಗ್ರಾಮ ಪಂಚಾಯತ್, ಬೆಳಗಾವಿ ಜಿಲ್ಲೆಯ ಸುರೇಬಾನ ಮತ್ತು ಮನಿಹಾಳ ಗ್ರಾಮ ಪಂಚಾಯತಿ, ಕಟಕೋಳ ಗ್ರಾಮ ಪಂಚಾಯತ್, ಉತ್ತರ ಕನ್ನಡ ಜಿಲ್ಲೆಯ ಮಾವಳ್ಳಿ-1 &2ಗಳನ್ನು, ಯಾದಗಿರಿ ಜಿಲ್ಲೆಯ ವಡಗೇರಾ ಗ್ರಾಮ ಪಂಚಾಯತ್‌ಗಳನ್ನು ಪಟ್ಟಣ ಪಂಚಾಯತ್ ಆಗಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ.
ʼಶಾಲೆಯ ಅಂಗಳದಲ್ಲಿ ತಾರಾಲಯʼ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ
- ಬೆಂಗಳೂರು ದಕ್ಷಿಣ ಜಿಲ್ಲೆಯ ಹಾರೋಹಳ್ಳಿ ಪಟ್ಟಣ ಪಂಚಾಯತ್ ಅನ್ನು ಪುರಸಭೆಯಾಗಿ, ಬೆಳಗಾವಿ ಜಿಲ್ಲೆಯ ರಾಮದುರ್ಗ ಪುರಸಭೆ ಇನ್ನು ಮುಂದೆ ನಗರಸಭೆಯಾಗಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ.