ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Cabinet meeting: ಜಾತಿ ಗಣತಿ ವರದಿ ಜಾರಿ ಬಗ್ಗೆ ಚರ್ಚೆಗೆ ಏ.17ರಂದು ವಿಶೇಷ ಸಚಿವ ಸಂಪುಟ ಸಭೆ

Cabinet meeting: ಎಚ್.ಕಾಂತರಾಜ ನೇತೃತ್ವದ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2015ರ ಗಣಕೀಕರಣಗೊಳಿಸಿದ ದತ್ತಾಂಶಗಳನ್ನು ಉಪಯೋಗಿಸಿಕೊಂಡು ಕೆ. ಜಯಪ್ರಕಾಶ ಹೆಗ್ಡೆ ನೇತೃತ್ವದ ಆಯೋಗವು “ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2015ರ ದತ್ತಾಂಶಗಳ ಅಧ್ಯಯನ ವರದಿ-2024” ವರದಿಯನ್ನು ಸಿದ್ಧಪಡಿಸಿ 2024ರ ಫೆ.29ರಂದು ಸರ್ಕಾರಕ್ಕೆ ಸಲ್ಲಿಸಲಾಗಿತ್ತು.

ಜಾತಿ ಗಣತಿ ವರದಿ ಬಗ್ಗೆ ಚರ್ಚೆಗೆ ಏ.17ರಂದು ಸಚಿವ ಸಂಪುಟ ಸಭೆ

Profile Prabhakara R Apr 11, 2025 10:16 PM

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಲ್ಲಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2015ರ (ಜಾತಿ ಗಣತಿ) ದತ್ತಾಂಶಗಳ ಅಧ್ಯಯನ ವರದಿಯನ್ನು ಸಚಿವ ಸಂಪುಟದಲ್ಲಿ ಶುಕ್ರವಾರ ಮಂಡಿಸಲಾಯಿತು. ಈ ವರದಿ ಕುರಿತು ಚರ್ಚಿಸಲು ಏ.17 ರಂದು ವಿಶೇಷ ಸಚಿವ ಸಂಪುಟ ಸಭೆಯನ್ನು ಆಯೋಜಿಸಲಾಗಿದೆ. ಆ ಸಭೆಯಲ್ಲಿ ಕರ್ನಾಟಕ ರಾಜ್ಯದ ಶೈಕ್ಷಣಿಕ, ಸಾಮಾಜಿಕ ಸಮೀಕ್ಷಾ ವರದಿಯ (Caste Census) ಕುರಿತು ಚರ್ಚಿಸಲಾಗುವುದು ಎಂದು ಸಭೆಯಲ್ಲಿ ಸರ್ವಾನುಮತದ ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ ಲಕೋಟೆಯನ್ನು ತೆರೆದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಸಂಜಯ ಶೆಟ್ಟೆಣ್ಣನವರ ಸಚಿವ ಸಂಪುಟಕ್ಕೆ ವಿವರಿಸಿದರು. ಸಮೀಕ್ಷಾ ವರದಿಯ ಮುಚ್ಚಿದ ಲಕೋಟೆಯನ್ನು ಸಚಿವ ಸಂಪುಟ ಸಭೆಯಲ್ಲಿ ತೆರೆದು ಪರಿಶೀಲಿಸಲು ಸಚಿವ ಸಂಪುಟದ ಮುಂದೆ ಮಂಡಿಸಲಾಗಿದೆ.

2024ರ ಫೆ. 29 ರಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯಾಧ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ವರದಿಯನ್ನು 54 ಮಾನದಂಡಗಳಿಗೆ ಅನುಗುಣವಾಗಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015ರ ದತ್ತಾಂಶಗಳ ಅಧ್ಯಯನ 2024 ಮತ್ತು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015ರ ಅಂಕಿ-ಅಂಶಗಳನ್ನು ಒಳಗೊಂಡ ವರದಿಗಳನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾಗಿತ್ತು. ರಾಜ್ಯದ 6.35 ಕೋಟಿ ಜನಸಂಖ್ಯೆಯಲ್ಲಿ 5.98 ಕೋಟಿ ಜನಸಂಖ್ಯೆ ಜನಗಣತಿಯಲ್ಲಿ ಒಳಗೊಂಡಿದೆ. 1.35 ಕೋಟಿ ಕುಟುಂಬಗಳು ಶೇ 94.17 ರಷ್ಟು ಮಾಹಿತಿ ಸಂಗ್ರಹಣೆಯಲ್ಲಿ ಪಾಲ್ಗೊಂಡಿವೆ. 37 ಲಕ್ಷ ಕುಟುಂಬಗಳು ಸಮೀಕ್ಷೆಯಲ್ಲಿ ಪಾಲ್ಗೊಂಡಿಲ್ಲ ಎಂದು ಸಚಿವರು ವಿವರಿಸಿದರು.

ಎಚ್. ಕಾಂತರಾಜ ನೇತೃತ್ವದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು 2015ನೇ ಸಾಲಿನಲ್ಲಿ ರಾಜ್ಯಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಏಪ್ರಿಲ್ 11, 2015 ರಿಂದ ಪ್ರಾರಂಭಿಸಿ, ಮೇ 30, 2015 ರಂದು ಪೂರ್ಣಗೊಳಿಸಿದೆ.

ಈ ಸಮೀಕ್ಷೆಯಡಿ ಪ್ರತಿಯೊಂದು ಕುಟುಂಬದ ಸಾಮಾಜಿಕ, ಶೈಕ್ಷಣಿಕ ಆರ್ಥಿಕ, ರಾಜಕೀಯ ಪ್ರಾತಿನಿಧ್ಯ ಮತ್ತು ಔದ್ಯೋಗಿಕ ಸ್ಥಿತಿಗತಿಗಳ ಬಗ್ಗೆ 54 ಮಾನದಂಡಗಳನ್ನೊಳಗೊAಡ ಕುಟುಂಬದ ಅನುಸೂಚಿ-3ರಲ್ಲಿ ಮಾಹಿತಿಯನ್ನು ಸಂಗ್ರಹಿಸಲಾಗಿರುತ್ತದೆ. ಸಮೀಕ್ಷೆಯ ಉದ್ದೇಶಕ್ಕಾಗಿ ಈ ಕೆಳಕಂಡ 6 ವಿಷಯ ತಜ್ಞರನ್ನು ನೇಮಕ ಮಾಡಿಕೊಂಡು ಒಟ್ಟು 16 ವಿಷಯ ತಜ್ಞರ ಸಭೆಗಳನ್ನು ನಡೆಸಿ ವರದಿಗೆ ಬೇಕಾದ ತಃಖ್ತೆಗಳನ್ನು ಮತ್ತು ಮಾನದಂಡಗಳನ್ನು ಸಿದ್ಧ ಪಡಿಸಲಾಗಿದೆ.

ವಿಷಯ ತಜ್ಞರು:

  1. ಪ್ರೊ. ಜೋಗನ್ ಶಂಕರ್ ಕುಲಪತಿ, ಕುವೆಂಪು ವಿಶ್ವವಿದ್ಯಾಲಯ, ಶಿವಮೊಗ್ಗ
  2. ಪ್ರೊ. ಅಬ್ದುಲ್ ಅಜೀಜ್ ಪ್ರಾಧ್ಯಾಪಕರು, ಅರ್ಥಶಾಸ್ತ್ರ, ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ, ಬೆಂಗಳೂರು.
  3. ಡಾ. ಆಂಬ್ರೋಸ್ ಪಿಂಟೋ.ಎಸ್.ಜೆ, ಪ್ರಾಧ್ಯಾಪಕರು, ರಾಜ್ಯಶಾಸ್ತ್ರ, ಸೈಂಟ್ ಅಲೋಸಿಯಸ್ ಪದವಿ ಕಾಲೇಜು, ಬೆಂಗಳೂರು.
  4. ಡಾ. ಸಿ.ಎಂ. ಲಕ್ಷ್ಮಣ್, ಸಹಾಯಕ ಪ್ರಾಧ್ಯಾಪಕರು, ಜನಸಂಖ್ಯಾ, ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ, ಬೆಂಗಳೂರು
  5. ಲಕ್ಷ್ಮೀಪತಿ, ನಿರ್ದೇಶಕರು (ನಿವೃತ್ತ), ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ, ಬೆಂಗಳೂರು.
  6. ಪ್ರೊ. ರಾಜಲಕ್ಷ್ಮೀ ಕಾಮತ್, ಸೆಂಟರ್ ಫಾರ್ ಪಬ್ಲಿಕ್ ಪಾಲಿಸಿ, ಐಐಎಂ ಬೆಂಗಳೂರು ಅವರ ಪರವಾಗಿ ನವೀನ್ ಭಾರತಿ, ಐಐಎಂ, ಬೆಂಗಳೂರು ಅವರನ್ನು ಸಮೀಕ್ಷೆಗಾಗಿ ನೇಮಿಸಲಾಗಿತ್ತು.

ಸಮೀಕ್ಷೆಯಲ್ಲಿ ಲಭ್ಯವಾಗಿರುವ ಅಂಕಿ-ಅಂಶಗಳನ್ನು ಆಯಾ ಜಿಲ್ಲೆಗಳಲ್ಲಿಯೇ ಗಣಕೀಕರಣಗೊಳಿಸಲಾಗಿದ್ದು, ಭಾರತ್ ಎಲೆಕ್ರಾನಿಕ್ಸ್ ಲಿಮಿಟೆಡ್ ಮೂಲಕ ಗಣಕೀಕರಣಕ್ಕಾಗಿ ರೂ.43.09 ಕೋಟಿಗಳನ್ನು ಬಿ.ಇ.ಎಲ್‌ನೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. 2015ರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಾಗಿ ಕೇಂದ್ರ ಸರ್ಕಾರದಿಂದ ರೂ.7.00 ಕೋಟಿ ಮತ್ತು ರಾಜ್ಯ ಸರ್ಕಾರದಿಂದ ರೂ.185.79 ಕೋಟಿ, ಹೀಗೆ ಒಟ್ಟು ರೂ.192.79 ಕೋಟಿ ಬಿಡುಗಡೆ ಮಾಡಲಾಗಿರುತ್ತದೆ.

ಸಮೀಕ್ಷೆಗಾಗಿ ಇದುವರೆವಿಗೂ ಒಟ್ಟು ರೂ.165.51 ಕೋಟಿಗಳನ್ನು ವೆಚ್ಚ ಮಾಡಲಾಗಿದೆ. 2015ರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಗಣಕೀಕರಣಗೊಳಿಸಿ ಅಂಕಿ-ಅಂಶಗಳನ್ನು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸಂಸ್ಥೆಯವರು ವ್ಯಾಲಿಡೇಷನ್ ಮಾಡಿ ವರದಿಯನ್ನು ನೀಡಿದ್ದು, ಅದರಂತೆ ಅಂತಿಮವಾಗಿ ಎಸ್.ಇ.ಎಸ್ 2015 ಡಾಟಾ ಈಸ್ ಕಂಸಿಸ್ಟೆಂಟ್ ವಿತ್ 2011 ಎಂದು ಸೆನ್ಸಸ್ ದಾಖಲಿಸಿರೆ. 2019ರ ಸೆ.21ರಂದು ಸರ್ಕಾರದ ಆದೇಶದಲ್ಲಿ ಆಯೋಗದ ಅಧ್ಯಕ್ಷರಾಗಿದ್ದ ಎಚ್.ಕಾಂತರಾಜ ರವರ ಮತ್ತು ಸದಸ್ಯರುಗಳ ಪದಾವಧಿಯು ಮುಕ್ತಾಯಗೊಂಡಿದ್ದರಿಂದ, ಸರ್ಕಾರಕ್ಕೆ ಸಾಮಾಜಿಕ ಮತ್ತು ಶೈಕ್ಷ ಣಿಕ ಸಮೀಕ್ಷೆಯ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿಲ್ಲ. ನಂತರ ಕೆ. ಜಯಪ್ರಕಾಶ ಹೆಗ್ಡೆ ಅವರ ನೇತೃತ್ವದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು 2020ರ ನ.23ರಂದು ಸರ್ಕಾರದಿಂದ ನೇಮಕಗೊಂಡಿತ್ತು ಎಂದು ಸಚಿವರು ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | ಗಿಗ್ ಕಾರ್ಮಿಕರಿಗೆ ಗುಡ್‌ ನ್ಯೂಸ್‌; ಸಾಮಾಜಿಕ ಭದ್ರತೆ ವಿಧೇಯಕ ಜಾರಿಗೆ ಸುಗ್ರೀವಾಜ್ಞೆ ಹೊರಡಿಸಲು ಕ್ಯಾಬಿನೆಟ್‌ ಒಪ್ಪಿಗೆ

ಎಚ್.ಕಾಂತರಾಜ ನೇತೃತ್ವದ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2015ರ ಗಣಕೀಕರಣಗೊಳಿಸಿದ ದತ್ತಾಂಶಗಳನ್ನು ಉಪಯೋಗಿಸಿಕೊಂಡು ಕೆ. ಜಯಪ್ರಕಾಶ ಹೆಗ್ಡೆ ನೇತೃತ್ವದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು “ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2015ರ ದತ್ತಾಂಶಗಳ ಅಧ್ಯಯನ ವರದಿ-2024” ವರದಿಯನ್ನು ಸಿದ್ದಪಡಿಸಿ ದಿನಾಂಕ: 29.02.2024 ರಂದು ಸರ್ಕಾರಕ್ಕೆ ಸಲ್ಲಿಸಲಾಗಿರುತ್ತದೆ ಎಂದು ತಿಳಿಸಿದರು.