ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Utthana Essay Competition 2026: ಉತ್ಥಾನ ವಾರ್ಷಿಕ ಪ್ರಬಂಧ ಸ್ಪರ್ಧೆಗೆ ಪ್ರಬಂಧಗಳ ಆಹ್ವಾನ; ಅ. 20 ಕೊನೆಯ ದಿನ

Essay Competition: ಉತ್ಥಾನ ಮಾಸಪತ್ರಿಕೆಯು ಕಳೆದ ಒಂದು ದಶಕದಿಂದ ಕಾಲೇಜು ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ವಾರ್ಷಿಕ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸುತ್ತಾ ಬಂದಿದ್ದು, 2026ನೇ ಸಾಲಿನ ಕಾಲೇಜು ವಿದ್ಯಾರ್ಥಿ ಪ್ರಬಂಧ ಸ್ಪರ್ಧೆಗೆ ಪ್ರಬಂಧಗಳನ್ನು ಆಹ್ವಾನಿಸಲಾಗಿದೆ. ಪ್ರಬಂಧ ತಲುಪಿಸಲು ಅಕ್ಟೋಬರ್ 20 ಕೊನೆಯ ದಿನವಾಗಿದೆ.

ಉತ್ಥಾನ ವಾರ್ಷಿಕ ಪ್ರಬಂಧ ಸ್ಪರ್ಧೆಗೆ ಪ್ರಬಂಧಗಳ ಆಹ್ವಾನ

ʼಉತ್ಥಾನ ಕಾಲೇಜು ವಿದ್ಯಾರ್ಥಿ ಪ್ರಬಂಧ ಸ್ಪರ್ಧೆ 2026ʼ ರ ಪೋಸ್ಟರ್ ಅನ್ನು ಆರ್‌ಎಸ್‌ಎಸ್‌ ಸಹ ಸರಕಾರ್ಯವಾಹ ಮುಕುಂದ ಸಿ.ಆರ್. ಬಿಡುಗಡೆಗೊಳಿಸಿದರು. -

Profile
Siddalinga Swamy Aug 12, 2026 4:09 PM

ಬೆಂಗಳೂರು, ಆ.11: ಉತ್ಥಾನ ಮಾಸಪತ್ರಿಕೆ ವತಿಯಿಂದ ಕಾಲೇಜು ವಿದ್ಯಾರ್ಥಿಗಳಿಗಾಗಿ ರಾಜ್ಯ ಮಟ್ಟದ ವಾರ್ಷಿಕ ಪ್ರಬಂಧ ಸ್ಪರ್ಧೆಯನ್ನು (Utthana Essay Competition 2026) ಆಯೋಜಿಸಲಾಗಿದೆ. “ವಂದೇ ಮಾತರಂ-150: ರಾಷ್ಟ್ರೀಯ ಅಸ್ಮಿತೆಗೆ ಸ್ಫೂರ್ತಿ, ಐತಿಹಾಸಿಕ ಮಹತ್ವ-ಪ್ರಭಾವ ಮತ್ತು ಸಮಕಾಲೀನ ಪ್ರಸ್ತುತತೆ” ಎಂಬ ವಿಷಯದ ಕುರಿತ ಈ ಪ್ರಬಂಧ ಸ್ಪರ್ಧೆಗೆ ಪದವಿ ಹಾಗೂ ಮೇಲ್ಪಟ್ಟ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ.

ʼಉತ್ಥಾನ ಕಾಲೇಜು ವಿದ್ಯಾರ್ಥಿ ಪ್ರಬಂಧ ಸ್ಪರ್ಧೆ 2026ʼರ ಪೋಸ್ಟರ್ ಅನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹ ಸರಕಾರ್ಯವಾಹ ಮುಕುಂದ ಸಿ.ಆರ್. ಅವರು ಬಿಡುಗಡೆಗೊಳಿಸಿದರು. ಹಿರಿಯ ಲೇಖಕ ದು.ಗು. ಲಕ್ಷ್ಮಣ, ರಾಷ್ಟ್ರೋತ್ಥಾನ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕುಮಾರ್, ಪ್ರಧಾನ ಕಾರ್ಯದರ್ಶಿ ನಾ. ದಿನೇಶ್ ಹೆಗ್ಡೆ, ರಾಷ್ಟ್ರೋತ್ಥಾನದ ಖಜಾಂಚಿ ಕೆ.ಎಸ್. ನಾರಾಯಣ ಹಾಗೂ ಉತ್ಥಾನದ ಸಂಪಾದಕ ಅನಿಲ್ ಕುಮಾರ್ ಮೊಳಹಳ್ಳಿ ಉಪಸ್ಥಿತರಿದ್ದರು.

ಉತ್ಥಾನ ಮಾಸಪತ್ರಿಕೆಯು ಕಳೆದ ಒಂದು ದಶಕಗಳಿಂದ ಕಾಲೇಜು ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ವಾರ್ಷಿಕ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸುತ್ತಾ ಬಂದಿದ್ದು, 2026ನೇ ಸಾಲಿನ ಕಾಲೇಜು ವಿದ್ಯಾರ್ಥಿ ಪ್ರಬಂಧ ಸ್ಪರ್ಧೆಗೆ ಪ್ರಬಂಧಗಳನ್ನು ಆಹ್ವಾನಿಸಲಾಗಿದೆ. ಪ್ರಬಂಧ ಸ್ಪರ್ಧೆಯು ಕನ್ನಡದಲ್ಲಿ ಇರುತ್ತದೆ ಮತ್ತು 2000 ಪದಗಳು ಮೀರದಂತೆ ಇರಬೇಕು. ಪ್ರಬಂಧ ತಲುಪಲು ಕೊನೆಯ ದಿನಾಂಕ: ಅಕ್ಟೋಬರ್ 20, 2026. ಪದವಿ, ತತ್ಸಮಾನ ಮತ್ತು ಸ್ನಾತಕೋತ್ತರ ಕಾಲೇಜು ವಿದ್ಯಾರ್ಥಿಗಳು ಪ್ರಬಂಧವನ್ನು ಬರೆಯಬಹುದು. ಸ್ಪರ್ಧೆಗೆ ಕಳುಹಿಸುವ ಪ್ರಬಂಧವು ವಿದ್ಯಾರ್ಥಿಯ ಸ್ವಂತ ರಚನೆಯಾಗಿರಬೇಕು. ಪ್ರಬಂಧದ ಕೈಬರಹವನ್ನು (ಝೆರಾಕ್ಸ್ ಕಳುಹಿಸುವಂತಿಲ್ಲ) ಅಂಚೆ ಮೂಲಕ ಅಥವಾ ನುಡಿ/ಯೂನಿಕೋಡ್ ತಂತ್ರಾಂಶದಲ್ಲಿ ಸಿದ್ಧಪಡಿಸಿ ಇಮೇಲ್ ಮೂಲಕ ಕಳುಹಿಸಬೇಕು.

Utthana Katha Spardhe 2026: ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆ-2026ಕ್ಕೆ ಕಥೆಗಳ ಆಹ್ವಾನ; ಅ.10 ಕೊನೆಯ ದಿನ

ಆಯ್ಕೆಗೊಂಡ ಪ್ರಬಂಧಕ್ಕೆ ಮೊದಲ ಬಹುಮಾನ (ರೂ. 10,000), ಎರಡನೆಯ ಬಹುಮಾನ (ರೂ. 8,000), ಮೂರನೆಯ ಬಹುಮಾನ (ರೂ. 5,000) ಹಾಗೂ ಹತ್ತು ಮೆಚ್ಚುಗೆಯ ಬಹುಮಾನಗಳು (ತಲಾ ರೂ. 2,000) ಹಾಗೂ ಪ್ರಶಸ್ತಿ ಪತ್ರವನ್ನು ನೀಡಲಾಗುವುದು. ಪ್ರಬಂಧವನ್ನು ಕಳುಹಿಸಬೇಕಾದ ವಿಳಾಸ: ಸಂಪಾದಕರು, ‘ಉತ್ಥಾನʼ ವಾರ್ಷಿಕ ಪ್ರಬಂಧ ಸ್ಪರ್ಧೆ – 2026, ‘ಕೇಶವಶಿಲ್ಪʼ, ಕೆಂಪೇಗೌಡನಗರ, ಬೆಂಗಳೂರು – 560 004, ಇ-ಮೇಲ್: [email protected] ದೂ: 7795441894.