ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Caste census: ರಾಜ್ಯದಲ್ಲಿ ಸೆ.22 ರಿಂದ ಅ.7ರವರೆಗೆ ಜಾತಿ ಸಮೀಕ್ಷೆ; ಅಧಿಕೃತ ಆದೇಶ ಹೊರಡಿಸಿದ ಸರ್ಕಾರ

Social and Educational Survey - 2025: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯವನ್ನು ಸೆ.22 ರಿಂದ ಅ.7ರವರೆಗೆ ಕೈಗೊಳ್ಳಲು ಉದ್ದೇಶಿಸಿದ್ದು, ಈ ಪ್ರಸ್ತಾವನೆಯನ್ನು ಕೂಲಂಕಷವಾಗಿ ರಾಜ್ಯ ಸರ್ಕಾರ ಪರಿಶೀಲಿಸಿ ಅನುಮೋದನೆ ನೀಡಿದೆ.

ರಾಜ್ಯದಲ್ಲಿ ಸೆ.22 ರಿಂದ ಅ.7ರವರೆಗೆ ಜಾತಿ ಸಮೀಕ್ಷೆ; ಅಧಿಕೃತ ಆದೇಶ

-

Prabhakara R Prabhakara R Sep 19, 2025 9:25 PM

ಬೆಂಗಳೂರು: ರಾಜ್ಯದಲ್ಲಿ ಜಾತಿ ಸಮೀಕ್ಷೆ ಕಾರ್ಯಕ್ಕೆ ಸರ್ಕಾರ ಅಧಿಕೃತ ಮುದ್ರೆ ಹೊತ್ತಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಕುರಿತು ಸಮೀಕ್ಷೆಯನ್ನು (Caste census) ಸೆ.22 ರಿಂದ ಅ.7ರವರೆಗೆ ಕೈಗೊಳ್ಳುವಂತೆ ಹಿಂದುಳಿತ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಅಶ್ವತ್ಥ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯವನ್ನು ಸೆ.22 ರಿಂದ ಅ.7ರವರೆಗೆ ಕೈಗೊಳ್ಳಲು ಉದ್ದೇಶಿಸಿದ್ದು, ಈಗಾಗಲೇ ಜಿಲ್ಲಾಧಿಕಾರಿಗಳು ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ವಿಡಿಯೋ ಕಾನ್ಸರೆನ್ಸ್ ಮೂಲಕ ಜಿಲ್ಲಾ ಮತ್ತು ತಾಲೂಕು ಹಂತದಲ್ಲಿ ಹಾಗೂ ಸಮೀಕ್ಷಾದಾರರಿಗೆ ಅಗತ್ಯ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಹಾಗೂ ಸಾರ್ವಜನಿಕರನ್ನು ಸಮೀಕ್ಷಾ ಕಾರ್ಯದಲ್ಲಿ ಪೂರ್ಣವಾಗಿ ಪಾಲ್ಗೊಳ್ಳಲು ಅರಿವು ಮೂಡಿಸಲು ತಿಳಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಸೆ.22 ರಿಂದ ಅ. 7ವರೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ರಾಜ್ಯಾದ್ಯಂತ ಕೈಗೊಳ್ಳಲು ದಿನಾಂಕ ನಿಗದಿಪಡಿಸಿ ಆದೇಶ ಹೊರಡಿಸುವಂತೆ ಕೋರಿ ಪ್ರಸ್ತಾವನೆ ಸಲ್ಲಿಸಿದ್ದರು. ಪ್ರಸ್ತಾವನೆಯನ್ನು ಕೂಲಂಕಷವಾಗಿ ಸರ್ಕಾರ ಪರಿಶೀಲಿಸಿ ಜಾತಿ ಗಣತಿಗೆ ಅನುಮೋದನೆ ನೀಡಿ ಆದೇಶಿಸಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಆನ್‌ಲೈನ್‌ ಮೂಲಕವೂ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಅವಕಾಶ

ಸೆಪ್ಟೆಂಬರ್‌ 22 ರಿಂದ ಅಕ್ಟೋಬರ್‌ 7ರ ವರೆಗೆ ಕರ್ನಾಟಕ ರಾಜ್ಯ ಹಿಂದುಳಿದ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳಲಿದೆ. ಈ ಸಮೀಕ್ಷೆ ಕಾರ್ಯದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು. ಯಾರೂ ಕೂಡಾ ಸಮೀಕ್ಷೆಯಿಂದ ಹೊರಗುಳಿಯಬಾರದು. ಆನ್‌ಲೈನ್‌ ಮೂಲಕವೂ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಸಹಾಯವಾಣಿ ಸಂಖ್ಯೆ 8050770004 ಗೆ ಕರೆ ಮಾಡಬಹುದು ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಈ ಸುದ್ದಿಯನ್ನೂ ಓದಿ | Caste Census: ಯಾವುದೇ ಕಾರಣಕ್ಕೂ ʼಜಾತಿ ಸಮೀಕ್ಷೆʼ ಮುಂದೂಡಲ್ಲ ಎಂದ ಸಿಎಂ

ಸಮೀಕ್ಷಾದಾರರು ಪ್ರತಿ ಸದಸ್ಯರ ವಿದ್ಯಾರ್ಹತೆ, ಕೌಶಲ್ಯ ತರಬೇತಿಯ ಅಗತ್ಯತೆ, ಆದಾಯ, ಕುಟುಂಬದ ಸ್ಥಿರ ಮತ್ತು ಚರಾಸ್ತಿ ವಿವರಗಳು, ಧರ್ಮ, ಜಾತಿ, ಉಪಜಾತಿ ಹಾಗೂ ಕುಲಕಸುಬು ಮತ್ತಿತರ ಮಾಹಿತಿಯನ್ನು ಸಂಗ್ರಹಿಸಲಿದ್ದಾರೆ.