ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

CET Exam 2025: ದ್ವಿತೀಯ ಪಿಯುಸಿ ಪರೀಕ್ಷೆ-2ರ ರಿಸಲ್ಟ್‌ ಬಳಿಕವೇ ಸಿಇಟಿ ಫಲಿತಾಂಶ ಪ್ರಕಟ

CET Exam 2025: ಏಪ್ರಿಲ್ 15ರಿಂದ 17ರವರೆಗೆ ಸಿಇಟಿ ಪರೀಕ್ಷೆ ನಡೆಯಲಿದೆ. ವಿವಿಧ ವೃತ್ತಿಪರ ಕೋರ್ಸ್ ಗಳಿಗೆ ನಡೆಸುವ ಸಿಇಟಿ ಪರೀಕ್ಷೆಗೆ (CET Exam 2025 time table) ಜನವರಿ 23ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು. ಈ ವರ್ಷ 3 ಲಕ್ಷ 30 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯುವ ನಿರೀಕ್ಷೆಯಿದೆ.

ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಬಳಿಕವೇ ಸಿಇಟಿ ಫಲಿತಾಂಶ ಪ್ರಕಟ

Profile Prabhakara R Apr 11, 2025 8:21 PM

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶ ಬಿಡುಗಡೆ ಬಳಿಕವೇ ಸಿಇಟಿ ಫಲಿತಾಂಶ ಪ್ರಕಟಿಸುವ ನಿರ್ಧಾರವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತೆಗೆದುಕೊಂಡಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಾದ ಪ್ರಸನ್ನ . ಎಚ್‌ ತಿಳಿಸಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಅವರು ಮಾಹಿತಿ ಹಂಚಿಕೊಂಡಿದ್ದು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶ ಪ್ರಕಟವಾದ ಬಳಿಕ ಸಿಇಟಿ ಫಲಿತಾಂಶ ಪ್ರಕಟಿಸಲಿದೆ. ಜತೆಗೆ ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ1 ಮತ್ತು 2ರ ಪೈಕಿ ಯಾವ ಪರೀಕ್ಷೆಯಲ್ಲಿ ಉತ್ತಮ ಅಂಕವಿದೆಯೋ ಅದನ್ನು ಪರಿಗಣಿಸಲಾಗುವುದು ಎಂದಿದ್ದಾರೆ.



ಏಪ್ರಿಲ್‌ 15ರಿಂದ ಸಿಇಟಿ ಪರೀಕ್ಷೆ ಆರಂಭ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 2025ರ ಸಾಮಾನ್ಯ ಪ್ರವೇಶ ಪರೀಕ್ಷೆ (Karnataka CET Exam 2025) ದಿನಾಂಕಗಳನ್ನು ಪ್ರಕಟಿಸಿದೆ. ಏಪ್ರಿಲ್ 15ರಿಂದ 17ರವರೆಗೆ ಸಿಇಟಿ ಪರೀಕ್ಷೆ ನಡೆಯಲಿದೆ. ವಿವಿಧ ವೃತ್ತಿಪರ ಕೋರ್ಸ್ ಗಳಿಗೆ ನಡೆಸುವ ಸಿಇಟಿ ಪರೀಕ್ಷೆಗೆ (CET Exam 2025 time table) ಜನವರಿ 23ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಈ ವರ್ಷ 3 ಲಕ್ಷ 30 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯುವ ನಿರೀಕ್ಷೆಯಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಮಾಹಿತಿ ನೀಡಿದ್ದಾರೆ.

ಸಿಇಟಿ ಕನ್ನಡ ಭಾಷೆಯ ಪರೀಕ್ಷೆ ಏಪ್ರಿಲ್ 15ಕ್ಕೆ ಹಿಂದೂಡಿಕೆ ಆಗಿದೆ. ಅಂದರೆ ಈ ಹಿಂದೆ ಪರೀಕ್ಷೆಯನ್ನು ಏಪ್ರಿಲ್ 18 ಕ್ಕೆ ನಿಗದಿಪಡಿಸಲಾಗಿತ್ತು. ಆದರೆ ಏಪ್ರಿಲ್ 18, ಶುಕ್ರವಾರ ಕ್ರೈಸ್ತ ಧಾರ್ಮಿಕ ಹಬ್ಬವಾದ ಗುಡ್ ಫ್ರೈಡೇ ಇರುವುದರಿಂದ ಸರ್ಕಾರ ಪರೀಕ್ಷೆ ದಿನಾಂಕವನ್ನು ಬದಲಿಸಿದೆ. ಏಪ್ರಿಲ್ 15ರಂದು ಬೆಂಗಳೂರು, ಮಂಗಳೂರು, ವಿಜಯಪುರ, ಬೆಳಗಾವಿ ಕೇಂದ್ರಗಳಲ್ಲಿ ಮಾತ್ರ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. 10ನೇ ತರಗತಿಯಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿತವರು, ಕನ್ನಡ ಮಾಧ್ಯಮದಲ್ಲಿ ಓದಿದವರಿಗೆ ಮತ್ತು ಕೆಇಎ ನಡೆಸಿದ ಕನ್ನಡ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೂ ವಿನಾಯಿತಿ ಇರುತ್ತದೆ.

ಇದನ್ನೂ ಓದಿ: CET Exam 2025: ಏಪ್ರಿಲ್‌ 16ರಿಂದ ಸಿಇಟಿ ಪರೀಕ್ಷೆ, ಜನವರಿ 26ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ

ಏಪ್ರಿಲ್ 16ರಂದು 10:30 ರಿಂದ ಭೌತಶಾಸ್ತ್ರ ಹಾಗೂ ಮಧ್ಯಾಹ್ನ 2:30 ರಿಂದ ರಾಸಾಯನಶಾಸ್ತ್ರ ಪರೀಕ್ಷೆಗಳು ನಡೆಯಲಿದ್ದು, ಮರುದಿನ ಅಂದರೆ ಏಪ್ರಿಲ್ 17 ರಂದು ಬೆಳಗ್ಗೆ ಗಣಿತ ಮತ್ತು ಮಧ್ಯಾಹ್ನ ಜೀವಶಾಸ್ತ್ರ ಪರೀಕ್ಷೆ ನಡೆಯಲಿದೆ.