ಚಾಮರಾಜನಗರ: ನಿಧಿ ಆಸೆಗಾಗಿ ಹೆತ್ತ ತಾಯಿಯನ್ನೇ ಪಾಪಿ ಪುತ್ರನೊಬ್ಬ ಬಲಿ ಕೊಡಲು ಮುಂದಾಗಿದ್ದ ಆಘಾತಕಾರಿ ಘಟನೆ ಚಾಮರಾಜನಗರ ತಾಲೂಕಿನ ಸಾಗಡೆ ಗ್ರಾಮದಲ್ಲಿ ನಡೆದಿದೆ. ಇಂದು ಹುಣ್ಣಿಮೆ ಹಿನ್ನೆಲೆಯಲ್ಲಿ ಬಲಿ ಕೊಟ್ಟರೆ ನಿಧಿ ಸಿಗುತ್ತದೆಂದು ಫ್ಲ್ಯಾನ್ ಮಾಡಿದ್ದ ಕೊಂಡಯ್ಯನ ಮಾದಶೆಟ್ಟಿ ಎಂಬಾತ, 80 ವರ್ಷದ ಕಣ್ಣು ಕಾಣದ ಮತ್ತು ಕಿವಿ ಕೇಳದ ತಾಯಿ ಮಾದಮ್ಮಶೆಟ್ಟಿಯನ್ನು ಬಲಿ ಕೊಡಲು ಸಿದ್ಧತೆ ನಡೆಸಿದ್ದ.
ಬೆಳಗ್ಗೆ ತನ್ನ ಮನೆಯಲ್ಲೇ 4 ಅಡಿ ಗುಂಡಿ ತೆಗೆದು ಮಾಟದ ಮಡಕೆ ಇಟ್ಟು ನಿಂಬೆಹಣ್ಣು, ಅರಿಶಿನ ಕುಂಕುಮ ಹಾಗೂ ಕಳಸವಿಟ್ಟು ಪೂಜೆ ಮಾಡಿದ್ದ. ಈ ಬಗ್ಗೆ ಅನುಮಾನಗೊಂಡು ಅಕ್ಕಪಕ್ಕದ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು. ಮನೆಗೆ ಪೊಲೀಸರು ಬರುತ್ತದ್ದಂತೆ ಮಾಟಗಾರ ಎಸ್ಕೇಪ್ ಆಗಿದ್ದು, ಮಾದಶೆಟ್ಟಿಯನ್ನು ಬಂಧಿಸಲಾಗಿದೆ. ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರೀತಿ ಹೆಸರಲ್ಲಿ ವಂಚನೆ; ಕಾಂಗ್ರೆಸ್ ಮುಖಂಡ ಮದನ್ ರಾಜ್ ವಿರುದ್ಧ ದೂರು ಸಲ್ಲಿಕೆ
ಮೈಸೂರು: ಪ್ರೀತಿ ಹೆಸರಲ್ಲಿ ವಂಚಿಸಿದ ಆರೋಪದಲ್ಲಿ ಟಿ.ನರಸೀಪುರದ ಕಾಂಗ್ರೆಸ್ ಮುಖಂಡ ಮದನ್ ರಾಜ್ (Madan Raj) ವಿರುದ್ಧ ದೂರು ದಾಖಲಾಗಿದೆ. ಟಿ ನರಸೀಪುರ ಪೊಲೀಸ್ ಠಾಣೆಯಲ್ಲಿ ಯುವತಿ ದೂರು ನೀಡಿದ್ದಾರೆ. ಮದನ್ ರಾಜ್ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಾರೆ. ಆತನ ಜತೆ ನಾನಿದ್ದ ಫೋಟೋಗಳಿರುವ ಮೊಬೈಲ್‌ಗಳನ್ನು ನನ್ನಿಂದ ಕಿತ್ತುಕೊಂಡಿದ್ದಾರೆ. ಅಲ್ಲದೇ ಮದುವೆಗೆ ಒತ್ತಾಯಿಸಿದಾಗ, ಇಬ್ಬರು ವಿಷ ಕುಡಿಯೋಣ ಎಂದು ನನಗೆ ಮಾತ್ರ ವಿಷ ಕೊಟ್ಟು ಕೊಲೆಗೆ ಯತ್ನಿಸಿದ್ದರು. ಈಗ ಮತ್ತೊಬ್ಬ ಯುವತಿ ಜತೆ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ ಎಂದು ಉಲ್ಲೇಖಿಸಿದ್ದಾಳೆ. ಈ ಸಂಬಂಧ ಮದನ್ ರಾಜ್ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಹುಡುಕಾಟ ನಡೆಸುತ್ತಿದ್ದಾರೆ.
ಮಲೆ ಮಹದೇಶ್ವರ ಬೆಟ್ಟದಲ್ಲಿ ಕೆಎಸ್ಆರ್ಟಿಸಿ ಬಸ್ ಪಲ್ಟಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ