ಚಾಮರಾಜನಗರ, ಏ.02: ಪೋಷಕರು ತಮ್ಮ ಪ್ರೀತಿಗೆ (love) ವಿರೋಧ ವ್ಯಕ್ತಪಡಿಸಿದ್ದಕ್ಕೆ ಮನನೊಂದ ಪ್ರೇಮಿಗಳು (lovers) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (Self harming) ಶರಣಾಗಿರುವ ಘಟನೆ ಚಾಮರಾಜನಗರದಲ್ಲಿ (Chamarajanagara) ನಡೆದಿದೆ. ಮೃತರು 19 ವರ್ಷದ ನದಿಯಾ ಹಾಗೂ 21 ವರ್ಷದ ನಾಗೇಂದ್ರ ಎಂದು ತಿಳಿದುಬಂದಿದೆ.
ನಾಗೇಂದ್ರ ಪಾಲಾರ್ ಗ್ರಾಮದ ನದಿಯಾಳನ್ನು ಪ್ರೀತಿಸುತ್ತಿದ್ದ. ಇವರ ಮದುವೆಗೆ ಎರಡು ಮನೆಯವರು ಒಪ್ಪಿರಲಿಲ್ಲ. ಇನ್ನು ನಾಗೇಂದ್ರ ಪೊನ್ನಾಚಿಯಲ್ಲಿರುವ ತನ್ನ ತಾತನ ಮನೆಗೆ ಮೂರು ದಿನಗಳ ಹಿಂದೆ ನದಿಯಾಳನ್ನು ಕರೆದುಕೊಂಡು ಹೋಗಿದ್ದ. ತಮ್ಮ ಮಗಳು ನಾಪತ್ತೆಯಾಗಿದ್ದಾಳೆಂದು ಪೋಷಕರು ಮಲೆ ಮಹದೇಶ್ವರ ಬೆಟ್ಟದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ವಿಷಯ ತಿಳಿದು ಹೆದರಿದ ನಾಗೇಂದ್ರ ಮತ್ತು ನದಿಯಾ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಮಲೆ ಮಹದೇಶ್ವರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಪಪ್ರಚಾರಕ್ಕೆ ನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
ಚಿತ್ರದುರ್ಗ: ಅಧ್ಯಾಪಕನ ಜೊತೆ ಸಂಬಂಧ ಕಲ್ಪಿಸಿ ಅಪಪ್ರಚಾರ ಮಾಡಿದ ಹಿನ್ನೆಲೆಯಲ್ಲಿ ಮನನೊಂದು ಬಿಎಎಂಎಸ್ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ನಗರದ ಬಸವ ಲೇಔಟ್‌ನಲ್ಲಿ ನಡೆದಿದೆ. ಹೊಳಲ್ಕೆರೆ ಪಟ್ಟಣದ ಬಸವ ಲೇಔಟ್‌ನ ಮನೆಯಲ್ಲಿ ಲಿಖಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಾಧ್ಯಾಪಕ ಡಾ. ರಾಜು ಅವರೊಂದಿಗೆ ಸಂಬಂಧವಿದೆ ಎಂಬ ಸುಳ್ಳು ಸುದ್ದಿ ಹಬ್ಬಿಸಿ, ತನ್ನ ವ್ಯಕ್ತಿತ್ವಕ್ಕೆ ಧಕ್ಕೆ ತಂದಿದ್ದರಿಂದ ನೊಂದಿದ್ದ ವಿದ್ಯಾರ್ಥಿನಿ ಈ ಕಠಿಣ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.
Chikkaballapuara: ಕಂಟೈನರ್‌ಗೆ ಕಾರು ಡಿಕ್ಕಿ, ಟೆಕ್ಕಿ ಸೇರಿ ಇಬ್ಬರು ಸಾವು
ಆತ್ಮಹತ್ಯೆಗೂ ಮುನ್ನ ಲಿಖಿತಾ ಬರೆದಿಟ್ಟಿರುವ ಡೆತ್ ನೋಟ್‌ನಲ್ಲಿ ಪ್ರಾಧ್ಯಾಪಕ ಡಾ. ರಾಜು, ಅವರ ಪತ್ನಿ ನಿಶಾ ಹಾಗೂ ಕೆಲವು ವಿದ್ಯಾರ್ಥಿನಿಯರ ಹೆಸರುಗಳನ್ನು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ. ಇವರ ಕಿರುಕುಳ ಮತ್ತು ಅಪಪ್ರಚಾರವೇ ನನ್ನ ಸಾವಿಗೆ ಕಾರಣ ಎಂದು ಅವರು ಡೆತ್ ನೋಟ್‌ನಲ್ಲಿ ಬರೆದಿದ್ದಾರೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.