ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ನೀರಿನ ಸಮಸ್ಯೆ ಕುರಿತು ಮಕ್ಕಳ ಪತ್ರಕ್ಕೆ ಸ್ಪಂದಿಸಿದ ಸಿಎಂ; ಬಜೆಟ್‌ನಲ್ಲಿ ನೀರಾವರಿ ಯೋಜನೆ ಘೋಷಣೆ

Karnataka Budget 2026: ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಕೆಂಪಯ್ಯನಹಟ್ಟಿ ಗ್ರಾಮದ ನೀರಿನ‌ ಸಮಸ್ಯೆ ಕುರಿತು ಮಕ್ಕಳು ಪತ್ರ ಬರೆದು, ಸಮಸ್ಯೆಗೆ ಪರಿಹಾರ ಕಲ್ಪಿಸಿಕೊಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಈ ಸಾಲಿನ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ʼಉಡುತೊರೆಹಳ್ಳ ನೀರಾವರಿ ಯೋಜನೆʼಯನ್ನು ಘೋಷಿಸಿ, 490 ಕೋಟಿ ರೂ. ಅನುದಾನವನ್ನು ಸಹ ಮೀಸಲಿಟ್ಟಿದ್ದಾರೆ.

ಸಿಎಂ ಸಿದ್ದರಾಮಯ್ಯ.

ಚಾಮರಾಜನಗರ: ನೀರಿನ ಸಮಸ್ಯೆ ಕುರಿತು ಚಾಮರಾಜನಗರ ಜಿಲ್ಲೆಯ ಗ್ರಾಮವೊಂದರ ಮಕ್ಕಳು ಬರೆದಿದ್ದ ಮನವಿ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ (CM Siddaramaiah) ಬಜೆಟ್‌ನಲ್ಲಿ ಸ್ಪಂದಿಸಿದ್ದು, ಗ್ರಾಮಕ್ಕೆ ನೀರಾವರಿ ಯೋಜನೆಯನ್ನು ಘೋಷಿಸಿ, ಅನುದಾನವನ್ನು ಸಹ ಮೀಸಲಿಟ್ಟಿದ್ದಾರೆ. ಈ ಬಗ್ಗೆ ಸ್ವತಃ ಸಿಎಂ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಅವರು, ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಕೆಂಪಯ್ಯನಹಟ್ಟಿ ಗ್ರಾಮದ ನೀರಿನ‌ ಸಮಸ್ಯೆ ಕುರಿತು ಕೆಲವು ಸಮಯದ ಹಿಂದೆ ಮಕ್ಕಳು ಪತ್ರ ಬರೆದು, ಸಮಸ್ಯೆಗೆ ಪರಿಹಾರ ಕಲ್ಪಿಸಿಕೊಡುವಂತೆ ನನ್ನಲ್ಲಿ ಮನವಿ ಮಾಡಿದ್ದರು.

ಮಕ್ಕಳ ಕೋರಿಕೆಯ ಮೇರೆಗೆ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದಾಗ‌ ಆ ಹಳ್ಳಿಗೆ ಸಮರ್ಪಕ ನೀರಾವರಿ ಯೋಜನೆಯೊಂದರ ಅಗತ್ಯತೆ ಕಂಡುಬಂದ ಹಿನ್ನೆಲೆಯಲ್ಲಿ ಈ ಸಾಲಿನ ಬಜೆಟ್‌ನಲ್ಲಿ "ಉಡುತೊರೆಹಳ್ಳ ನೀರಾವರಿ ಯೋಜನೆ"ಯನ್ನು ಘೋಷಿಸಿ, 490 ಕೋಟಿ ರೂ. ಅನುದಾನವನ್ನು ಸಹ ಮೀಸಲಿಟ್ಟಿದ್ದೇನೆ.



ಅಹವಾಲು ಸಲ್ಲಿಸಿದ ಮಕ್ಕಳ ಧ್ವನಿ ಎಳೆಯದಾದರೂ, ಅದನ್ನು ಕಡೆಗಣಿಸದೆ ಮುಕ್ತವಾಗಿ‌ ಆಲಿಸಿ, ಸಕಾರಾತ್ಮಕವಾಗಿ ಸ್ಪಂದಿಸುವ ತಾಯಿಯ ಹೃದಯ ನಮ್ಮ ಸರ್ಕಾರದ್ದು. ಪುಟಾಣಿ ಮಕ್ಕಳ‌ ಧನ್ಯವಾದವನ್ನು ಅತ್ಯಂತ ಪ್ರೀತಿಯಿಂದ ಸ್ವೀಕರಿಸಿದ್ದೇನೆ.

Karnataka Budget 2026: ಸರ್ವರ ಹಿತ ಕಾಯ್ದೆ ಬಜೆಟ್, ಶಿಕ್ಷಣ ಆರೋಗ್ಯ ಕ್ಷೇತ್ರಕ್ಕೂ ಒತ್ತು: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ನಂಬಿಕೆ, ನನ್ನ ಮತ್ತು ನಮ್ಮ ಸರ್ಕಾರದ ಮೇಲೆ ವಿಶ್ವಾಸವಿಟ್ಟು ತಮ್ಮ ಕಷ್ಟವನ್ನು ನಮ್ಮ ಗಮನಕ್ಕೆ ತಂದು, ಇಂದು ಸಾವಿರಾರು ಕುಟುಂಬಗಳ ಭವಿಷ್ಯ ಬದಲಾಗಲು ಕಾರಣರಾದ ಪುಟಾಣಿಗಳಿಗೂ ಪ್ರೀತಿತುಂಬಿದ ಅಪ್ಪುಗೆಗಳು ಎಂದು ಸಿಎಂ ತಿಳಿಸಿದ್ದಾರೆ.