CM Siddaramaiah: ಬಾಣಂತಿಯರ ಸರಣಿ ಸಾವು; ಸಮಿತಿ ವರದಿ ಬಂದ ನಂತರ ಸೂಕ್ತ ಕ್ರಮ; ಸಿದ್ದರಾಮಯ್ಯ
ಬಳ್ಳಾರಿ ಆಸ್ಪತ್ರೆಗೆ ಇಂದು ಆರೋಗ್ಯ ಸಚಿವರು ಹಾಗೂ ಇಲಾಖೆ ಅಧಿಕಾರಿಗಳು ಕೂಡ ಭೇಟಿ ನೀಡಿ ಬಾಣಂತಿ ಸಾವಿನ ಕುರಿತು ಪರಿಶೀಲನೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.
Vishwavani News
December 7, 2024
ಚಾಮರಾಜನಗರ: ಬಳ್ಳಾರಿ ಆಸ್ಪತ್ರೆಗೆ ಇಂದು ಆರೋಗ್ಯ ಸಚಿವರು ಹಾಗೂ ಇಲಾಖೆ ಅಧಿಕಾರಿಗಳು ಕೂಡ ಭೇಟಿ ನೀಡಿ ಬಾಣಂತಿ ಸಾವಿನ ಕುರಿತು ಪರಿಶೀಲನೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ಚಾಮರಾಜನಗರದ ನರಿಪುರ ಗ್ರಾಮದ ಹೆಲಿಪ್ಯಾಡ್‌ನಲ್ಲಿ ಇಂದು ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ಈ ಸುದ್ದಿಯನ್ನೂ ಓದಿ | PDO Exam: ಪಿಡಿಒ ಪರೀಕ್ಷೆ; ಡಿ.8ರಂದು ಬೆಳಗ್ಗೆ 5.30ಕ್ಕೆ ಮೆಟ್ರೋ ರೈಲು ಸೇವೆ ಆರಂಭ
ಬಳ್ಳಾರಿ ಆಸ್ಪತ್ರೆಯ ಮೇಲೆ ಇಂದು ಲೋಕಾಯುಕ್ತ ದಾಳಿಯಾಗಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ನಾಲ್ಕು ಬಾಣಂತಿಯರು ಮರಣ ಹೊಂದಿದಾಗ ಸಭೆ ಕರೆಯಲಾಗಿತ್ತು. ಐದನೇ ಬಾಣಂತಿ ಮೃತಪಟ್ಟಿರುವ ಬಗ್ಗೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿಯೂ ಚರ್ಚೆ ನಡೆದಿದೆ. ಕಳಪೆ ಗುಣಮಟ್ಟದ ಔಷಧ ಸರಬರಾಜು ಮಾಡುತ್ತಿರುವ ಕಂಪನಿಯನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ ಹಾಗೂ ಔಷಧ ನಿಯಂತ್ರಕರನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದರು.
ಈ ಸುದ್ದಿಯನ್ನೂ ಓದಿ | Job Guide: ಪದವೀಧರರಿಗೆ ಗುಡ್‌ನ್ಯೂಸ್; ಜನರಲ್ ಇನ್ಶೂರೆನ್ಸ್ ಕಾರ್ಪೋರೇಷನ್ ಆಫ್ ಇಂಡಿಯಾದಲ್ಲಿದೆ 110 ಹುದ್ದೆ; ಹೀಗೆ ಅಪ್ಲೈ ಮಾಡಿ
ತಪ್ಪಿತಸ್ಥರ ಮೇಲೆ ಕ್ರಮ
ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿ ವರದಿ ಸಲ್ಲಿಸಲು ಸೂಚಿಸಿದೆ. ವರದಿ ಬಂದ ನಂತರ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.