CM Siddaramaiah: ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

CM Siddaramaiah: ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ಸಾವಯವ ಉತ್ಪನ್ನಗಳ ಮಾರಾಟಕ್ಕೆ ಎಪಿಎಂಸಿಗಳಲ್ಲಿ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗುವುದು. ಕರ್ನಾಟಕ ಸರ್ಕಾರ ಸಿರಿಧಾನ್ಯಗಳ ಕೃಷಿ, ಮಾರುಕಟ್ಟೆ ಹಾಗೂ ಇತರೆ ಸೌಲಭ್ಯಗಳನ್ನು ನೀಡುವ ಮೂಲಕ ಸಿರಿಧಾನ್ಯ ಕೃಷಿಯ ಅಭಿವೃದ್ಧಿಗೆ ಪ್ರೋತ್ಸಾಹ ನೀಡಲು ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

CM Siddaramaiah (6)
Profile Siddalinga Swamy Jan 23, 2025 7:47 PM

ಬೆಂಗಳೂರು, ಜ.23, 2025: ಕೃಷಿ ಪ್ರಧಾನವಾದ ಮಂಡ್ಯ (Mandya) ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಸೇರಿದಂತೆ ಒಂದು ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ತೀರ್ಮಾನಿಸಲಾಗಿದ್ದು, ಇದರಿಂದ ಮಂಡ್ಯ, ಹಾಸನ, ಮೈಸೂರು, ಚಾಮರಾಜನಗರ ಭಾಗದ ರೈತರಿಗೆ ಸಾವಯವ ಹಾಗೂ ಸಿರಿಧಾನ್ಯ ಕೃಷಿಗೆ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ಇಂದು ಅಂತಾರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ 2025 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರೈತರ ಹಲವು ದಿನಗಳ ಬೇಡಿಕೆಯಾದ ಎಂಎಸ್‌ಪಿ (ಕನಿಷ್ಟ ಬೆಂಬಲ ಬೆಲೆ) ಯೋಜನೆಯನ್ನು ಜಾರಿಗೆ ತರಬೇಕು ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ಸಿರಿಧಾನ್ಯಗಳ ಸೇವನೆ ಆರೋಗ್ಯಕ್ಕೆ ಉತ್ತಮ

ಭಾರತ ಕೃಷಿ ಪ್ರಧಾನ ದೇಶವಾಗಿದ್ದು, ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿಗಳಾಗಿದ್ದೇವೆ. ದೇಶಕ್ಕೆ ಸ್ವಾತಂತ್ರ್ಯ ದೊರೆತ ಸಂದರ್ಭದಲ್ಲಿ ಆಹಾರದ ಕೊರತೆಯಿತ್ತು. ಆದರೆ ಈಗ ಹಲವಾರು ಆಹಾರ ಧಾನ್ಯಗಳನ್ನು ಭಾರತ ರಫ್ತು ಮಾಡುತ್ತಿರುವುದು ಹೆಮ್ಮೆಯ ವಿಷಯ. ವಿರಳ ಮಳೆಯಿರುವ ಪ್ರದೇಶಗಳಲ್ಲಿ ಹೆಚ್ಚಾಗಿ ಸಾವಯವ ಸಿರಿಧಾನ್ಯಗಳನ್ನು ಬೆಳೆಯಲಾಗುತ್ತದೆ. ಕೃಷಿ ಕುಟುಂಬಕ್ಕೆ ಸೇರಿದ ತಮ್ಮ ಕುಟುಂಬದವರೂ ಕೂಡ ಸಿರಿಧಾನ್ಯಗಳ ಕೃಷಿ ಮಾಡುತ್ತಿದ್ದುದನ್ನು ಸ್ಮರಿಸಿದ ಮುಖ್ಯಮಂತ್ರಿಗಳು, ರಾಗಿ ತಿಂದವನು ನಿರೋಗಿ ಎಂಬಂತೆ, ಸಿರಿಧಾನ್ಯಗಳ ಸೇವನೆ ಆರೋಗ್ಯಕ್ಕೆ ಉತ್ತಮವಾಗಿದೆ ಎಂದು ತಿಳಿಸಿದರು.

ಸಿರಿಧಾನ್ಯ ಉತ್ಪಾದನೆಯಲ್ಲಿ ಕರ್ನಾಟಕ 3ನೇ ಸ್ಥಾನ

ಭಾರತದಲ್ಲಿ ಸಿರಿಧಾನ್ಯಗಳ ಉತ್ಪಾದನೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೆಚ್ಚಿನ ಒತ್ತು ನೀಡಿದೆ. ಸಾವಯವ ಕೃಷಿ ವಿಸ್ತಿರ್ಣದಲ್ಲಿ ಭಾರತವು ವಿಶ್ವದಲ್ಲಿ 2ನೇ ಸ್ಥಾನ ಹಾಗೂ ಒಟ್ಟು ಸಾವಯವ ಉತ್ಪಾದಕರಲ್ಲಿ ಮೊದಲನೇ ಸ್ಥಾನದಲ್ಲಿದೆ. ವಿಶ್ವದಲ್ಲಿ ಅಂದಾಜು 903.61 ಲಕ್ಷ ಟನ್‌ಗಳಷ್ಟು ಸಿರಿಧಾನ್ಯಗಳ ಉತ್ಪಾದನೆಯಾಗುತ್ತಿದ್ದು, ಇದರಲ್ಲಿ ಶೇ.38.50 ರಷ್ಟು ಪಾಲು ನಮ್ಮ ಭಾರತ ದೇಶದ್ದಾಗಿದ್ದು, ವಿಶ್ವದ ಅತಿದೊಡ್ಡ ಸಿರಿಧಾನ್ಯ ಉತ್ಪಾದನೆಯಲ್ಲಿ ಮುಂಚೂಣಿ ರಾಷ್ಟ್ರವಾಗಿದೆ. ನಮ್ಮ ರಾಜ್ಯವು ಸಿರಿಧಾನ್ಯಗಳ ವಿಸ್ತೀರ್ಣ ಮತ್ತು ಉತ್ಪಾದನೆಯಲ್ಲಿ ದೇಶದಲ್ಲಿಯೇ 3ನೇ ಸ್ಥಾನದಲ್ಲಿರುತ್ತದೆ ಎಂದರು.

ಸಾವಯವ ಕೃಷಿ ನೀತಿ

ಭಾರತದ ಒಟ್ಟು ಸಾವಯವ ರಫ್ತು ಪ್ರಮಾಣವು 2.61 ಲಕ್ಷ ಟನ್ ಆಗಿದ್ದು, ಈ ಪೈಕಿ ಸಾವಯವದ ಆಹಾರ ರಫ್ತಿನಿಂದ ಸುಮಾರು 4008 ಕೋಟಿ ರೂ.ಗಳಷ್ಟು ಆದಾಯವಾಗಿರುತ್ತದೆ. ಸಾವಯವ ಮತ್ತು ಸಿರಿಧಾನ್ಯಗಳಿಗೆ ವ್ಯವಸ್ಥಿತ ಮಾರುಕಟ್ಟೆ ಮತ್ತು ಸರಬರಾಜು ಸರಪಳಿಯನ್ನು ಕಲ್ಪಿಸುವ ಉದ್ದೇಶದೊಂದಿಗೆ ಪರಿಷ್ಕೃತ ʼಸಾವಯವ ಕೃಷಿ ನೀತಿʼ ಯನ್ನು ನಮ್ಮ ಸರ್ಕಾರವು 2017ರಲ್ಲಿ ಹೊರತಂದಿದೆ. ರಾಜ್ಯದ ರೈತರಲ್ಲಿ ಸಾವಯವ ಕೃಷಿ ಪದ್ಧತಿಯ ಬಗ್ಗೆ ಅರಿವು ಮೂಡಿಸಲು ʼಸಾವಯವ ಭಾಗ್ಯ ಯೋಜನೆʼ ಯನ್ನು 2013 ನೇ ಸಾಲಿನಲ್ಲಿ ಹೊರತಂದು ಹೋಬಳಿಮಟ್ಟದಲ್ಲಿ ಮಾದರಿ ಸಾವಯವ ಗ್ರಾಮಗಳನ್ನು ಸ್ಥಾಪಿಸಿ ರೈತರನ್ನು ಒಗ್ಗೂಡಿಸಿ ಉತ್ತೇಜಿಸಲಾಗಿದೆ ಎಂದರು.

ರಾಜ್ಯದ ಸಿರಿಧಾನ್ಯ ಕ್ಷೇತ್ರವನ್ನು ವಿಸ್ತರಿಸುವ ನಿಟ್ಟಿನಲ್ಲಿ ʼರೈತ ಸಿರಿʼ ಯೋಜನೆಯಡಿ ಪ್ರಮುಖ ಸಿರಿಧಾನ್ಯಗಳಾದ ಊದಲು, ನವಣೆ, ಹಾರಕ, ಕೊರಲೆ, ಸಾಮೆ ಮತ್ತು ಬರಗು ಬೆಳೆಗಳನ್ನು ಬೆಳೆಯುವ ರೈತರಿಗೆ ಪ್ರತಿ ಹೆಕ್ಟೇರ್‌ಗೆ ರೂ. 10,000/- ಗಳಂತೆ ಗರಿಷ್ಠ 2 ಹೆಕ್ಟೇರ್‌ಗಳಿಗೆ ಪ್ರೋತ್ಸಾಹಧನವನ್ನು ಪಾವತಿಸಲಾಗುತ್ತಿದೆ. ರಾಜ್ಯದ ಸಾವಯವ ಉತ್ಪನ್ನಗಳ ಮಾರಾಟಕ್ಕೆ ಸೂಕ್ತ ಮಾರುಕಟ್ಟೆ ಹಾಗೂ ಉತ್ತಮ ಧಾರಣೆ ದೊರಕಿಸಿಕೊಡಲು ರಾಜ್ಯದ ಸಾವಯವ ಕೃಷಿಕರ ಸಂಘಗಳನ್ನು ಒಗ್ಗೂಡಿಸಿ 15 ಪ್ರಾಂತೀಯ ಸಾವಯವ ಒಕ್ಕೂಟಗಳನ್ನು ರಚಿಸಲಾಗಿದೆ.

ಸಾವಯವ ಹಾಗೂ ಸಿರಿಧಾನ್ಯಗಳ ಕೃಷಿಗೆ ಸಂಬಂಧಿಸಿದ ಸಂಶೋಧನಾ ಕೇಂದ್ರಗಳನ್ನು ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಸ್ಥಾಪಿಸಲಾಗಿದೆ. ಸಿರಿಧಾನ್ಯಗಳ ಉತ್ತೇಜನದಲ್ಲಿ ಕರ್ನಾಟಕ ಸರ್ಕಾರವು ಕೈಗೊಂಡಿರುವ ವಿಶೇಷ ಪ್ರಯತ್ನಗಳನ್ನು ಗುರುತಿಸಿ ಕೇಂದ್ರ ಸರ್ಕಾರವು ಪ್ರಶಂಸನಾ ಪತ್ರವನ್ನು ಕರ್ನಾಟಕ ಸರ್ಕಾರದ ಕೃಷಿ ಇಲಾಖೆಗೆ ನೀಡಿರುತ್ತದೆ ಎಂದರು.

ಈ ಸುದ್ದಿಯನ್ನೂ ಓದಿ | Mpox: ಈ ವರ್ಷದ ಮೊದಲ ಮಂಕಿ ಪಾಕ್ಸ್‌ ಪ್ರಕರಣ ಬೆಂಗಳೂರಿನಲ್ಲಿ ಪತ್ತೆ; ಏನಿದು ಕಾಯಿಲೆ? ಲಕ್ಷಣಗಳೇನು?

ಎಪಿಎಂಸಿಗಳಲ್ಲಿ ಮಾರುಕಟ್ಟೆ ವ್ಯವಸ್ಥೆ

ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ಸಾವಯವ ಉತ್ಪನ್ನಗಳ ಮಾರಾಟಕ್ಕೆ ಎಪಿಎಂಸಿಗಳಲ್ಲಿ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗುವುದು. ಕರ್ನಾಟಕ ಸರ್ಕಾರ ಸಿರಿಧಾನ್ಯಗಳ ಕೃಷಿ, ಮಾರುಕಟ್ಟೆ ಹಾಗೂ ಇತರೆ ಸೌಲಭ್ಯಗಳನ್ನು ನೀಡುವ ಮೂಲಕ ಸಿರಿಧಾನ್ಯ ಕೃಷಿಯ ಅಭಿವೃದ್ಧಿಗೆ ಪ್ರೋತ್ಸಾಹ ನೀಡಲು ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

robbery case shooting
1:49 PM January 16, 2025

Murder Case: ಸೆಕ್ಯೂರಿಟಿ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ ಮಾಡಿ 93 ಲಕ್ಷ ರೂ. ದರೋಡೆ

BBK 11 Mid week Elimination (1)
9:12 PM January 15, 2025

BBK 11: ಇಂದೇ ನಡೆಯಲಿದೆ ಮಿಡ್ ವೀಕ್ ಎಲಿಮಿನೇಷನ್: ಔಟ್ ಆದ ಸ್ಪರ್ಧಿ ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?

Naga Sadhus
11:15 PM January 18, 2025

Maha Kumbh Mela: ಕುಂಭಮೇಳದ ವೇಳೆ ನಾಗ ಸಾಧುಗಳು ಬರುವುದೆಲ್ಲಿಂದ? ಬಳಿಕ ಅಪ್ರತ್ಯಕ್ಷರಾಗುವುದೇಕೆ? ಅವರ ನಿಗೂಢ ಪ್ರಪಂಚ ಹೇಗಿದೆ? ಇಲ್ಲಿದೆ ಸಮಗ್ರ ವಿವರ

Chaithra Kundapura remuneration (1)
7:13 AM January 16, 2025

BBK 11: ಬಿಗ್ ಬಾಸ್​ನಿಂದ ಹೊರಬಂದ ಚೈತ್ರಾ ಕುಂದಾಪುರಗೆ ಸಿಕ್ಕ ಹಣ ಎಷ್ಟು ಗೊತ್ತೇ?

urea
2:13 PM January 22, 2025

ಕೃಷಿ ಸಬ್ಸಿಡಿಗೆ ರೈತರು ಬಿಟ್ಟು ಉಳಿದವರೆಲ್ಲ ಫಲಾನುಭವಿಗಳು!

Honnamaradi jatre
5:53 PM January 15, 2025

Honnamaradi Jatre: ವೈಭವದಿಂದ ನಡೆದ ಹೊನ್ನಮರಡಿ ಜಾತ್ರೆ; ಶ್ರೀ ರಂಗನಾಥಸ್ವಾಮಿ ದರ್ಶನ ಪಡೆದ ಸಾವಿರಾರು ಭಕ್ತರು