ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Tiger attack in Bandipur: ಬಂಡೀಪುರದಲ್ಲಿ ಗಸ್ತು ತಿರುಗುತ್ತಿದ್ದಾಗ ಹುಲಿ ದಾಳಿ; ಫಾರೆಸ್ಟ್‌ ವಾಚರ್‌ ಸಾವು

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮರಳಹಳ್ಳ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶದ ಸಿಸಿಎಫ್ ಪ್ರಭಾಕರನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಳಹಳ್ಳ ಕ್ಯಾಂಪ್ ಬಳಿ ಗಸ್ತು ತಿರುಗುತ್ತಿದ್ದಾಗ ಹುಲಿ ದಾಳಿ ಮಾಡಿ ಕೊಂದಿದೆ.

ಹುಲಿ ದಾಳಿಯಿಂದ ಮೃತಪಟ್ಟ ಅರಣ್ಯ ಸಿಬ್ಬಂದಿ ಸಣ್ಣ ಹೈದ.

ಚಾಮರಾಜನಗರ, ಡಿ. 27: ಹುಲಿ ದಾಳಿಗೆ ಫಾರೆಸ್ಟ್ ವಾಚರ್ ಬಲಿಯಾದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮರಳಹಳ್ಳ ವ್ಯಾಪ್ತಿಯಲ್ಲಿ ನಡೆದಿದೆ. ಸಣ್ಣ ಹೈದ (56) ಮೃತ ವ್ಯಕ್ತಿ. ಸ್ಥಳಕ್ಕೆ ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶದ ಸಿಸಿಎಫ್ ಪ್ರಭಾಕರನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಣ್ಣ ಹೈದ, ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್​ನ ಮರಳಹಳ್ಳದ ಕಳ್ಳಬೇಟೆ ತಡೆ ಶಿಬಿರದಲ್ಲಿ ವಾಚರ್ ಆಗಿ ಕೆಲಸ ಮಾಡುತ್ತಿದ್ದರು. ನಿತ್ಯ ಮರಳಹಳ್ಳ ಕ್ಯಾಂಪ್ ಸುತ್ತಮುತ್ತ ಗಸ್ತು ತಿರುಗುತ್ತಿದ್ದರು. ಎಂದಿನಂತೆ ತನ್ನ ಕ್ಯಾಂಪ್​ನ 4 ಮಂದಿ ಜತೆ ಇಂದು ಮಧ್ಯಾಹ್ನ ಸಣ್ಣಹೈದ ಬೀಟ್‌ಗೆ ಹೋಗಿದ್ದರು. ಹುಲ್ಲು ಬೀಜಗಳನ್ನು ಆಯುತ್ತಿದ್ದಾಗ ಹಠಾತ್ತನೆ ಹುಲಿವೊಂದು ದಾಳಿ ನಡೆಸಿದೆ. ತಕ್ಷಣವೇ ಸಿಬ್ಬಂದಿ ಕೂಗಿದ ಪರಿಣಾಮ ಹುಲಿ ಪರಾರಿಯಾಗಿದೆ, ಆದರೆ ಗಂಭೀರವಾಗಿ ಗಾಯಗೊಂಡಿದ್ದ ಸಣ್ಣ ಹೈದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್ ಸಿಎಫ್ ಹಾಗೂ ಮುಖ್ಯಸ್ಥ ಪ್ರಭಾಕರನ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲು ಕ್ರಮ ಕೈಗೊಳ್ಳಲಾಗಿದೆ.

ಮೃತ ವಾಚರ್ ಸಣ್ಣ ಹೈದ ಕಳೆದ 25 ವರ್ಷಗಳಿಂದಲೂ ಕೂಡ ಅರಣ್ಯ ಇಲಾಖೆಯ ನೌಕರನಾಗಿ ಸೇವೆ ಸಲ್ಲಿಸುತ್ತಿದ್ದರು. ಅರಣ್ಯ ಇಲಾಖೆಯ ನಿಯಮಾನುಸಾರ ಪರಿಹಾರ ಕೊಡಲು ಹಾಗೂ ಕುಟುಂಬದ ಒಬ್ಬರಿಗೆ ನೌಕರಿ ಕೊಡಲು ಅರಣ್ಯಾಧಿಕಾರಿಗಳು ಒಪ್ಪಿಕೊಂಡಿದ್ದಾರೆ. ಅಲ್ಲದೇ ಇನ್ಮುಂದೆ ಗಸ್ತಿಗೆ ಹೋಗುವ ಅರಣ್ಯ ಸಿಬ್ಬಂದಿ ಎಚ್ಚರಿಕೆ ವಹಿಸಲು ಕೊಡಲೂ ಸೂಚನೆ ಕೊಟ್ಟಿದ್ದಾರೆ.

Murder Case: ಮದುವೆಯಾಗು ಎಂದು ಒತ್ತಾಯಿಸಿದ್ದಕ್ಕೆ ಪ್ರಿಯಕರನಿಂದ ಸ್ಟಾಫ್‌ ನರ್ಸ್‌ ಕೊಲೆ

ಮೈಸೂರು ಹೀಲಿಯಂ ಸ್ಫೋಟ; ತಂಗಿ ಸಾವಿನ ಸುದ್ದಿ ಕೇಳಿ ಸಹೋದರ ಸಾವು

ಮೈಸೂರು: ಮೈಸೂರು ಅರಮನೆ ಮುಂಭಾಗ ಹೀಲಿಯಂ ಸ್ಪೋಟದ ವೇಳೆ ಬಲೂನ್ ಮಾರಾಟಗಾರ ಸಲೀಂ ಮೃತಪಟ್ಟಿದ್ದ. ಅಲ್ಲದೇ ಗಾಯಾಳುಗಳಾದ ಮಂಜುಳಾ ಹಾಗೂ ಲಕ್ಷ್ಮೀ ಸಹ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರು. ಆದರೆ, ಹೂವಿನ ವ್ಯಾಪಾರ ಮಾಡಿಕೊಂಡಿದ್ದ ಮಂಜುಳಾ ಅವರ ಸಾವಿನ ಸುದ್ದಿ ಕೇಳಿ ಅವರ ಸಹೋದರ ಪರಮೇಶ್ವರ ಅವರು ಕೂಡ ಸಾವನ್ನಪ್ಪಿದ್ದಾರೆ.

ತಂಗಿ ಮಂಜುಳಾ ಸಾವಿನ ಸುದ್ದಿ ಕೇಳಿ ಅಣ್ಣ ಪರಮೇಶ್ವರ್ (60) ಸಾವಿಗೀಡಾಗಿದ್ದಾರೆ. ಹೀಲಿಯಂ ಸಿಲಿಂಡರ್ ಸ್ಫೋಟದಿಂದ ಮಂಜುಳ ಗಾಯಗೊಂಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಆಸ್ಪತ್ರೆಯಲ್ಲಿ ಮಂಜುಳಾ ಸಾವನ್ನಪ್ಪಿದ್ದಾರೆ. ತಂಗಿ ಮಂಜುಳಾ ಸಾವಿನ ಸುದ್ದಿ ಕೇಳಿ ನಂಜನಗೂಡು ತಾಲೂಕಿನ ಚಾಮಲಾಪುರದ ನಿವಾಸಿ ಪರಮೇಶ್ವರ್ ಸಾವನ್ನಪ್ಪಿದ್ದಾರೆ. ಪರಮೇಶ್ವರ್ ಮೊದಲೇ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಗೊತ್ತಾಗಿದೆ.