ಹನೂರು ಎನ್‌ಕೌಂಟರ್ ಪ್ರಕರಣ; ಜಿಂಕೆ ಮಾಂಸ ಸೇರಿ ಹಲವು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ!
Hanur Encounter Case: ಹನೂರು ವಲಯದ ಕಾಡಿನಲ್ಲಿ ಆ.15ರಂದು ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮೃತಪಟ್ಟಿದ್ದರು. ಇದೀಗ ಈ ಕುರಿತು ತನಿಖೆ ಆರಂಭವಾಗಿದ್ದು, ತನಿಖೆಗೆ ಬಂಧ ಅಧಿಕಾರಿಯ ಮುಂದೆ ಅರಣ್ಯ ಇಲಾಖೆಯು ಬೇಟೆಗಾರರಿಂದ ವಶಕ್ಕೆ ಪಡೆದ ಮಾಂಸ, ಬಂದೂಕು ಸೇರಿದಂತೆ ಇನ್ನಿತರ ವಸ್ತುಗಳನ್ನು ಹಾಜರು ಪಡಿಸಿದ್ದಾರೆ.
ಹನೂರು ಎನ್‌ಕೌಂಟರ್ ಪ್ರಕರಣ -
ಚಾಮರಾಜನಗರ: ಹನೂರು ವಲಯದ ಕಾಡಿನಲ್ಲಿ ಆ.15ರಂದು ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮೃತಪಟ್ಟಿದ್ದರು. ಇದೀಗ ಈ ಕುರಿತು ತನಿಖೆ ಆರಂಭವಾಗಿದ್ದು, ತನಿಖೆಗೆ ಬಂಧ ಅಧಿಕಾರಿಯ ಮುಂದೆ ಅರಣ್ಯ ಇಲಾಖೆಯು ಬೇಟೆಗಾರರಿಂದ ವಶಕ್ಕೆ ಪಡೆದ ಮಾಂಸ, ಬಂದೂಕು ಸೇರಿದಂತೆ ಇನ್ನಿತರ ವಸ್ತುಗಳನ್ನು ಹಾಜರು ಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಈ ಪಕ್ರರಣ ಸಂಬಂಧ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಲಾಗಿದ್ದು, ತನಿಖೆ ನಡೆಯುತ್ತಿದೆ.
ಅರಣ್ಯ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿಯ ಪ್ರಕಾರ, ‘ಘಟನಾ ಸ್ಥಳದಲ್ಲಿದ್ದ ಬೇಟೆಗಾರರಿಂದ ಅಕ್ರಮವಾಗಿ ಬಳಸಲಾಗುತ್ತಿದ್ದ ಬಂದೂಕು ಹಾಗೂ ಬರೋಬ್ಬರಿ 34.25 ಕೆಜಿ ಜಿಂಕೆ ಮಾಂಸ ತುಂಬಿದ್ದ ಚೀಲಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಿಂಕೆಗೆ ಮೂರು ಕಡೆಗಳಲ್ಲಿ ಬಿದ್ದಿದ್ದ ಗುಂಡೇಟಿನ ಪುರಾವೆಯನ್ನು ಇದೀಗ ಅರಣ್ಯ ಇಲಾಖೆ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಅಲ್ಲದೆ 4 ಜೊತೆ ಪ್ಯಾರಾಗನ್ ಚಪ್ಪಲಿ, 2 ಲೀಟರ್ ಮೆರಿಂಡಾ ಬಾಟಲಿನಲ್ಲಿ ಕಾಲು ಲೀಟರ್ ನೀರು, ಪರಿಕರಗಳನ್ನು ಹಾಜರು ಪಡಿಸಿದ್ದೇವೆ. ವಶಪಡಿಸಿಕೊಂಡ ಮಾಂಸದ ಪರೀಕ್ಷೆಗೆ ಕಳುಹಿಸಲಾಗುವುದು ಎಂದು ಅರಣ್ಯ ಇಲಾಖೆ ಸ್ಪಷ್ಟಪಡಿಸಿದೆ.
ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಚಾಮರಾಜನಗರ ಜಿಲ್ಲಾಧಿಕಾರಿ ತನಿಖೆಗೆ ಆದೇಶಿಸಿದ್ದಾರೆ. ತನಿಖಾ ವರದಿಗೆ ಸಲ್ಲಿಕೆಗೆ 7 ದಿನ ಅವಕಾಶ ನೀಡಿದ್ದಾರೆ. ನಿಗದಿತ ಅವಧಿಯೊಳಗೆ ತನಿಖೆ ನಡೆಸಿ ವರದಿ ಸಲ್ಲಿಸಲಾಗುತ್ತದೆ. ಈಗಾಗಲೇ ತನಿಖೆ ಆರಂಭವಾಗಿದೆ, ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದ್ದೇನೆ. ಗುಂಡೇಟಿಗೆ ಬಲಿ ಆದವರ ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸಂಪೂರ್ಣ ತನಿಖಾ ವರದಿ ಸಲ್ಲಿಸಲಾಗುತ್ತದೆ ಎಂದು ಕೊಳ್ಳೇಗಾಲ ಉಪ ವಿಭಾಗಧಿಕಾರಿ ದಿನೇಶ್ ಕುಮಾರ್ ಮೀನಾ ಹೇಳಿದ್ದಾರೆ.
ಕಾಡುಗಳ್ಳರ ಮೇಲೆ ಮೇಲೆ ಅರಣ್ಯ ಸಿಬ್ಬಂದಿ ಗುಂಡಿನ ದಾಳಿ; ಮೂವರು ಸಾವು
ಪ್ರತಿಭಟನೆ ವೇಳೆ ಅರಣ್ಯ ಇಲಾಖೆ ಜೀಪನ್ನು ಧ್ವಂಸ ಮಾಡಲು ಯತ್ನಿಸಿ ಕೊಲೆ ಬೆದರಿಕೆ ಹಾಕಿದ ಐವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ತಾಲೂಕಿನ ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್.ಪಿ.ಎಸ್ ಕ್ಯಾಂಪ್ ನಿವಾಸಿಗಳಾದ ವೆಂಕಟೇಶ್, ಚಿನ್ನಿ ಪ್ರಕಾಶ್, ಪಚ್ಚಿಮುತ್ತು, ಮಾಳಶೆಟ್ಟಿ ಮತ್ತು ಮತ್ತೊಬ್ಬ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಅರಣ್ಯ ಇಲಾಖೆ ಜೀಪ್ ಚಾಲಕ ಅರುಣ್ ಕುಮಾರ್ ಅವರು ರಾಮಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.