POCSO case: ಮಾತು ಬಾರದ ವಿದ್ಯಾರ್ಥಿನಿಗೆ ಶಿಕ್ಷಕನ ಲೈಂಗಿಕ ಕಿರುಕುಳ, 13 ವರ್ಷದ ಬಳಿಕ ಬಯಲು
Harassment: ವಿದ್ಯಾರ್ಥಿನಿಗೆ ಮಾತನಾಡಲು ಬರದಿದ್ದರಿಂದ ಇದನ್ನೇ ಆರೋಪಿ ಲಾಭವಾಗಿ ಬಳಸಿಕೊಂಡು ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಕೊಳ್ಳೇಗಾಲದಲ್ಲಿ 2012-2013ನೇ ಸಾಲಿನಲ್ಲಿ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ವೇಳೆ ಶಿಕ್ಷಕ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದು, ಈ ಸಂಬಂಧ ಕಳೆದ 1 ವಾರದ ಹಿಂದೆ ಶಾಲೆಯಲ್ಲಿ ನಡೆದ ಹಳೇ ವಿದ್ಯಾರ್ಥಿಗಳ ಸಭೆಯಲ್ಲಿ ಸಂತ್ರಸ್ತೆ ಈ ವಿಚಾರವನ್ನು ಬಿಚ್ಚಿಟ್ಟಿದ್ದಾಳೆ. ಬಳಿಕ ಸಂತ್ರಸ್ತೆ ಕೊಟ್ಟ ಮಾಹಿತಿ ಮೇರೆಗೆ ಶಾಲೆಯ ಸಿಇಒ ದೂರು ನೀಡಿದ್ದು, ಇದೀಗ ಕೊಳ್ಳೇಗಾಲ ಪೊಲೀಸರು ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಚಾಮರಾಜನಗರದಲ್ಲಿ ವಿದ್ಯಾರ್ಥಿನಿಗೆ ಶಿಕ್ಷಕನ ಕಿರುಕುಳ- ಸಾಂದರ್ಭಿಕ ಚಿತ್ರ -
ಹರೀಶ್ ಕೇರ
Nov 5, 2025 6:58 AM
ಚಾಮರಾಜನಗರ, ನ.04: ಜಿಲ್ಲೆಯ (chamarajanagar) ಕೊಳ್ಳೇಗಾಲದಲ್ಲಿರುವ ಖಾಸಗಿ ವಾಕ್ ಮತ್ತು ಶ್ರವಣ ಶಾಲೆಯೊಂದರಲ್ಲಿ ವಿಶೇಷ ಚೇತನ ವಿದ್ಯಾರ್ಥಿನಿ ಮೇಲೆ ಶಿಕ್ಷಕರೊಬ್ಬರು ಲೈಂಗಿಕ ಕಿರುಕುಳ (Harassment) ನೀಡುತ್ತಿದ್ದ ಆಘಾತಕಾರಿ ಘಟನೆಯೊಂದು ಇದೀಗ ಬೆಳಕಿಗೆ ಬಂದಿದೆ. ಘಟನೆ ನಡೆದು 13 ವರ್ಷಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಕೊಳ್ಳೇಗಾಲ ಪಟ್ಟಣ ಠಾಣೆಯಲ್ಲಿ ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ (Pocso case) ದಾಖಲಾಗಿದೆ.
ವಿದ್ಯಾರ್ಥಿನಿಗೆ ಮಾತನಾಡಲು ಬರದಿದ್ದರಿಂದ ಇದನ್ನೇ ಆರೋಪಿ ಲಾಭವಾಗಿ ಬಳಸಿಕೊಂಡು ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಕೊಳ್ಳೇಗಾಲದಲ್ಲಿ 2012-2013ನೇ ಸಾಲಿನಲ್ಲಿ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ವೇಳೆ ಶಿಕ್ಷಕ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದು, ಈ ಸಂಬಂಧ ಕಳೆದ 1 ವಾರದ ಹಿಂದೆ ಶಾಲೆಯಲ್ಲಿ ನಡೆದ ಹಳೇ ವಿದ್ಯಾರ್ಥಿಗಳ ಸಭೆಯಲ್ಲಿ ಸಂತ್ರಸ್ತೆ ಈ ವಿಚಾರವನ್ನು ಬಿಚ್ಚಿಟ್ಟಿದ್ದಾಳೆ. ಬಳಿಕ ಸಂತ್ರಸ್ತೆ ಕೊಟ್ಟ ಮಾಹಿತಿ ಮೇರೆಗೆ ಶಾಲೆಯ ಸಿಇಒ ದೂರು ನೀಡಿದ್ದು, ಇದೀಗ ಕೊಳ್ಳೇಗಾಲ ಪೊಲೀಸರು ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಈ ಹಿಂದೆ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವೇಳೆ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ತಿಳಿದುಬಂದಿದೆ. ಆಕೆಯ ಹೇಳಿಕೆಯ ಆಧಾರದ ಮೇಲೆ, ಅಕ್ಟೋಬರ್ 30ರಂದು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಪ್ರಕರಣ ದಾಖಲಾಗಿದೆ. ಇನ್ನೂ ಆರೋಪಿಯನ್ನು ಬಂಧಿಸಲಾಗಿಲ್ಲ, ತನಿಖೆ ಪ್ರಗತಿಯಲ್ಲಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ಇದನ್ನೂ ಓದಿ: Crime News: ಮತ್ತೊಂದು ವೈಶಾಚಿಕ ಕೃತ್ಯ; ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ
ವಾಕಿಂಗ್ ಮಾಡುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ
ಆಘಾತಕಾರಿ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ನಡೆದಿದೆ. ಮಹಿಳೆಯೊಬ್ಬರು ತನ್ನ ನಾಯಿಯೊಂದಿಗೆ ವಾಕಿಂಗ್‌ಗೆ ಹೋಗುತ್ತಿದ್ದಾಗ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ (Physical Harassment) ನೀಡಿದ ಇಂದಿರಾನಗರದಲ್ಲಿ ಈ ಘಟನೆ ನಡೆದಿದೆ. 33 ವರ್ಷದ ಮಹಿಳೆ ತನ್ನ ನಾಯಿಯೊಂದಿಗೆ ದಿನನಿತ್ಯದ ಬೆಳಗಿನ ವಾಕಿಂಗ್ ಮಾಡುತ್ತಿದ್ದಾಗ ಈ ಆಘಾತಕಾರಿ ಘಟನೆ ನಡೆದಿದೆ ಎನ್ನಲಾಗಿದೆ. ಅಪರಿಚಿತ ವ್ಯಕ್ತಿಯೊಬ್ಬ ಹಿಂದಿನಿಂದ ಆಕೆಯ ಬಳಿಗೆ ಬಂದು "ಮೇಡಂ" ಎಂದು ಕರೆದಿದ್ದಾನೆ. ಆಕೆ ತಿರುಗಿ ನೋಡಿದಾಗ, ಆ ವ್ಯಕ್ತಿ ಆಕೆಯ ಎದುರು ಹಸ್ತಮೈಥುನ ಮಾಡಿಕೊಳ್ಳಲು ಪ್ರಾರಂಭಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಆರೋಪಿ ಏಕಾಏಕಿ ಈ ಹುಚ್ಚಾಟ ಮೆರೆದಿರುವುದರಿಂದ ಆಘಾತಗೊಂಡ ಸಂತ್ರಸ್ತ ಮಹಿಳೆ ಮನೆಗೆ ಓಡಿದ್ದಾರೆ. ನಂತರ ನಡೆದ ವಿಚಾರವನ್ನು ತನ್ನ ಸಹೋದರಿ ಮತ್ತು ಸ್ನೇಹಿತನಿಗೆ ತಿಳಿಸಿದ್ದಾಳೆ. ಇದರ ನಂತರ, ಆಕೆ ಪೊಲೀಸರಿಗೆ ದೂರು ನೀಡಿದ್ದಾಳೆ. ಇಂದಿರಾನಗರ ಪೊಲೀಸರು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 75 ರ ಅಡಿಯಲ್ಲಿ ಸಾರ್ವಜನಿಕ ಅಸಭ್ಯತೆ ಮತ್ತು ಲೈಂಗಿಕ ಕಿರುಕುಳಕ್ಕಾಗಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿದ್ದಾರೆ. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ ಮತ್ತು ಆರೋಪಿಗಳನ್ನು ಗುರುತಿಸಲು ಮತ್ತು ಹಿಡಿಯಲು ಪ್ರಯತ್ನಿಸುತ್ತಿದ್ದಾರೆ.
ಇದನ್ನೂ ಓದಿ: Assault Case: ಚಿಕ್ಕಮಗಳೂರಿನಲ್ಲಿ ಅಮಾನವೀಯ ಘಟನೆ, ಶಿಕ್ಷಕಿಯ ನಗ್ನಗೊಳಿಸಿ ಮರಕ್ಕೆ ಕಟ್ಟಿಹಾಕಿ ಹಲ್ಲೆ