ಪೌರ ಕಾರ್ಮಿಕರ ಖಾಯಂಗಾಗಿ ಆಗ್ರಹಿಸಿ ಜುಲೈ 1ರಿಂದ ಪ್ರತಿಭಟನೆ
ಪೌರ ಕಾರ್ಮಿಕರ ಖಾಯಂಗಾಗಿ ಆಗ್ರಹಿಸಿ ಜುಲೈ 1ರಿಂದ ಪ್ರತಿಭಟನೆ
Vishwavani News
June 22, 2022
ಚಾಮರಾಜನಗರ: ಪೌರ ಕಾರ್ಮಿಕರನ್ನು ಖಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ, ಜುಲೈ 1ರಿಂದ ಪೌರ ಕಾರ್ಮಿಕರು ರಾಜ್ಯಾಧ್ಯಂತ ಪ್ರತಿಭಟನೆ ನಡೆಸಲಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪೌರ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ನಾರಾ ಯಣ, ನೇರ ಪಾವತಿ ಪೌರ ಕಾರ್ಮಿಕರ ಸೇವೆಯನ್ನು ಖಾಯಂಗೊಳಿಸಬೇಕೆಂದು ಒತ್ತಾಯಿಸಿ, ಜುಲೈ1ರಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಬಿಬಿಎಂಪಿ, ಪುರಸಭೆ, ನಗರ ಸಭೆ, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪೌರ ಕಾರ್ಮಿಕರು ಮುಷ್ಕರ ನಡೆಸಲಿದ್ದಾರೆ ಎಂದರು.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿಯೂ 18 ಸಾವಿರಕ್ಕೂ ಹೆಚ್ಚು ಪೌರ ಕಾರ್ಮಿಕರು ಅನಿರ್ಧಿಷ್ಟಾವಧಿಯವರೆಗೆ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧರಣಿ ಪ್ರತಿಭಟನೆ ನಡೆಸ ಲಾಗುತ್ತದೆ.
ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿಯೂ ಪೌರ ಕಾರ್ಮಿಕರು ಜುಲೈ 1ರಿಂದ ಕೆಲಸ ಮಾಡದೇ ಪ್ರತಿಭಟನೆ ನಡೆಸಲಿದ್ದಾರೆ ಎಂದರು.