ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ನಿಲ್ಲದ ವ್ಯಾಘ್ರಗಳ ಸಾವು; ಬಿಳಿಗಿರಿರಂಗನ ಬೆಟ್ಟದಲ್ಲಿ ಹುಲಿ ಮೃತದೇಹ ಪತ್ತೆ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಬಳಿಯ ಮಲೆ ಮಹದೇಶ್ವರ ಬೆಟ್ಟದ ವನ್ಯಜೀವಿ ಅಭಯಾರಣ್ಯದಲ್ಲಿ ಕಳೆದ ವರ್ಷ ಒಂದು ಹುಲಿ ಮತ್ತು ನಾಲ್ಕು ಹುಲಿ ಮರಿಗಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದವು. ಇದೀಗ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯದಲ್ಲಿ ಹುಲಿಯ ಕಳೇಬರ ಪತ್ತೆಯಾಗಿದೆ.

ಬಿಳಿಗಿರಿರಂಗನ ಬೆಟ್ಟದಲ್ಲಿ ಅನುಮಾನಾಸ್ಪದವಾಗಿ ಹುಲಿ ಸಾವು

ಬಿಳಿಗಿರಿರಂಗನ ಬೆಟ್ಟದಲ್ಲಿ ಹುಲಿ ಮೃತಪಟ್ಟ ಸ್ಥಳದಲ್ಲಿ ಅರಣ್ಯ ಅಧಿಕಾರಿಗಳ ಪರಿಶೀಲನೆ. -

Prabhakara R
Prabhakara R Feb 15, 2026 9:48 PM

ಚಾಮರಾಜನಗರ: ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯದಲ್ಲಿ (Biligiri Rangana hills) ಮತ್ತೊಂದು ಹುಲಿ ಅನುಮಾನಾಸ್ಪದವಾಗಿ ಮೃತಪಟ್ಟಿದೆ. ಗುಂಡಾಲ್ ಡ್ಯಾಂನಲ್ಲಿ ಹುಲಿ ಮೃತದೇಹ ಪತ್ತೆಯಾಗಿದೆ. ಬೇಟೆ ಅಥವಾ ವಿಷವಿಕ್ಕಿ ಸಾಯಿಸಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಅರಣ್ಯಾಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಬಳಿಯ ಮಲೆ ಮಹದೇಶ್ವರ ಬೆಟ್ಟದ ವನ್ಯಜೀವಿ ಅಭಯಾರಣ್ಯದಲ್ಲಿ 2025 ಜೂನ್ ತಿಂಗಳಲ್ಲಿ ಒಂದು ಹುಲಿ ಮತ್ತು ನಾಲ್ಕು ಮರಿ ಹುಲಿಗಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದವು. ತನಿಖೆ ವೇಳೆ ವಿಷಪ್ರಾಶನದಿಂದ ಹುಲಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿತ್ತು. ಆ ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಅಧಿಕಾರಿಗಳು ಬಂಧಿಸಿದ್ದರು.

ಮತ್ತೊಂದೆಡೆ ಜಿಲ್ಲೆಯಲ್ಲಿ ಚಿರತೆಗಳ ಹಾವಳಿ ಮಿತಿಮೀರಿದೆ. ಮಲೆಮಹದೇಶ್ವರ ಬೆಟ್ಟದಲ್ಲಿ ಮತ್ತೆ ಮತ್ತೆ ಚಿರತೆ ಪ್ರತ್ಯಕ್ಷ ಹಿನ್ನೆಲೆ ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚೆತ್ತಿದ್ದಾರೆ. ಇದೀಗ ಮಹದೇಶ್ವರ ವನ್ಯಧಾಮದಲ್ಲಿ ಅಧಿಕಾರಿಗಳು ಬೋನು ಅಳವಡಿಕೆ ಮಾಡಿದ್ದಾರೆ.

ಮಂಡ್ಯದಲ್ಲಿ ಕೆಮಿಕಲ್ ಟ್ಯಾಂಕ್ ಸ್ಫೋಟ, ಇಬ್ಬರು ಕಾರ್ಮಿಕರು ಸಾವು

ಇತ್ತೀಚೆಗೆ ಮಂಡ್ಯ ಮೂಲದ ಪಾದಯಾತ್ರಿಯನ್ನು ಚಿರತೆ ಬಲಿ ಪಡೆದಿತ್ತು,. ಅಲ್ಲದೆ ಚನ್ನಪಟ್ಟಣ ಮೂಲದ ಬಾಲಕನ ಮೇಲೂ ದಾಳಿ ನಡೆಸಿತ್ತು. ಹೀಗಾಗಿ ಪಾದಯಾತ್ರೆ ತೆರಳುವ ಭಕ್ತರಿಗೆ ತೊಂದರೆ ಆಗದಂತೆ ಅರಣ್ಯ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತದಿಂದ ಕಟ್ಟೆಚ್ಚರ ವಹಿಸಲಾಗಿದೆ. ಮೈಸೂರಿನಿಂದ ಚಿರತೆ ಹಾಗೂ ಆನೆ ಕಾರ್ಯಪಡೆ ಸಿಬ್ಬಂದಿಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಕರೆಸಿಕೊಳ್ಳಲಾಗಿದೆ.