Road Accident: ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರಿಗೆ ಟಿಪ್ಪರ್ ಡಿಕ್ಕಿ; 5 ಸಾವು
ಕಾರು ಕೊಳ್ಳೇಗಾಲದಿಂದ ಮಹದೇಶ್ವರ ಬೆಟ್ಟದ (Mahadeshwar Hill) ಕಡೆಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಟಿಪ್ಪರ್ ಡಿಕ್ಕಿಯಾದ ರಭಸಕ್ಕೆ ರಸ್ತೆ ಪಕ್ಕಕ್ಕೆ ಕಾರು ಉರುಳಿಬಿದ್ದಿದೆ. ಅಪಘಾತದ ಸ್ಥಳಕ್ಕೆ ಕೊಳ್ಳೇಗಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೊಳ್ಳೇಗಾಲದ ರಸ್ತೆ ಅಪಘಾತ

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ದೇವಸ್ಥಾನಕ್ಕೆ ಕಾರಿನಲ್ಲಿ ತೆರಳುತ್ತಿದ್ದ ಕುಟುಂಬದ ಐವರು ಮಂದಿ ರಸ್ತೆ ದುರಂತದಲ್ಲಿ ಬಲಿಯಾಗಿದ್ದಾರೆ. ಕೊಳ್ಳೇಗಾಲ (Kollegala) ತಾಲೂಕಿನ ಚಿಕ್ಕಿಂದುವಾಡಿ ಬಳಿ ಟಿಪ್ಪರ್ ಹಾಗೂ ಕಾರಿನ ನಡುವೆ ಅಪಘಾತ (Road Accident) ಸಂಭವಿಸಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮಂಡ್ಯ ಮೂಲದ ಐವರು ಮಹದೇಶ್ವರ ದೇವಾಲಯ ದರ್ಶನಕ್ಕೆ ತೆರಳುತ್ತಿದ್ದವರು.
ಕಾರು ಕೊಳ್ಳೇಗಾಲದಿಂದ ಮಹದೇಶ್ವರ ಬೆಟ್ಟದ (Mahadeshwar Hill) ಕಡೆಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಟಿಪ್ಪರ್ ಡಿಕ್ಕಿಯಾದ ರಭಸಕ್ಕೆ ರಸ್ತೆ ಪಕ್ಕಕ್ಕೆ ಕಾರು ಉರುಳಿಬಿದ್ದಿದೆ. ಅಪಘಾತದ ಸ್ಥಳಕ್ಕೆ ಕೊಳ್ಳೇಗಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಿನ್ನೆಯಷ್ಟೇ ಬೆಂಗಳೂರಿನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಎರಡು ಬಿಎಂಟಿಸಿ ಬಸ್ಸುಗಳ ನಡುವೆ ಸಿಲುಕಿಕೊಂಡು ಆಟೋ ಅಪ್ಪಚ್ಚಿಯಾಗಿತ್ತು. ಚಾಲಕ ಸೇರಿ ಇಬ್ಬರು ಬರ್ಬರವಾಗಿ ಮೃತಪಟ್ಟಿದ್ದರು. ಬನಶಂಕರಿ ವ್ಯಾಪ್ತಿಯ ಸೀತಾ ಸರ್ಕಲ್ ಬಳಿ ಅಪಘಾತ ಸಂಭವಿಸಿತ್ತು.
ಆಗ್ರಾ- ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ, 4 ಸಾವು
ಆಗ್ರಾ: ಆಗ್ರಾ-ಲಕ್ನೋ ಎಕ್ಸ್ಪ್ರೆಸ್ವೇಯಲ್ಲಿ ಶನಿವಾರ ಬೆಳಿಗ್ಗೆ ವಾರಣಾಸಿ-ಜೈಪುರ ಬಸ್ ನಿಂತಿದ್ದ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 19 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆಗ್ರಾದ ಫತೇಹಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಿಗ್ಗೆ 5.30 ರ ಸುಮಾರಿಗೆ ಬಸ್ ಹಿಂದಿನಿಂದ ಟ್ರಕ್ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಫತೇಹಾಬಾದ್ ಎಸಿಪಿ ಅಮರ್ದೀಪ್ ಲಾಲ್ ತಿಳಿಸಿದ್ದಾರೆ. ಮೃತರಲ್ಲಿ ಒಬ್ಬರನ್ನು ಇನ್ನೂ ಗುರುತಿಸಲಾಗಿಲ್ಲ. ಗಾಯಾಳುಗಳನ್ನು ಆಂಬ್ಯುಲೆನ್ಸ್ ಸಹಾಯದಿಂದ ಆಸ್ಪತ್ರೆಗೆ ಕಳುಹಿಸಲಾಗಿದೆ. ಮೃತರನ್ನು ರಾಜಸ್ಥಾನ ಮೂಲದ ಗೋವಿಂದ್ (68) ಎಂದು ಗುರುತಿಸಲಾಗಿದೆ. ರಾಜಸ್ಥಾನ ಮೂಲದ ರಮೇಶ್ (45) ಮತ್ತು ಆಗ್ರಾ ನಿವಾಸಿ ದೀಪಕ್ ವರ್ಮಾ (40) ಎಂದು ಗುರುತಿಸಲಾಗಿದೆ. ಗಾಯಗೊಂಡ ನಾಲ್ವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: Road Accident: ಬೆಂಗಳೂರಿನಲ್ಲಿ ಭೀಕರ ಅಪಘಾತ; ಎರಡು ಬಿಎಂಟಿಸಿ ಬಸ್ ಮಧ್ಯೆ ಆಟೋ ಅಪ್ಪಚ್ಚಿ, ಇಬ್ಬರ ಸಾವು