ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

CM Siddaramaiah: ನನ್ನ ಅಧಿಕಾರ ಭದ್ರವಾಗಿದೆ; ಸಿಎಂ ಬದಲಾವಣೆ ಎಂದವರಿಗೆ ಸಿದ್ದರಾಮಯ್ಯ ಟಕ್ಕರ್‌

Karnataka CM Race: ನನ್ನಣ್ಣನಿಗೆ (ಡಿ.ಕೆ.ಶಿವಕುಮಾರ್‌) ಅದೃಷ್ಟ ಇದ್ದರೆ ಸಿಎಂ ಆಗ್ತಾರೆ ಎಂದು ಡಿ.ಕೆ.ಸುರೇಶ್‌ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ತಾವೇ ಸಿಎಂ ಆಗಿ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದು, ಈ ಮೂಲಕ ನಾಯಕತ್ವ ಬದಲಾವಣೆ ಚರ್ಚೆಯನ್ನು ತಳ್ಳಿಹಾಕಿದ್ದಾರೆ.

ಸಿಎಂ ಸಿದ್ದರಾಮಯ್ಯ

ಬೆಂಗಳೂರು, ನ.20: ಬಿಹಾರ ಚುನಾವಣೆ ಬಳಿಕ ಕರ್ನಾಟಕ ರಾಜಕೀಯದಲ್ಲಿ ನವೆಂಬರ್‌ ಕ್ರಾಂತಿ ಸಂಭವಿಸಲಿದೆ ಎಂಬ ಚರ್ಚೆ ನಡೆಯುತ್ತಿತ್ತು. ಆದರೆ, ಕಾಂಗ್ರೆಸ್‌ ಸರ್ಕಾರಕ್ಕೆ ಎರಡೂವರ್ಷ ತುಂಬಿದ ಸಂದರ್ಭದಲ್ಲಿ ಚಾಮರಾಜನಗರಕ್ಕೆ ಗುರುವಾರ ಭೇಟಿ ನೀಡಿರುವ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು, ನನ್ನ ಅಧಿಕಾರ ಈಗಲೂ ಮತ್ತು ಭವಿಷ್ಯದಲ್ಲಿಯೂ ಭದ್ರವಾಗಿದೆ ಎಂದು ಹೇಳುವ ಮೂಲಕ ಉಳಿದ ಅವಧಿಯೂ ನಾನೇ ಸಿಎಂ ಎಂದು ಪರೋಕ್ಷವಾಗಿ ಡಿಕೆಶಿ ಬಣಕ್ಕೆ ಸಂದೇಶ ರವಾನಿಸಿದ್ದಾರೆ.

ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ ಎಂದಿರುವ ಸಿಎಂ ಸಿದ್ದರಾಮಯ್ಯ, ಮೂಢನಂಬಿಕೆ ಮತ್ತು ಕಂದಾಚಾರಗಳಲ್ಲಿ ನಂಬುವುದಿಲ್ಲವಾದ್ದರಿಂದ ಚಾಮರಾಜನಗರಕ್ಕೆ ಭೇಟಿ ನೀಡುತ್ತಿರುತ್ತೇನೆ. ಜನರು ಎಲ್ಲಿವರೆಗೆ ಅಪೇಕ್ಷಿಸುವರೋ, ಅಲ್ಲಿಯವೆಗೆ ನಾನೇ ಬಜೆಟ್ ಮಂಡಿಸುತ್ತೇನೆ. ಮುಂದಿನ ಬಾರಿಯೂ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನನ್ನಣ್ಣನಿಗೆ (ಡಿ.ಕೆ.ಶಿವಕುಮಾರ್‌) ಅದೃಷ್ಟ ಇದ್ದರೆ ಸಿಎಂ ಆಗ್ತಾರೆ ಎಂದು ಡಿ.ಕೆ.ಸುರೇಶ್‌ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ತಾವೇ ಸಿಎಂ ಆಗಿ ಮುಂದುವರಿಯುತ್ತೇನೆ ಎನ್ನುವ ಮೂಲಕ ನಾಯಕತ್ವ ಬದಲಾವಣೆ ಚರ್ಚೆಯನ್ನು ತಳ್ಳಿಹಾಕಿದ್ದಾರೆ.

ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತೆ ಎಂಬುದು ಮೂಢನಂಬಿಕೆ

_CM Siddaramaiah

ಚಾಮರಾಜನಗರ ಹೆಲಿಪ್ಯಾಡ್‌ನಲ್ಲಿ ಮಾಧ್ಯಮದವರೊಂದಿಗೆ ಸಿಎಂ ಮಾತನಾಡಿದ್ದು, ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಐದು ವರ್ಷಗಳಲ್ಲಿ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೂಢನಂಬಿಕೆ ಮತ್ತು ಕಂದಾಚಾರಗಳಲ್ಲಿ ನಂಬುವುದಿಲ್ಲವಾದ್ದರಿಂದ ಚಾಮರಾಜನಗರಕ್ಕೆ ಭೇಟಿ ನೀಡುತ್ತಿರುತ್ತೇನೆ. ರಾಜ್ಯದ ಎಲ್ಲ ಜಿಲ್ಲೆಗಳನ್ನೂ ಸಮಾನವಾಗಿ ಕಂಡು, ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡುತ್ತೇನೆ. ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಆ ಮೌಢ್ಯವನ್ನು ಹೋಗಲಾಡಿಸಲು ಇಲ್ಲಿಗೆ ಭೇಟಿ ನೀಡಿದ್ದು, ಅಧಿಕಾರ ಈಗಲೂ ಮತ್ತು ಭವಿಷ್ಯದಲ್ಲಿಯೂ ಭದ್ರವಾಗಿರುತ್ತದೆ ಎಂದು ತಿಳಿಸಿದರು.

2028ರಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ

_CM Siddaramaiah

ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗುವ ಬಗ್ಗೆ ಮಾಡಿದ ಹೇಳಿಕೆಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಇಂತಹ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಐದು ವರ್ಷ ಆಡಳಿತ ನಡೆದು ಜನಾದೇಶ ಇದೆ. ನಮ್ಮ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಭರವಸೆಯನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ನವೆಂಬರ್ ಕ್ರಾಂತಿ ಎಂಬ ವಿಷಯವನ್ನು ಮಾಧ್ಯಮದವರೇ ಸೃಷ್ಟಿಸಿದರು. ಜನರು ಆಸೆಯಂತೆ ಐದು ವರ್ಷ ಸರ್ಕಾರ ನಡೆಸಿ ನಂತರವೂ ಪುನ: ಕಾಂಗ್ರೆಸ್ ಪಕ್ಷವೇ ಆಯ್ಕೆಯಾಗಿ ಬರಲಿದೆ ಎಂದು ತಿಳಿಸಿದರು.

ಸಂಪುಟ ಪುನಾರಚನೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸಬೇಕಿದೆ

ಐದು ವರ್ಷವೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರಿಕೆ ಬಗ್ಗೆ ನಡೆಯುತ್ತಿರುವ ಚರ್ಚೆಗೆ ಉತ್ತರಿಸಿ, ಇದು ಅನಾವಶ್ಯಕ ಚರ್ಚೆ. ಎರಡೂವರೆ ವರ್ಷದ ನಂತರ ಸಂಪುಟ ಪುನಾರಚನೆ ಮಾಡಬಹುದು ಎಂದು ತಿಳಿಸಿದ ನಂತರವಷ್ಟೇ , ಮುಖ್ಯಮಂತ್ರಿ ಬದಲಾವಣೆಯ ವಿಷಯ ಮುನ್ನಲೆಗೆ ಬಂದಿರುವುದು. ಸಂಪುಟ ಪುನರ್ರಚನೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳಬೇಕಿದೆ. ಒಟ್ಟು 34 ಸಚಿವರ ಸ್ಥಾನವಿದ್ದು, ಅದರಲ್ಲಿ ಎರಡು ಸ್ಥಾನಗಳು ಖಾಲಿಯಿದೆ. ಸಂಪುಟ ಪುನಾರಚನೆ ಸಂದರ್ಭದಲ್ಲಿ ಈ ಖಾಲಿ ಸಚಿವ ಸ್ಥಾನಗಳನ್ನು ಭರ್ತಿ ಮಾಡಲಾಗುವುದು ಎಂದರು.

ಜನರು ಅಪೇಕ್ಷಿಸುವವರೆಗೆ ಬಜೆಟ್ ಮಂಡನೆ

2028 ರಲ್ಲಿಯೂ ಸಿದ್ದರಾಮಯ್ಯನವರ ನೇತೃತ್ವದಲ್ಲಿಯೇ ಚುನಾವಣೆ ಎದುರಿಸಲಾಗುವುದೇ ಎಂಬುದಕ್ಕೆ ಉತ್ತರಿಸಿ, ಈ ಬಗ್ಗೆ ಭವಿಷ್ಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಜನರು ಎಲ್ಲಿವರೆಗೆ ಅಪೇಕ್ಷಿಸುವರೋ, ಅಲ್ಲಿಯವೆಗೆ ನಾನೇ ಬಜೆಟ್ ಮಂಡಿಸುತ್ತೇನೆ ಎಂದು ತಿಳಿಸಿದರು.

ಬೆಂಗಳೂರು ಬ್ಯಾಂಕ್ ದರೋಡೆ: ಅಪರಾಧಿಗಳ ಬಂಧನಕ್ಕೆ ಕ್ರಮ

ಬೆಂಗಳೂರಿನಲ್ಲಿ ನಡೆದ ಬ್ಯಾಂಕ್ ದರೋಡೆ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಕಳುವಿನ ಬಗ್ಗೆ ಸುಳಿವು ಸಿಕ್ಕಿದ್ದು, ಘಟನೆಗೆ ಬಳಸಿದ ಕಾರು ಪೊಲೀಸರಿಗೆ ದೊರಕಿದೆ. ಬ್ಯಾಂಕ್ ದರೋಡೆಯ ಅಪರಾಧಿಗಳನ್ನು ಶೀಘ್ರದಲ್ಲಿ ಬಂಧಿಸಲಾಗುವುದು ಎಂದರು.

ಈ ಸುದ್ದಿಯನ್ನೂ ಓದಿ : CM Siddaramaiah: ಹಿಂದುಳಿದವರು-ದಲಿತರು BJP, RSS, ABVP ಸೇರೋದು ಯಾಕೆ?: ಸಿಎಂ ಸಿದ್ದರಾಮಯ್ಯ ಬೇಸರ

ಮಳೆ ಹಾನಿ ಪರಿಹಾರ ನೀಡಲು ಪ್ರಧಾನಿ ಮೋದಿಗೆ ಮನವಿ

ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಬಗ್ಗೆ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಅಧಿಕ ಮಳೆಯುಂಟಾಗಿದ್ದು, ಅದರಿಂದ ಹಾನಿಗೆ ಪರಿಹಾರ ಕೇಳಲಾಗಿದೆ. ಕಬ್ಬು ಬೆಳೆಗಾರರ ಸಮಸ್ಯೆ ಹಾಗೂ ರೈತರು, ಕಾರ್ಖಾನೆ ಮಾಲೀಕರೊಂದಿಗೆ ನಡೆಸಿದ ಚರ್ಚೆಗಳ ಬಗ್ಗೆ ವಿವರಿಸಲಾಯಿತು. ಶೇ.11.25 ಇಳುವರಿಯಿರುವ ಕಬ್ಬು ಬೆಳೆಯ ಒಂದು ಟನ್‌ಗೆ (ಕಟಾವು ಮತ್ತು ಸಾಗಣೆ ವೆಚ್ಚ ಹೊರತುಪಡಿಸಿ) 3,300 ರೂ. ನೀಡುವ ತೀರ್ಮಾನಕ್ಕೆ ರೈತರು ಹಾಗೂ ಕಾರ್ಖಾನೆಯವರು ಸಮ್ಮತಿಸಿದ್ದಾರೆ ಎಂದರು.