ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಮಲೆ ಮಹದೇಶ್ವರ ಬೆಟ್ಟದ ಬಳಿ ಚಿರತೆ ದಾಳಿ; ಪಾದಯಾತ್ರೆ ತೆರಳುತ್ತಿದ್ದ ಭಕ್ತ ಸಾವು

Leopard Attack in Male Mahadeshwara Hills: ಮಂಡ್ಯ ಜಿಲ್ಲೆಯ ಚಿರನಹಳ್ಳಿ ಗ್ರಾಮದ ಯುವಕನೊಬ್ಬ ಚಿರತೆ ದಾಳಿಗೆ ಬಲಿಯಾಗಿದ್ದಾನೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನ ತಾಳುಬೆಟ್ಟದಲ್ಲಿ ಪಾದಯಾತ್ರೆ ತೆರಳುವಾಗ ಚಿರತೆ ದಾಳಿ ಮಾಡಿ ಕೊಂದಿದೆ.

ಚಿರತೆ ದಾಳಿಯಿಂದ ಮೃತಪಟ್ಟ ಪ್ರವೀಣ್‌.

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟಕ್ಕೆ (Male Mahadeshwara Hills) ಪಾದಯಾತ್ರೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ (leopard attack) ಬಲಿಯಾದ ಘಟನೆ ಬುಧವಾರ ಮುಂಜಾನೆ ನಡೆದಿದ್ದು, ಬೆಳಗ್ಗೆ 11 ಗಂಟೆ ಸುಮಾರಿಗೆ ಶವ ಪತ್ತೆಯಾಗಿದೆ. ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನ ತಾಳುಬೆಟ್ಟದಲ್ಲಿ ಘಟನೆ ಜರುಗಿದೆ.

ಮಂಡ್ಯ ಜಿಲ್ಲೆಯ ಚಿರನಹಳ್ಳಿ ಗ್ರಾಮದ ಪ್ರವೀಣ್ (30) ಚಿರತೆ ದಾಳಿಗೆ ಬಲಿಯಾದ ಪಾದಯಾತ್ರಿ. ಮಲೆಮಹದೇಶ್ವರ ಬೆಟ್ಟಕ್ಕೆ ಮಂಡ್ಯ ಚಿರನಹಳ್ಳಿ ಗ್ರಾಮ ಹಾಗೂ ಸುತ್ತಮುತ್ತಲ ಗ್ರಾಮಗಳಿಂದ ನೂರಾರು ಜನರು ಪಾದಯಾತ್ರೆ ತೆರಳಿದ್ದರು. ಮಂಗಳವಾರ ರಾತ್ರಿ ತಾಳುಬೆಟ್ಟದಲ್ಲಿ ವಾಸ್ತವ್ಯ ಹೂಡಿ, ಬುಧವಾರ ಬೆಳಗ್ಗೆ ಅಲ್ಲಿಂದ ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮೂಲಕ ಹೊರಟಿದ್ದರು.

ಈ ಸಂದರ್ಭದಲ್ಲಿ, ಬುಧವಾರ ಬೆಳಗ್ಗೆ ರಂಗಸ್ವಾಮಿ ಒಡ್ಡಿನ ಸಮೀಪದ ಪಾದಯಾತ್ರಿಕರ ಮಾರ್ಗದಲ್ಲಿ ಕುಳಿತಿದ್ದ ಚಿರತೆಯು ಏಕಾಏಕಿ ಪ್ರವೀಣ್ ಮೇಲೆ ದಾಳಿ ಮಾಡಿ ಎಳೆದೊಯ್ದಿದೆ. ಜತೆಯಲ್ಲಿದ್ದ ಐವರು ಸ್ನೇಹಿತರು ಕಿರುಚಾಡಿಕೊಂಡು ಚಿರತೆ ಓಡಿಸಲು ಎಷ್ಟೇ ಪ್ರಯತ್ನಪಟ್ಟರೂ ಪ್ರವೀಣ್​​ನನ್ನು ಅರಣ್ಯದೊಳಗೆ ಎಳೆದೊಯ್ದಿದೆ ಎಂದು ತಿಳಿದು ಬಂದಿದೆ.

ಭಯಭೀತರಾದ ಸ್ನೇಹಿತರು ಮಲೆಮಹದೇಶ್ವರ ಬೆಟ್ಟ ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಶವವನ್ನು ಪತ್ತೆ ಹಚ್ಚಿದ್ದಾರೆ.

ರಾಯಚೂರಿನಲ್ಲಿ ಭೀಕರ ಸರಣಿ ಅಪಘಾತ; ಐವರು ಸ್ಥಳದಲ್ಲೇ ಸಾವು

ಮೈಸೂರಿನಲ್ಲಿ ಯುವಕನ ಬರ್ಬರ ಕೊಲೆ

ಮೈಸೂರು: ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವುದು ನಗರದ ಉದಯಗಿರಿ ಪೊಲೀಸ್​​​​ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ. ಗೌಸಿಯಾನಗರದ ಎಂ.ಡಿ.ಶಹಬಾಜ್​​ (26) ಕೊಲೆಯಾದ ಯುವಕ. ಬೀಡಿ ಕಾಲೊನಿಯಲ್ಲಿ ಮುಂಜಾನೆ ವೇಳೆ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಹಬಾಜ್​ ಫ್ಯಾಬ್ರಿಕೇಟರ್​ ಕೆಲಸ ಮಾಡಿಕೊಂಡಿದ್ದು, ಆಟೋ ಪಾರ್ಕಿಂಗ್​ ಮಾಡಲು ಸ್ಥಳಾವಕಾಶ ನೀಡುತ್ತಿದ್ದ ಎಂದು ತಿಳಿದು ಬಂದಿದೆ. ಐದಾರು ಮಂದಿ ಕೊಲೆ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಆರೋಪಿಗಳ ಪತ್ತೆಗೆ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ.

ಘಟನೆಯ ಬಗ್ಗೆ ನಗರ ಪೊಲೀಸ್​ ಆಯುಕ್ತೆ ಸೀಮಾ ಲಾಟ್ಕರ್ ಪ್ರತಿಕ್ರಿಯಿಸಿ, ಶಹಬಾಜ್​ನನ್ನು ಐದಾರು ಮಂದಿ ಸೇರಿ ಕೊಲೆ ಮಾಡಿದ್ದಾರೆ. ಮೃತನ ಅಣ್ಣ ನೀಡಿದ ದೂರಿನ ಅನ್ವಯ ಎಫ್‌ಐಆರ್ ದಾಖಲಾಗಿದೆ. ಆರೋಪಿಗಳ ಬಂಧನದ ನಂತರ ಸತ್ಯ ಹೊರಬರಲಿದೆ ಎಂದು ಮಾಹಿತಿ ನೀಡಿದರು. ಉದಯಗಿರಿ ಪೊಲೀಸ್​ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.