ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

DK Shivakumar: ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ: ಡಿಕೆ ಶಿವಕುಮಾರ್‌ ಮತ್ತೊಂದು ವಿವಾದ

ಚಾಮುಂಡಿ ಬೆಟ್ಟಕ್ಕೆ (Chamundi hill) ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ ಪ್ರಾರ್ಥನೆ ಮಾಡಿಕೊಳ್ಳುತ್ತಾರೆ. ಇದು ಹಿಂದೂಗಳ ಆಸ್ತಿಯಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಹೇಳಿದ್ದಾರೆ.

ಬೆಂಗಳೂರು: ಸದನದಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡುವ ಮೂಲಕ ತಮ್ಮದೇ ಪಕ್ಷದವರ ಕೆಂಗಣ್ಣಿಗೆ ತುತ್ತಾಗಿದ್ದ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಇದೀಗ ಡ್ಯಾಮೇಜ್‌ ಕಂಟ್ರೋಲ್‌ಗೆ ಇನ್ನೊಂದು ವಿವಾದಾಸ್ಪದ ಹೇಳಿಕೆ ನೀಡಿದ್ದಾರೆ. ಚಾಮುಂಡಿ ಬೆಟ್ಟಕ್ಕೆ (Chamundi hill) ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ ಪ್ರಾರ್ಥನೆ ಮಾಡಿಕೊಳ್ಳುತ್ತಾರೆ. ಇದು ಹಿಂದೂಗಳ ಆಸ್ತಿಯಲ್ಲ ಎಂದು ಹೇಳಿದ್ದಾರೆ. ಮೈಸೂರು ದಸರಾ (Mysuru Dasara) ಉದ್ಘಾಟನೆಗೆ ಬಾನು ಮುಷ್ತಾಕ್ (Banu Mushtaq) ಬೇಡ ಎಂಬ ಬಿಜೆಪಿ ‌ನಾಯಕರ ವಿರೋಧದ ಬಗ್ಗೆ ಅವರು ಪ್ರತಿಕ್ರಿಯಿಸುತ್ತಿದ್ದರು.

ಬೆಂಗಳೂರಿನ ವಿಧಾನಸೌಧದಲ್ಲಿ ನಿನ್ನೆ ಈ ವಿಚಾರವಾಗಿ ಪ್ರತಿಕ್ರಿಸಿದ ಅವರು, ನಾವುಗಳು ಮಸೀದಿ, ದರ್ಗಾಗಳಿಗೆ, ಜೈನರ ಬಸದಿಗಳಿಗೆ, ಚರ್ಚ್, ಗುರುದ್ವಾರಗಳಿಗೆ ಹೋಗುತ್ತೇವೆ. ನಾವು ಗುರುದ್ವಾರಕ್ಕೆ ಹೋಗೋದನ್ನ ಯಾರಾದರೂ ತಪ್ಪಿಸಿದ್ದಾರಾ? ಹಿಂದೂ ದೇವಸ್ಥಾನಗಳಿಗೆ ಅವರುಗಳು ಬರುವುದನ್ನು ನಾವು ವಿರೋಧಿಸಿದ್ದೇವೆಯೇ? ಯಾವುದೇ ಶ್ರದ್ದಾ ಕೇಂದ್ರಗಳಿಗೆ ಯಾರು ಬೇಕಾದರೂ ಹೋಗಿ ಬರಬಹುದು ಎಂದರು.

ನಮ್ಮದು ಜಾತ್ಯತೀತ ರಾಷ್ಟ್ರ. ನಮ್ಮ ಸಂವಿಧಾನದ ಮೂಲಕ ಎಲ್ಲರಿಗೂ ಅವಕಾಶ, ಸ್ವಾತಂತ್ರ್ಯ ಕಲ್ಪಿಸಲಾಗಿದೆ.‌ ಎಲ್ಲರಿಗೂ ಸಂವಿಧಾನದ ರಕ್ಷಣೆಯಿದೆ. ಎಲ್ಲರಿಗೂ ಅವರವರ ನಂಬಿಕೆ ಮೇಲೆ ವಿಶ್ವಾಸವಿದೆ. ಮುಸ್ಲಿಂ ಅಥವಾ ಕ್ರಿಶ್ಚಿಯನ್ ಹೆಣ್ಣು, ಹಿಂದೂ ಅಥವಾ ಇತರೇ ಧರ್ಮದ ಗಂಡಿಗೆ ಜನಿಸಿದ ಮಕ್ಕಳು ತಮಗೆ ಬೇಕಾದ್ದನ್ನು ಅನುಸರಿಸುತ್ತಾರೆ ಎಂದರು.

ಇದನ್ನೂ ಓದಿ: DK Shivakumar: ಸದನದಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದಕ್ಕೆ ಡಿಕೆ ಶಿವಕುಮಾರ್‌ ಕ್ಷಮೆಯಾಚನೆ

ಹರೀಶ್‌ ಕೇರ

View all posts by this author